ಬೆಂಗಳೂರು: ಅನಾರೋಗ್ಯದೊಂದಿಗೆ ಸತತ ಹೋರಾಟ ನಡೆಸುತ್ತಲೇ ಇದ್ದ ಕನ್ನಡ ಚಿತ್ರರಂಗದ ಖ್ಯಾತ ನಟ ಹರೀಶ್ ರಾಯ್ (Actor Harish Roy) ನಿಧನ ಹೊಂದಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು.
‘ಓಂ’, ‘ನಲ್ಲ’ ಸೇರಿದಂತೆ ‘ಕೆಜಿಎಫ್’, ‘ಕೆಜಿಎಫ್ 2’ ಹಾಗೂ ಕನ್ನಡದ ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ ನಟಿಸಿದ್ದ ಹರೀಶ್ ರಾಯ್ ಅವರು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು.
ನಟರಾದ ದರ್ಶನ್, ಯಶ್, ದೃವ ಸರ್ಜಾ ಸೇರಿದಂತೆ ಹಲವರು ಹರೀಶ್ ರಾಯ್ ಅವರಿಗೆ ಆರ್ಥಿಕ ಸಹಾಯ ಮಾಡಿದ್ದರು. ಆದರೆ ಅಂತಿಮವಾಗಿ ಹರೀಶ್ ಅವರು ಇಂದು ನಿಧನ ಹೊಂದಿದ್ದಾರೆ.