Where did Achchedin go? Ask Kumaraswamy what happened to the 15 lakhs in the account: DCM D.K. Shivakumar

ನವೆಂಬರ್ ಕ್ರಾಂತಿ ಇಲ್ಲ, ಕ್ರಾಂತಿ ಏನಿದ್ದರೂ 2028ರಲ್ಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: “ನವೆಂಬರ್ ಕ್ರಾಂತಿನೂ ಇಲ್ಲ, ಡಿಸೆಂಬರ್ ಕ್ರಾಂತಿನೂ ಇಲ್ಲ, ಜನವರಿ, ಫೆಬ್ರವರಿಗೂ ಆಗುವುದಿಲ್ಲ. ಕ್ರಾಂತಿ ಆಗುವುದು ಏನಿದ್ದರೂ 2028 ರಲ್ಲಿ, ಅದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಹೇಳಿದ್ದಾರೆ.

ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.

ನವೆಂಬರ್ ಕ್ರಾಂತಿ ಹಾಗೂ ಈ ತಿಂಗಳು 22 ಹಾಗೂ 26 ರ ದಿನಾಂಕದ ಬಗ್ಗೆ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, “ಯಾರೋ ಸುಮ್ಮನೆ ಬರೆದಿದ್ದಾರೆ. ಪಕ್ಷ ನಮಗೆ ಬಿಹಾರ ಚುನಾವಣೆ ಸೇರಿದಂತೆ ಅನೇಕ ಜವಾಬ್ದಾರಿಗಳನ್ನು ನೀಡಿದ್ದು, ನಾವು ಅದನ್ನು ಮಾಡುತ್ತಿದ್ದೇವೆ. ಇದರ ಹೊರತಾಗಿ ಬೇರೆ ಯಾವುದೇ ಕ್ರಾಂತಿ ಆಗುವುದಿಲ್ಲ” ಎಂದು ತಿಳಿಸಿದರು.

ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, ನಾನು ಯಾರನ್ನೂ ಭೇಟಿ ಮಾಡುವುದಿಲ್ಲ. ನನ್ನ ಬಳಿ ಯಾರೂ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಿಲ್ಲ. ನನಗೆ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮ ಇಲ್ಲ.

ಪಕ್ಷ ಸಂಘಟನೆ ವಿಚಾರವಾಗಿ ಚರ್ಚೆ ಮಾಡಲಾಗುವುದು. ಮತಗಳ್ಳತನ ವಿಚಾರವಾಗಿ ನಿನ್ನೆ ರಾತ್ರಿಯೂ ಸಭೆ ಮಾಡಿದ್ದೇವೆ, ಇಂದು ಸಭೆ ಮಾಡಿದ್ದೇವೆ. ಸಂಪುಟ ವಿಸ್ತರಣೆ ಹಾಗೂ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಏನಿದ್ದರೂ ನಿಮ್ಮದು (ಮಾಧ್ಯಮ).

ನಾಯಕತ್ವ ಬದಲಾವಣೆ ಬಗ್ಗೆ ನಾನು ಏನಾದರೂ ಹೇಳಿದ್ದೇನಾ? ಸಿಎಂ ಏನಾದರೂ ಹೇಳೀದ್ದಾರಾ? ಪಕ್ಷ ಏನು ಹೇಳುತ್ತದೆಯೋ ಅದನ್ನು ಕೇಳಿಕೊಂಡು ಹೋಗುತ್ತೇವೆ ಎಂದು ಹೇಳಿದ್ದೇವೆ.

ಸಿಎಂ ಐದು ವರ್ಷ ಇರಬೇಕು ಎಂದರೆ ಐದು ವರ್ಷ ಇರುತ್ತಾರೆ. ಹತ್ತು ವರ್ಷ ಇರಬೇಕು ಎಂದರೆ ಹತ್ತು ವರ್ಷ ಇರುತ್ತಾರೆ. 15 ವರ್ಷ ಇರಬೇಕು ಎಂದರೆ 15 ವರ್ಷ ಇರುತ್ತಾರೆ. ನಮಗೆ ಕೊಟ್ಟ ಕೆಲಸ ಮಾಡಿಕೊಂಡು ಹೋಗುತ್ತಿರಬೇಕು. ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ರೇಖೆ ಬಿಟ್ಟು ನಾನು ಎಂದಿಗೂ ಹೋಗುವುದಿಲ್ಲ ಎಂದು ತಿಳಿಸಿದರು.

ಸಂಪುಟ ವಿಸ್ತರಣೆ ಆಕಾಂಕ್ಷೆಯಲ್ಲಿರುವವರಿಗೆ ಏನು ಹೇಳುತ್ತೀರಾ ಎಂದು ಕೇಳಿದಾಗ, “ಅದೆಲ್ಲವನ್ನು ದೆಹಲಿ ನಾಯಕರು ಯಾವಾಗ, ಯಾವ ರೀತಿ ಮಾಡಬೇಕೋ ಮಾಡುತ್ತಾರೆ” ಎಂದರು.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!