ಮೈಸೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಕುಟುಂಬ ಸಮೇತ ಇಂದು ನಂಜನಗೂಡು ಕ್ಷೇತ್ರಕ್ಕೆ ತೆರಳಿ ಶ್ರೀಕಂಠೇಶ್ವರ ಸ್ವಾಮಿ ಹಾಗೂ ಶ್ರೀ ಪಾರ್ವತಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಪತ್ನಿ ಅನಿತಾ ಕುಮಾರಸ್ವಾಮಿ ಜೊತೆಯಲ್ಲಿ ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಬೆಲ್ಲದ ತುಲಾಭಾರ ಮಾಡಿಸಿಕೊಂಡು ಹರಕೆ ತೀರಿಸಿದ್ದಾರೆ.
ಅರೋಗ್ಯ ಸುಧಾರಣೆ ಆದ ಹಿನ್ನೆಲೆ ಕುಟುಂಬ ಸಮೇತ ಆಗಮಿಸಿ ಹರಕೆ ತೀರಿಸಿದ್ದಾರೆ.
ಪತಿಯ ಆರೋಗ್ಯ ಚೇತರಿಕೆಗಾಗಿ ಹಾರೈಸಿ ಶ್ರೀಕಂಠೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ತುಲಾಭಾರ ಮಾಡಿಸುವ ಹರಕೆಯನ್ನು ಪತ್ನಿ ಅನಿತಾ ಹೊತ್ತಿದ್ದರು ಎನ್ನಲಾಗಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಲುವಾಗಿ ಮೈಸೂರಿಗೆ ಭೇಟಿ ನೀಡ್ತಿರೋ ಹಿನ್ನೆಲೆಯಲ್ಲಿ ಇವತ್ತು ದೇಗುಲಕ್ಕೆ ಭೇಟಿ ನೀಡಿದ್ದಾರೆ.
ಇನ್ನು ಕೇಂದ್ರ ಸಚಿವ ಕುಮಾರಸ್ವಾಮಿ ದಂಪತಿಗೆ ಸ್ಥಳೀಯ ಜೆಡಿಎಸ್ ನಾಯಕರು ಸಾಥ್ ನೀಡಿದ್ದಾರೆ. ಕುಮಾರಸ್ವಾಮಿ ಆಗಮನ ಹಿನ್ನೆಲೆ ದೇಗುಲದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು.