ಬೆಂಗಳೂರು: ರಾಜ್ಯದ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ (Gruhalakshmi) ಫಲಾನುಭವಿಗಳಿಗೆ ಲಾಭ ತಂದು ಕೊಡುವ ಉದ್ದೇಶ ದಿಂದ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ಆರಂಭಿಸಲಾಗುತ್ತಿದ್ದು, ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಸೊಸೈಟಿ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ವರ್ ಹೇಳಿದ್ದಾರೆ.
ರಾಜ್ಯಮಟ್ಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವಿಶ್ವ ದಲ್ಲಿಯೇ ದೊಡ್ಡ ದಾದ ಗೃಹ ಲಕ್ಷ್ಮಿ ಯೋಜನೆಯನ್ನು ಯಶಸ್ವಿಯಾಗಿ ಜಾರಿ ಗೊಳಿಸಲಾಗಿದೆ. 2 ಸಾವಿರ ಫಲಾನುಭವಿಗಳ ಹಣ ಸಂಗ್ರಹಿಸಲಾಗಿದ್ದು, ಇದು ಬಹಳ ದೊಡ್ಡ ಜವಾಬ್ದಾರಿಯಾಗಿದೆ.
ಗೃಹಲಕ್ಷ್ಮಿ ಯೋಜನೆಯ ಮಾದರಿಯಲ್ಲೇ ಗೃಹಲಕ್ಷ್ಮಿ ಬ್ಯಾಂಕ್ ಕೂಡ ಜನಮನ್ನಣೆಗಳಿಸಲು ಅಧಿಕಾರಿಗಳು ಶ್ರಮ ಹಾಕಬೇಕು. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟಕ್ಕೂ ಗೃಹಲಕ್ಷ್ಮಿ ಸೊಸೈಟಿಯನ್ನು ವಿಸ್ತರಿಸಲಾಗುವುದು ಎಂದು ಹೇಳಿದರು.
ಗೃಹಲಕ್ಷ್ಮಿ ಸೊಸೈಟಿ ಮೂಲಕ ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಸಾಲಸೌಲಭ್ಯ ನೀಡಲಾಗುವುದು. ಸೊಸೈಟಿ ಯಶಸ್ಸಿಗೆ ಎಲ್ಲರ ಸಹಕಾರ, ಜವಾಬ್ದಾರಿ ಇರಬೇಕು. ನಾವು ಯಾರಿಂದಲೂ ಹಣ ಪಡೆಯುವುದಿಲ್ಲ, ಫಲಾನುಭವಿಗಳಿಂದ ಫೋನ್ ಪೇ ಮೂಲಕ ಹಣ ಸಂಗ್ರಹಿಸಲಾಗುವುದು.
ಗೃಹಲಕ್ಷ್ಮಿ ಯಶಸ್ಸಿಗೆ ಯಾವ ರೀತಿ ಎಲ್ಲರೂ ಶ್ರಮ ವಹಿಸಿದ್ದೀರೋ ಹಾಗೆಯೇ ಗೃಹಲಕ್ಷ್ಮಿ ಸೊಸೈಟಿಯ ಯಶಸ್ಸಿಗೂ ಹೆಚ್ಚಿನ ನಿಗಾ ವಹಿಸಬೇಕು ಎಂದು ತಿಳಿಸಿದರು.