There will be neither revolution nor vomiting in November: H.D. Kumaraswamy

ನವೆಂಬರ್ ನಲ್ಲಿ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ: ಹೆಚ್.ಡಿ. ಕುಮಾರಸ್ವಾಮಿ

ಮೈಸೂರು: ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲಾಗದ ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಗಂಭೀರ ಆರೋಪ ಮಾಡಿದರು.

ಮೈಸೂರಿನಲ್ಲಿ ಶುಕ್ರವಾರ ದಿಶಾ ಸಮಿತಿ ಸಭೆ ಆರಂಭಕ್ಕೆ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ರೈತರ ಕಷ್ಟಕ್ಕೆ ಸ್ಪಂದಿಸಬೇಕು ಎನ್ನುವ ಇರಾದೆ ಈ ಸರ್ಕಾರಕ್ಕೆ ಇಲ್ಲ. ಪ್ರತಿಯೊಂದು ವಿಷಯವನ್ನೂ ಕೇಂದ್ರದ ಮೇಲೆ ಹಾಕಿ ನುಣಚಿಕೊಳ್ಳುವ ಕೆಲಸ ಮಾಡುತ್ತಿದೆ ಎಂದರು.

ಮುಖ್ಯಮಂತ್ರಿಗಳು ಮನಸು ಮಾಡಿದರೆ ಇದು ಅತ್ಯಂತ ಚಿಕ್ಕ‌ ವಿಚಾರ. ಕೆಲವು ನಿಮಿಷಗಳಲ್ಲಿ ಬಗೆಹರಿಸಬಹುದಾದ ವಿಷಯ ಇದಾಗಿದೆ. ಆದರೆ, ಸಿಎಂ ಅವರು ಪ್ರತಿಯೊಂದಕ್ಕೂ ರಾಜಕೀಯ ಮಾಡುತ್ತಿದ್ದಾರೆ. ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದಾರೆ. ದೇಶದ ಯಾವ ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಪ್ರಧಾನಮಂತ್ರಿ ಮಧ್ಯಸ್ಥಿಕೆ ವಹಿಸಿದ್ದಾರೆ ಹೇಳಿ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ಈ ಸಮಸ್ಯೆ ವಿಚಾರದಲ್ಲಿ ಜನ ಪ್ರತಿನಿಧಿಗಳನ್ನು ಕರೆದು ಮಾತನಾಡುವುದು ಏನಿದೆ? ಮುಖ್ಯಮಂತ್ರಿಗಳೇ ನೇರವಾಗಿ ನಿರ್ಧಾರ ಕೈಗೊಳ್ಳಬಹುದು. ನೇರವಾಗಿ ಬೆಳೆಗಾರರ ಜತೆ ಮಾತನಾಡಿ ಬಿಕ್ಕಟ್ಟನ್ನು ಬಗೆಹರಿಸಬಹುದು. ಅದನ್ನು ಮಾಡದೇ ಕೇವಲ ರಾಜಕೀಯ ಮಾಡುವುದರಲ್ಲಿ ಈ ಸರಕಾರ ಮುಳುಗಿದೆ ಎಂದು ಅವರು ಟೀಕಿಸಿದರು.

ಸಿಎಂ ನೇರವಾಗಿ, ಮುಕ್ತವಾಗಿ ಕಬ್ಬು ಬೆಳೆಗಾರರ ಪರವಾಗಿ ನಿರ್ಧಾರ ತೆಗೆದುಕೊಳ್ಳಬಹುದು. ಸಿಎಂ ಅವರು ಆ ಕೆಲಸ ಮಾಡುವುದು ಬಿಟ್ಟು ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ.

ಬೆಳಗಾವಿಯ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಸಕ್ಕರೆ ಲಾಬಿಯ ಒತ್ತಡಕ್ಕೆ ಅವರು ಮಣಿದಿರುವ ಸಾಧ್ಯತೆ ಇದೆ. ಅಂತಹ ಒತ್ತಡಕ್ಕೆ ಮಣಿಯದೆ ಮೊದಲು ಬೆಳೆಗಾರರ ಹಿತ ಕಾಯುವ ಕೆಲಸ ಮಾಡಬೇಕು ಎಂದು ಸಚಿವ ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಜೆಡಿಎಸ್ ನಾಯಕರು ಸಕ್ಕರೆ ಕಾರ್ಖಾನೆ ಹೊಂದಿಲ್ಲ

ಬೆಳಗಾವಿಯ ಜಿಲ್ಲೆಯಲ್ಲಿ ಎಲ್ಲಾ ಪಕ್ಷಗಳ ನಾಯಕರು ಸಕ್ಕರೆ ಕಾರ್ಖಾನೆಗಳನ್ನು ಹೊಂದಿದ್ದಾರೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಆಗಿದ್ದನ್ನು ಗಮನಿಸಿದ್ದೇನೆ. ಜೆಡಿಎಸ್ ಪಕ್ಷದ ಯಾವ ನಾಯಕ ಕೂಡ ಕಬ್ಬು ಕಾರ್ಖಾನೆ ಹೊಂದಿಲ್ಲ.

ಆ ಪೈಕಿ ಬಂಡೆಪ್ಪ ಕಾಶಂಪೂರ ಅವರ ಕಾರ್ಖಾನೆ ಒಂದಿತ್ತು. ಕೆಲವು ದಿನಗಳ ಹಿಂದೆ ಅವರು ಅದನ್ನು ಕೂಡ ಮಾರಿದ್ದಾರೆ. ಹೀಗಾಗಿ ನಮ್ಮ ಪಕ್ಷದಲ್ಲಿ ಯಾರೊಬ್ಬರ ಬಳಿಯೂ ಸಕ್ಕರೆ ಕಾರ್ಖಾನೆ ಇಲ್ಲ ಎಂದು ಕೇಂದ್ರ ಸಚಿವರು ಹೇಳಿದರು.

ನವೆಂಬರ್ ನಲ್ಲಿ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಹಾಗೂ ನವೆಂಬರ್ ಕ್ರಾಂತಿ ಬಗ್ಗೆ ಕೇಂದ್ರ ಸಚಿವರ ಗಮನ ಸೆಳೆದಾಗ ಅವರು ಹೇಳಿದ್ದಿಷ್ಟು; ನವೆಂಬರ್ ನಲ್ಲಿ ಯಾವ ಕ್ರಾಂತಿಯೂ ಆಗಲ್ಲ ವಾಂತಿಯೂ ಆಗಲ್ಲ. ನನಗೆ ಸಿದ್ದರಾಮಯ್ಯನವರ ಗುಣ ಗೊತ್ತಿದೆ. ಅವರು ನಮ್ಮ ಪಕ್ಷದಲ್ಲೇ ಇದ್ದಾಗಲೇ ಅವರ ಗುಣ ತಿಳಿದುಕೊಂಡಿದ್ದೇನೆ. ಹೀಗಾಗಿ ಯಾವ ಬದಲಾವಣೆಯೂ ಅಗುವುದಿಲ್ಲ ಎಂದರು.

ಡಿ.ಕೆ ಶಿವಕುಮಾರ್ ಯಾವಾಗಲೂ ದೇವರ ಜೊತೆ ಮಾತನಾಡುತ್ತಾರೆ. ದೇವರು ಅವರಿಗೆ ಏನೇನು ಹೇಳಿದ್ದಾನೋ ನಮಗೇನು ಗೊತ್ತು? ಅದೇನಿದ್ದರೂ ಡಿ.ಕೆ. ಶಿವಕುಮಾರ್ ಹಾಗೂ ದೇವರಿಗೆ ಸಂಬಂಧಪಟ್ಟ ವಿಚಾರ. ಹಾಗಂತ ಡಿಕೆಶಿ ಅವವ್ರೇ ಹೇಳಿದ್ದಾರೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

2028ಕ್ಕೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಡಿ.ಕೆ. ಶಿವಕುಮಾರ್ ಹೇಳಿಕೆ ವಿಚಾರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು, 20, 10 ವರ್ಷ ನಾವೇ ಎಂದು ಹೇಳಿದವರು ಏನಾಗಿದ್ದಾರೆ ಎಂಬುದು ನನಗೆ ಗೊತ್ತಿದೆ. 2028ಕ್ಕೆ ಏನೇನಾಗುತ್ತೊ ಯಾರಿಗೆ ಗೊತ್ತು ಬಿಡಿ ಎಂದು ಲೇವಡಿ ಮಾಡಿದರು.

ಸಿಎಂ ಸಿದ್ದರಾಮಯ್ಯ ಅವರು ಮೈಸೂರು ನಗರವನ್ನು ಗ್ರೇಟರ್ ಮೈಸೂರು ಮಾಡುತ್ತಾರೆ ಎಂದು ಹೇಳಿದ್ದಾರೆ ಎಂಬ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ಇದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವಿನ ಪೈಪೋಟಿ. ಡಿಕೆಶಿ ಮೇಲಿನ ಪೈಪೋಟಿಗಾಗಿ ಸಿದ್ದರಾಮಯ್ಯ ಅವರು ಗ್ರೇಟರ್ ಮೈಸೂರು ಘೋಷಣೆ ಮಾಡಿದ್ದಾರೆ.

ಅಲ್ಲಿ ಡಿ.ಕೆ. ಶಿವಕುಮಾರ್ ಅವರು ಗ್ರೇಟರ್ ಬೆಂಗಳೂರು ಘೋಷಣೆ ಮಾಡಿದ್ದಾರೆ. ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ಗ್ರೇಟರ್ ಮೈಸೂರು ಎನ್ನುತ್ತಿದ್ದಾರೆ. ಯಾವ ಗ್ರೇಟರ್ ಕೂಡಾ ಆಗುವುದಿಲ್ಲ. ಇವರು ಸುಮ್ಮನೆ ಕಾಲಹರಣ ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು.

ರಾಜಕೀಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ (Prahlad Joshi) ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ

[ccc_my_favorite_select_button post_id="118281"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!