ಧಾರವಾಡ: ಧಾರವಾಡದಲ್ಲಿ 2023 ರಲ್ಲಿ ಐಟಿಎಫ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ಬೇರೆ ಬೇರೆ 30 ದೇಶಗಳಿಂದ ಟೆನ್ನಿಸ್ (Tennis) ಆಟಗಾರರು ಈ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದರು. ಇದು ನಮ್ಮ ಧಾರವಾಡ ಜಿಲ್ಲೆಯ ಹೆಮ್ಮೆಯ ವಿಷಯ ಎಂದು ಸಚಿವ ಸಂತೋಷ್ ಎಸ್. ಲಾಡ್ (Santosh lad) ಅವರು ಹೇಳಿದರು.
ಅವರು ಇಂದು (ನ.07) ಧಾರವಾಡ ಡಿಡಿಎಲ್‍ಟಿಎ ಆವರಣದ ರಾಜ್ಯಾಧ್ಯಕ್ಷ ಪೆವಲಿನ್‍ದಲ್ಲಿ ಜರುಗಿದ ರಾಜ್ಯ ಮಟ್ಟದ ಪುರುಷರ ಲಾನ್ ಟೆನ್ನಿಸ್ ಪಂದ್ಯಾವಳಿಯನ್ನು ಉದ್ಘಾಟಿಸಿ, ಮಾತನಾಡಿದರು.
ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಈ ಬಾರಿ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಷ್ಠಿತ ಪಂದ್ಯಾವಳಿನಲ್ಲಿ 300ಕ್ಕೂ ಹೆಚ್ಚು ಕ್ರೀಡಾಪಟುಗಳು ಧಾರವಾಡದಿಂದ ಭಾಗವಹಿಸಿದ್ದು, ಇದು ರಾಜ್ಯದಲ್ಲಿ ಟೆನ್ನಿಸ್ ಕ್ರೀಡೆಯ ಜನಪ್ರಿಯತೆಯನ್ನು ಎತ್ತಿ ಹಿಡಿದಿದೆ ಎಂದು ಅವರು ತಿಳಿಸಿದರು.
ಕ್ರೀಡೆಯು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅತ್ಯಗತ್ಯ. ಕ್ರೀಡಾ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ಧಾರವಾಡ ಇದೀಗ ಟೆನ್ನಿಸ್ ಕ್ರೀಡೆಯಲ್ಲಿಯೂ ಮುಂಚೂಣಿಗೆ ಬರುತ್ತಿದೆ. ರಾಜ್ಯದ ರಾಜಧಾನಿ ಬೆಂಗಳೂರಿನ ನಂತರ ಬರೋಬ್ಬರಿ ಎಂಟು ಟೆನ್ನಿಸ್ ಕೋರ್ಟ್‍ಗಳನ್ನು ಹೊಂದಿರುವ ಏಕೈಕ ನಗರ ಎಂಬ ಹೆಗ್ಗಳಿಕೆಗೆ ಧಾರವಾಡ ಪಾತ್ರವಾಗಿದೆ ಎಂದು ಸಚಿವರು ಹೇಳಿದರು.
ಮಕ್ಕಳಲ್ಲಿ ಕ್ರೀಡಾ ಮನೋಭಾವ ಬೆಳೆಸಲು ಮತ್ತು ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ನಾವೆಲ್ಲರೂ ಬದ್ಧರಾಗಿದ್ದೇವೆ. ಧಾರವಾಡದಲ್ಲಿ ಕ್ರೀಡಾ ವಾತಾವರಣವನ್ನು ಮತ್ತಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಮಹತ್ವದ್ದು, ಇದರಿಂದಾಗಿ ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಮಕ್ಕಳಿಗೆ ಉತ್ತಮ ಅವಕಾಶಗಳು ದೊರೆಯುತ್ತವೆ ಎಂದು ಹೇಳಿದರು.
ಶಾಸಕ ಅರವಿಂದ ಚಂದ್ರಕಾಂತ ಬೆಲ್ಲದ ಅವರು ಮಾತನಾಡಿ, ಧಾರವಾಡವು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆಯನ್ನು ಕಾಣುತ್ತಿದೆ. ಕ್ರೀಡಾ ಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ಸಂತೋಷ ತಂದಿದೆ ಎಂದು ತಿಳಿಸಿದರು.
ಧಾರವಾಡವು ಕ್ರೀಡೆಯ ಚುಕ್ಕಾಣಿಯನ್ನು ಹಿಡಿದಿದೆ. ಕ್ರೀಡಾ ಕ್ಷೇತ್ರದಲ್ಲಿ ಧಾರವಾಡದ ಯುವಜನರು ಉತ್ತಮ ಸಾಧನೆ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಕ್ರೀಡೆಯಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲು ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದರು.
ನಗರದ ಹೃದಯಭಾಗದಲ್ಲಿರುವ ಐತಿಹಾಸಿಕ ಜಿಮ್ ಖಾನಾ ಕ್ಲಬ್‍ನ ಸಮಗ್ರ ಜೀರ್ಣೋದ್ಧಾರ ಮತ್ತು ಅಭಿವೃದ್ಧಿಗೆ ಕ್ರಮಕೈಗೊಳ್ಳುವಂತೆ ಸಚಿವರಲ್ಲಿ ಮನವಿ ಮಾಡಿಕೊಂಡರು. ಈ ಕ್ಲಬ್ ಬ್ರಿಟಿಷರ ಕಾಲದಿಂದಲೂ ತನ್ನದೇ ಆದ ಮಹತ್ವವನ್ನು ಹೊಂದಿದ್ದು, ಕ್ರೀಡೆ, ಸಾಂಸ್ಕøತಿಕ ಮತ್ತು ಸಾಮಾಜಿಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ ಇದರ ಅಭಿವೃದ್ಧಿಪಡಿಸಬೇಕೆಂದು ತಿಳಿಸಿದರು.
ಹುಬ್ಬಳ್ಳಿಯಲ್ಲಿ ಜಗತ್ತಿನ ಅಂತರಾಷ್ಟ್ರೀಯ ಆಟಗಳನ್ನು ಆಡಲು ಸೂಕ್ತವಾದ ಕ್ರೀಡಾಂಗಣವನ್ನು ನಿರ್ಮಾಣ ಮಾಡಲಾಗುತ್ತಿದೆ. ಇದರಿಂದಾಗಿ ನಮ್ಮ ಭಾಗದ ಕ್ರೀಡಾಪಟುಗಳು ಮತ್ತು ಕ್ರೀಡಾಭಿಮಾನಿಗಳು ಬೆಂಗಳೂರಿಗೆ ಹೋಗುವ ಅನಿವಾರ್ಯತೆ ತಪ್ಪುತ್ತದೆ, ಬೆಂಗಳೂರಿನಲ್ಲಿರುವ ಕ್ರೀಡಾಂಗಣಗಳ ಮಾದರಿಯಲ್ಲಿ, ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ ಕ್ರೀಡಾಂಗಣವನ್ನು ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ನಿರ್ಮಿಸಲಾಗುವುದು ಎಂದು ಅವರು ಹೇಳಿದರು.
ವೇದಿಕೆಯಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಎಫ್.ಹೆಚ್.ಜಕ್ಕಪ್ಪನವರ, ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಾಪೌರರಾದ ಜ್ಯೋತಿ ಪಾಟೀಲ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ, ವಾ.ಕ.ರ.ಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ., ಹುಬ್ಬಳ್ಳಿ ಧಾರವಾಡ ಮಹಾನಗರ ಪೆÇಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಗುಂಜನ್ ಆರ್ಯ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ.ಎಸ್.ಘಾಳಿ ಮತ್ತು ಸಂತೋಷ ಬಿರಾದಾರ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಸಂತೋಷ ಶೆಟ್ಟಿ ಅವರು ಸ್ವಾಗತಿಸಿದರು. ಆರತಿ ದೇವಶಿಖಾಮಣಿ ಅವರು ನಿರೂಪಿಸಿ, ವಂದಿಸಿದರು.
ಕಾರ್ಯಕ್ರಮದಲ್ಲಿ ಟೆನ್ನಿಸ್ ತರಬೇತುದಾರರು, ನಿರ್ಣಾಯಕರು, ಸ್ಫರ್ಧಾಳುಗಳು, ಪಾಲಕರು ಉಪಸ್ಥಿತರಿದ್ದರು.