Kanakadasa was not just a devotee but a visionary: Cmsiddaramaiah

ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ‌ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಂತ ಕನಕದಾಸರ ಜಯಂತಿಯನ್ನು ಸರ್ಕಾರ ಶ್ರದ್ಧಾಭಕ್ತಿಗಳಿಂದ ರಾಜ್ಯಾದ್ಯಂತ ಆಚರಿಸುತ್ತಿದೆ. ಕನಕದಾಸರ ಸಂದೇಶಗಳನ್ನು ಈ ನಾಡಿನ ಜನತೆಗೆ ತಿಳಿಸುವಂತಹ ಪ್ರಯತ್ನವನ್ನು ಮಾಡುತ್ತಿದೆ ಎಂದರು.

ಕನಕದಾಸರು ವಿಶ್ವಮಾನವರು

ಕನಕದಾಸರು ಸಮಾಜದಲ್ಲಿ ಬದಲಾವಣೆಯನ್ನು ತರಲು ಬಯಸಿದ್ದರು. ಶ್ರೀಕೃಷ್ಣನ ಮಹಾ ಭಕ್ತರಾಗಿದ್ದು ಉಡುಪಿಯಲ್ಲಿ ಕನಕನ ಕಿಂಡಿ ನಿರ್ಮಾಣವಾಗಲು ಕಾರಣರಾದರು. ಅಂಥವರ ಜನ್ಮ ದಿನವನ್ನು ಇಂದು ಆಚರಿಸುವ ಮೂಲಕ ಜನತೆಗೆ ಕನಕದಾಸರ ಬಗ್ಗೆ ಜನರಿಗೆ ತಿಳಿಸಿಕೊಡಲಾಗುತ್ತಿದೆ. ಅವರು ಆಕಸ್ಮಿಕವಾಗಿ ಕುರುಬ ಜನಾಂಗದಲ್ಲಿ ಹುಟ್ಟಿದ್ದರೂ ವಿಶ್ವಮಾನವರಾದರು ಎಂದರು.

“ಕುಲಕುಲ ವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ” ಎಂದು ಹೇಳಿ ಮನುಷ್ಯರೆಲ್ಲರೂ ಒಂದೇ ಎಂದು ಸಾರಿದರು. ತಮ್ಮ ಕೀರ್ತನೆ, ಹಾಡುಗಳ ಮೂಲಕ ಈ ಸಂದೇಶವನ್ನು ತಿಳಿಸಿದ್ದಾರೆ. ಅವರನ್ನು ಗೌರವಿಸಿ ಸ್ಮರಿಸುವ ಕೆಲಸವನ್ನು ಸರ್ಕಾರ ಇಂದು ಮಾಡುತ್ತಿದೆ ಎಂದರು.

ಪ್ರತಿ ಟನ್ ಕಬ್ಬಿಗೆ 3300 ದರ ನಿಗದಿ ಸಕ್ಕರೆ ಕಾರ್ಖಾನೆ ಮಾಲೀಕರ ಸಮ್ಮುಖದಲ್ಲಿಯೇ ಆಗಿದೆ

ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರೊಂದಿಗೆ ಚರ್ಚಿಸಿ ನಿನ್ನೆ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರದ ಬಗ್ಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಸಕ್ಕರೆ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ ಅವರೆಲ್ಲರ ಸಮ್ಮುಖದಲ್ಲಿಯೇ ಈ ತೀರ್ಮಾನವಾಗಿದೆ. ಜೂನ್ ನಲ್ಲಿ ಜಿಲ್ಲಾಧಿಕಾರಿಗಳು ಹೇಳುವವರಿಗೆ 3200 ರೂ.ಗಳಿಗೆ ಅವರು ಒಪ್ಪಿರಲಿಲ್ಲ. ನಂತರದಲ್ಲಿ ಒಪ್ಪಿಕೊಂಡರು.50 ರೂ.ಗಳನ್ನು ಕಾರ್ಖಾನೆ ಮಾಲೀಕರು ಕೊಡಬೇಕೆಂದು ಬಹಳ ಸ್ಪಷ್ಟವಾಗಿ ಹೇಳಲಾಗಿದೆ. ಸರ್ಕಾರ 50 ರೂ. ಪ್ರೋತ್ಸಾಹಧನ ಪಾವತಿಸಲಿದೆ. 10.25 ರಿಕವರಿ ಇದ್ದರೆ 3100 ರೂ.ಜೊತೆಗೆ 100 ರೂ.ಗಳು, ಹಾಗೂ 11.25 ರಿಕವರಿ ಇದ್ದರೆ 3200 ಜೊತೆಗೆ 100 ರೂ. ಸೇರಿದಂತೆ ಒಟ್ಟು 3300 ಒದಗಿಸಲಾಗುವುದು ಎಂದರು.

ಆದೇಶ ಹೊರಡಿಸಲಾಗುವುದು

ಈ ಬಗ್ಗೆ ಸರ್ಕಾರದ ಆದೇಶ ಹೊರಡಿಸಲಾಗುವುದು. ಸಚಿವ ಶಿವಾನಂದ ಪಾಟೀಲರು ಅಲ್ಲಿಯೇ ಘೋಷಣೆ ಮಾಡಲಿದ್ದಾರೆ ಎಂದರು.

ಪ್ರತ್ಯೇಕ ಸಭೆ

ಸರ್ಕಾರ ಬೇರೆ ವಿಚಾರಗಳ ಬಗ್ಗೆ ಪ್ರತ್ಯೇಕ ಸಭೆ ನಡೆಸಲು ತೀರ್ಮಾನಿಸಿದೆ ಎಂದು ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದರು.

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾಥಿತ್ಯ: ಪರಿಶೀಲನೆ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾಥಿತ್ಯ ದೊರಕುತ್ತಿರುವ ಬಗ್ಗೆ ವೀಡಿಯೋ ವೈರಲ್ ಆಗಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ರಾಜಕೀಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ (Prahlad Joshi) ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ

[ccc_my_favorite_select_button post_id="118281"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!