Congress came to power in the state by stealing votes; H.D. Kumaraswamy makes serious allegations

ರಾಜ್ಯದಲ್ಲಿ ವೋಟ್ ಚೋರಿ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ; ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ರಾಜ್ಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವೋಟ್ ಚೋರಿ (Vote Chori) ಮೂಲಕವೇ ಅಧಿಕಾರಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ನೇರ ಆರೋಪ ಮಾಡಿದರು.

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಎರ್ನಾಕುಲಂ – ಕೆಎಸ್ ಆರ್ ಬೆಂಗಳೂರು ನಡುವೆ ಹೊಸದಾಗಿ ಆರಂಭವಾಗಿರುವ ವಂದೇ ಭಾರತ್ ರೈಲಿಗೆ ಸ್ವಾಗತ ಕೋರಿದ ನಂತರ ಕೇಂದ್ರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

ಬಿಜೆಪಿ ವೋಟ್ ಚೋರಿಯಿಂದಲೇ ಗೆದ್ದಿದೆ ಸಿಎಂ, ಡಿಸಿಎಂ ಆರೋಪ ಮಾಡಿರುವುದು ಸರಿಯಲ್ಲ. ನಿಜಕ್ಕೇ ಆರೋಪ ಮಾಡಿರುವವರೇ ವೋಟ್ ಚೋರಿ ಮಾಡಿ ರಾಜ್ಯದಲ್ಲಿ ಅಧಿಕಾರಕ್ಕೆ ಅಧಿಕಾರಕ್ಕೆ ಬಂದು ಸುಳ್ಳು ಆರೋಪ ಮಾಡುತ್ತಿದ್ದಾರೆ. ಹಾಗಾದ್ರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ 136 ಸೀಟು ಬರುತ್ತೆ ಎಂದು ಅಷ್ಟು ನಿಖರವಾಗಿ ಹೇಗೆ ಹೇಳಿದರು? ಆ ಸಂಖ್ಯೆ ಅವರಿಗೆ ಹೇಗೆ ಗೊತ್ತಿತ್ತು? ಯಾವ ಆಧಾರದಲ್ಲಿ 136 ಸೀಟು ಬರುತ್ತೆ ಅಂತ ಹೇಳಿದರು? ಮತ ಕಳ್ಳತನ ಮಾಡಿರುವುದೇ ಕಾಂಗ್ರೆಸ್ ಪಕ್ಷ. ಈಗ ನೋಡಿದರೆ ಮೋದಿ ಅವರನ್ನು ಟೀಕೆ ಮಾಡುತ್ತಿದೆ ಎಂದು ಕೇಂದ್ರ ಸಚಿವರು ವಾಗ್ದಾಳಿ ನಡೆಸಿದರು.

ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಬಿಜೆಪಿಗೆ 67 ಸೀಟು ಬಂದು ನಿಲ್ಲೋಕೆ ಚೋರಿ ಚೋರಿ ಮಾಡಿದ್ರಾ? ಕಾಂಗ್ರೆಸ್ ನವರು ಜನರನ್ನು ಯಾಮಾರಿಸಿ ಈ‌ ರೀತಿಯ ವ್ಯರ್ಥ ಹೇಳಿಕೆ ಕೊಟ್ಟು ಸಮಯ ವ್ಯರ್ಥ ಮಾಡುತ್ತಿದ್ದಾರೆ. ರಾಜ್ಯದಲಿ ಅನೇಕ ಗಂಭೀರ ಸಮಸ್ಯೆಗಳನ್ನು ಜನ ಎದುರಿಸುತ್ತಿದ್ದಾರೆ. ಅದರ ಬಗ್ಗೆ ಇವರ ಗಮನ ‌ಇರಬೇಕು ಎಂದು ಸಚಿವರು ತರಾಟೆಗೆ ತೆಗೆದುಕೊಂಡರು.

ಸಿಎಂ, ಡಿಸಿಎಂ ಜಂಟಿ ಪತ್ರಿಕಾಗೋಷ್ಠಿ ಅಂತ ಯಾರೋ ಹೇಳಿದರು. ನಾನೇನೋ ಯಾವುದೋ ಭಾರೀ ವಿಷಯ ಇರಬೇಕು ಎಂದುಕೊಂಡಿದ್ದೆ. ಆದರೆ ಸತ್ಯವಲ್ಲದ ವೋಟ್ ಚೋರಿ ಬಗ್ಗೆ ಇವರಿಬ್ಬರೂ ಮಾಧ್ಯಮಗೋಷ್ಠಿ ನಡೆಸಿರುವುದು ಸಣ್ಣತನ ಅಷ್ಟೇ.

ಸಿಎಂ,‌ಡಿಸಿಎಂ ಸಣ್ಣತನವನ್ನು ರಾಜ್ಯದ ಜನರು ನೋಡಿದ್ದಾರೆ. ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ‌ಇಂತಹ ವಿಷಯ ಇಟ್ಟುಕೊಂಡು ಹೋಗ್ತಾ ಇದ್ದಾರೆ. ಕಾಂಗ್ರೆಸ್ ನವರನ್ನು ನಾಡಿನ ಜನ ಶಾಶ್ವತವಾಗಿ ಮನೆಗೆ ‌ಕಳಿಸುವ ದಿನ ದೂರ ಉಳಿದಿಲ್ಲ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ವಂದೇ ಭಾರತ್ ರೈಲು ಸ್ವಾಗತ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಗೈರಾಗಿದ್ದರ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಅಭಿವೃದ್ಧಿ ವಿಷಯಗಳ ಕಡೆ ಗಮನ ಕೊಡಲು ಅವರಿಗೆ ಸಮಯ ಇಲ್ಲ. ವೋಟ್ ಚೋರಿ ವಿಷಯದಲ್ಲಿ ಬ್ಯುಸಿ ಇದ್ದಾರೆ ಅವರು ಇಂದು ಲೇವಡಿ ಮಾಡಿದರು.

ವೋಟ್ ಚೋರಿ ಅನ್ನುವುದು ಕಾಂಗ್ರೆಸ್ ಪ್ರಚಾರಕ್ಕಾಗಿ ಸೃಷ್ಟಿಸಿರುವ ದೊಡ್ಡ ಸುಳ್ಳು. ಇಂತಹ ಕ್ಷುಲ್ಲಕ ವಿಷಯಗಳನ್ನೇ ಇಟ್ಟುಕೊಂಡು ಎರಡೂವರೆ ವರ್ಷ ಕಾಲಹರಣ ಮಾಡಿದ್ದಾರೆ. ಮುಂದಿನ ಎರಡೂವರೆ ವರ್ಷವೂ ಇವರು ಬೇರೆ ಏನು ಮಾಡೋಕೆ ಆಗೊಲ್ಲ. ಮಾಡುವುದೂ ಇಲ್ಲ ಎಂದು ಅವರು ಹೇಳಿದರು.

ರಾಜ್ಯದ ಖಜಾನೆ ಖಾಲಿ ಆಗಿದೆ. ಖಾಲಿ ಆಗಿರುವ ಖಜಾನೆ ಹೇಗೆ ತುಂಬಿಸಬೇಕು ಅಂತ ನಿನ್ನೆ (ಶುಕ್ರವಾರ) ಸಭೆ ಮಾಡಿದ್ದಾರೆ. ಜನರ ಮೇಲೆ ಪದೇ ಪದೇ ತೆರಿಗೆ ವಿಧಿಸುವ ಮೂಲಕ ಜನರ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಯಾವಾಗಲೂ ಜನರನ್ನ ದಾರಿ ತಪ್ಪಿಸಲು ಸಾಧ್ಯವಿಲ್ಲ. ನಾನು ಅನೇಕ ಬಾರಿ ಹೇಳಿದ್ದೇನೆ. ತಪ್ಪು ತಿದ್ದಿಕೊಂಡು ಕೆಲಸ ಮಾಡಿ ಅಂತ. ಆದರೂ ಅವರಿಗೆ ಬುದ್ದಿ ಬಂದಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ದ ಕುಮಾರಸ್ವಾಮಿ ಅವರು ಹರಿಹಾಯ್ದರು.

ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ!

ಕಬ್ಬು ಬೆಳೆಗಾರರಿಗೆ ಕಿವಿಯಲ್ಲಿ ಹೂವು ಇಟ್ಟು ರಾಜ್ಯ ಸರ್ಕಾರ ದೊಡ್ಡ ದೋಖಾ ಮಾಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಕಬ್ಬು ಬೆಳೆಗಾರರಿಗೆ 100 ಹೆಚ್ಚಳ ಮಾಡಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರಲ್ಲದೆ, ರೈತರನ್ನು ನಂಬಿಸಿ ಮೋಸ ಮಾಡಿದೆ ಎಂದು ದೂರಿದರು.

ಸಿಎಂ ಅವರು ಮೋದಿಗೆ ಅವರಿಗೆ ‌ಪತ್ರ ಬರೆದು ಅವರ ಮೇಲೆ ಗೂಬೆ ಕೂರಿಸೋ ಕೆಲಸ ಮಾಡಿದರು. ಹಿಂದೆ ಒಮ್ಮೆ ವಿಧಾನಸಭೆಯಲ್ಲಿ ಇದೇ ಸಿಎಂ, ಡಿಸಿಎಂ ಸೇವಂತಿಗೆ ಹೂವನ್ನ ಕಿವಿ ಮೇಲೆ ಇಟ್ಟುಕೊಂಡು ಬಂದಿದ್ದರು. ಅಂದು ಕಿವಿಗೆ ಹೂ ಮುಟ್ಟಿದ್ದ ಇವರು ಇಂದು ಎರಡೂವರೆ ವರ್ಷದಲ್ಲಿ ನಿತ್ಯವೂ ಜನರಿಗೆ ಕಿವಿಗೆ ಹೂ ಮುಡಿಸುದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ಅವರು ಕಬ್ಬಿಗೆ FRP ದರ ಎಂದು ಕ್ವಿಂಟಲ್ ಗೆ ₹3,550 ನಿಗದಿ ಮಾಡಿದ್ದಾರೆ. ಅದ್ರೆ ಶುಕ್ರವಾರದ ದಿನ ಸಿಎಂ,ಡಿಸಿಎಂ ‌ಮ್ಯಾರಾಥಾನ್ ಸಭೆ ಮಾಡಿದರು. ದಿನಪೂರ್ತಿ ಸಭೆ ₹100 ಮಾತ್ರ ಜಾಸ್ತಿ ಮಾಡಿದ್ದಾರೆ.

ಕೇಂದ್ರ ಸರ್ಕಾರ ₹3550 FRPನಿಗದಿ ಮಾಡಿದೆ. ರೈತರು ಕೇಳಿದ್ದು ₹3500 ಬೆಲೆಯನ್ನು. ಸರ್ಕಾರ ಮ್ಯಾರಥಾನ್ ‌ಸಭೆ ಮಾಡಿ ಕೊಟ್ಟಿದ್ದು ₹3,300 ಮಾತ್ರ. ಹಾಗಾದ್ರೆ ಇವರು ರೈತರಿಗೆ ಕೊಟ್ಟಿದ್ದೇನು? ಸರ್ಕಾರ ಮಾಡಿರುವ ಮೋಸವನ್ನು ಪ್ರಶ್ನೆ ಮಾಡದೇ ರೈತರು ಸಂತೋಷಪಟ್ಟರೆ ನನ್ನದೇನು ಅಭ್ಯಂತರ ಇಲ್ಲ. ಆದರೆ, ಸರ್ಕಾರ ರೈತ ಕುಟುಂಬಗಳಿಗೆ ದೋಖಾ ಮಾಡಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ರಾಜಕೀಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ (Prahlad Joshi) ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ

[ccc_my_favorite_select_button post_id="118281"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!