ಬೆಂಗಳೂರು ಗ್ರಾಮಾಂತರ ಜಿಲ್ಲೆ; ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ (Working Journalists Association elections) ದೇವನಹಳ್ಳಿಯ ಪತ್ರಕರ್ತರ ಭವನದಲ್ಲಿ ನಡೆಯುತ್ತಿದ್ದು, ಪತ್ರಕರ್ತರು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.
ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಖಜಾಂಚಿ, ರಾಜ್ಯ ಸಮಿತಿ ಸದಸ್ಯ, 3 ಉಪಾಧ್ಯಕ್ಷ, 3 ಸಹಕಾರ್ಯದರ್ಶಿ ಹಾಗೂ 15 ನಿರ್ದೇಶಕ ಸ್ಥಾನಗಳಿಗೆ ಇಂದು ಚುನಾವಣೆ ನಡೆಸಲಾಗುತ್ತಿದೆ.
ಸುಗ್ಗರಾಜು ತಂಡ ಹಾಗೂ ಆರ್.ರಮೇಶ್ ತಂಡ ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.
ಮಧ್ಯಾಹ್ನ 3 ಗಂಟೆಯ ವರೆಗೆ ಚುನಾವಣೆ ನಡೆಯಲಿದ್ದು, ಬಳಿಕ ಮತ ಎಣಿಕೆ ಕಾರ್ಯ ನಡೆಯಲಿದೆ.

ಮತದಾನ ಕೇಂದ್ರಕ್ಕೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಭೇಟಿ ನೀಡಿದ್ದರು.