ಕುಮಾರಸ್ವಾಮಿ ಅವರೂ ಭಯೋತ್ಪಾದಕರ ಒಂದು ಭಾಗವೇ?; ಡಿ.ಕೆ. ಶಿವಕುಮಾರ್ ತಿರುಗೇಟು

Enough with the hit and run, put the documents against me before the people: DK Shivakumar challenges H.D. Kumaraswamy

ನವದೆಹಲಿ; “ಚುನಾವಣೆಗಳಲ್ಲಿ ಮತ ಕಳ್ಳತನ‌ ನಡೆಯುತ್ತಿರುವ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೇ ಕರ್ನಾಟಕದಲ್ಲಿ. ಈಗ ಮಹಾರಾಷ್ಟ್ರ, ಹರಿಯಾಣ, ಬಿಹಾರದಲ್ಲಿ ನಡೆಸಿರುವ ಅಕ್ರಮಗಳು ಬೆಳಕಿಗೆ ಬಂದಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K
Shivakumar) ಅವರು ತಿಳಿಸಿದರು.

ದೆಹಲಿಯಲ್ಲಿ ಎಐಸಿಸಿ ನೂತನ ಕಟ್ಟಡ ಇಂದಿರಾ ಭವನದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

“ನಮ್ಮ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಾಂಕೇತಿಕವಾಗಿ ಸಹಿ ಸಂಗ್ರಹ ಅಭಿಯಾನದ ದಾಖಲೆಗಳನ್ನು ಹಸ್ತಾಂತರಿಸಿದ್ದೇವೆ. 100 ವರ್ಷಗಳ ಹಿಂದೆ ಮಹಾತ್ಮ ಗಾಂಧೀಜಿ ಅವರು ನಿಭಾಯಿಸಿದ್ದ ಜವಾಬ್ದಾರಿಯನ್ನು ಈಗ ನಮ್ಮ ರಾಜ್ಯದ ಮಲ್ಲಿಕಾರ್ಜುನ ಖರ್ಗೆ ಅವರು ನಿಭಾಯಿಸುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮತದಾನದ ಹಕ್ಕು ರಕ್ಷಣೆ ಹೋರಾಟ ಮಾಡಿದ್ದೇವೆ. ಒಬ್ಬರಿಗೆ ಒಂದು ಮತ ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಮತ ಕಳ್ಳತನವನ್ನು ಮೊದಲು ಪಚ್ಚೆ ಹಚ್ಚಿದ್ದೇ ನಮ್ಮ ರಾಜ್ಯದಲ್ಲಿ. ಎಐಸಿಸಿ ಸಂಶೋಧನಾ ವಿಭಾಗ, ನಮ್ಮ ಅಭ್ಯರ್ಥಿಯಾಗಿದ್ದ ಮನ್ಸೂರ್ ಅಲಿ ಖಾನ್, ಕೆಪಿಸಿಸಿ ತಂಡ ಸೇರಿ ಈ ಮತ ಕಳ್ಳತನ ಪತ್ತೆ ಮಾಡಿ ಎಐಸಿಸಿಗೆ ಮಾಹಿತಿ ನೀಡಿದೆವು” ಎಂದು ವಿವರಿಸಿದರು.

“ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸಿ ಫ್ರೀಡಂ ಪಾರ್ಕ್ ನಿಂದ ಈ ಹೋರಾಟ ಆರಂಭಿಸಲಾಯಿತು. ನಂತರ ಮಹಾರಾಷ್ಟ್ರ, ಹರಿಯಾಣ ಚುನಾವಣಾ ಅಕ್ರಮ ಬಯಲಾಗಿ ಈ ಹೋರಾಟ ಬಿಹಾರದವರೆಗೂ ಹಬ್ಬಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರ ನಿರ್ದೇಶನದ ಮೇರೆಗೆ ಈ ಅಭಿಯಾನ ಪೂರ್ಣಗೊಳಿಸಿದ್ದೇವೆ” ಎಂದರು.

“ನಮ್ಮ ಕಾರ್ಯಕರ್ತರು, ಬ್ಲಾಕ್, ಜಿಲ್ಲಾಧ್ಯಕ್ಷರು ಹಾಗೂ ಪಕ್ಷದ ವಿವಿಧ ಘಟಕಗಳ ಪರಿಶ್ರಮದಿಂದ ಸಂಗ್ರಹಿಸಲಾದ ಸಹಿಗಳನ್ನು ಸಲ್ಲಿಕೆ ಮಾಡಿದ್ದೇವೆ. ನಾವು ನಮ್ಮ ಕರ್ತವ್ಯ ಮಾಡಿದ್ದು, ಮೊನ್ನೆಯಷ್ಟೇ ನಾನು ಹಾಗೂ ಸಿಎಂ ಈ ವಿಚಾರವಾಗಿ ಮಾಧ್ಯಮಗೋಷ್ಠಿ ನಡೆಸಿದ್ದೇವೆ. ನಮ್ಮ ಕಾರ್ಯಕರ್ತರು ಈ ಅಭಿಯಾನವನ್ನು ಇನ್ನೂ ಮುಂದುವರಿಸುತ್ತಿದ್ದು, ನಂತರ ಸಂಗ್ರಹಿಸುವ ಸಹಿ ದಾಖಲೆಗಳನ್ನು ಮುಂದಿನ ದಿನಗಳಲ್ಲಿ ಸಲ್ಲಿಕೆ ಮಾಡುತ್ತೇವೆ” ಎಂದರು.

“ಮತಕಳ್ಳತನ ಖಂಡಿತವಾಗಿ ಆಗಿದೆ. ಬಿಹಾರದಲ್ಲಿ ಎಸ್ಐಆರ್ ನಡೆದಾಗ ನ್ಯಾಯಾಲಯ ಮಧ್ಯಪ್ರವೇಶ ಮಾಡಿ ಏಕೆ ಸೂಚನೆ ನೀಡಿತು? ರಾಹುಲ್ ಗಾಂಧಿ ಅವರು ಇದರ ಬಗ್ಗೆ ಮೊದಲ ಪತ್ರಿಕಾಗೋಷ್ಠಿ ನಡೆಸಿದ ನಂತರ ಮಾಧ್ಯಮಗಳು ಬೆಂಗಳೂರಿಗೆ ಬಂದು ಉಲ್ಲೇಖಿತ ಮನೆಗಳ ಸಂಖ್ಯೆ ಸೇರಿದಂತೆ ಯಾವ, ಯಾವ ಕಡೆ ಅಕ್ರಮ ನಡೆದಿದೆ ಎಂದು ಫ್ಯಾಕ್ಟ್ ಚೆಕ್ ಮಾಡಿದವು. ಯಾವ ಸರ್ಕಾರವೂ ಅದರ ವೈಫಲ್ಯ ಒಪ್ಪಿಕೊಳ್ಳುವುದಿಲ್ಲ. ವಿರೋಧ ಪಕ್ಷದ ಕೆಲಸವೇ ವೈಫಲ್ಯಗಳನ್ನು ಕಂಡುಹಿಡಿದು ತಿಳಿಸುವುದು” ಎಂದರು.

ಕುಮಾರಸ್ವಾಮಿ ಅವರೂ ಭಯೋತ್ಪಾದಕರ ಒಂದು ಭಾಗವೇ?

ವಿಧಾನಸೌಧದಲ್ಲಿ ಭಯೋತ್ಪಾದಕರಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರೂ ಸಹ ಭಯೋತ್ಪಾದಕರ ಭಾಗವಾಗಿದ್ದಾರೆಯೇ? ಅವರೂ ಸಹ ವಿಧಾನಸೌಧದಲ್ಲಿ ಕುಳಿತಿರಲಿಲ್ಲವೇ? ಅವರಿಗೂ ಹಾಗೂ ಅವರ ಪಕ್ಷದವರಿಗೂ, ಅವರ ಆಡಳಿತಕ್ಕೂ ಇದು ಅನ್ವಯಿಸುತ್ತದೆ” ಎಂದು ತಿರುಗೇಟು ನೀಡಿದರು.

ಸಂವಿಧಾನಿಕ ಸಂಸ್ಥೆಗಳ ದುರುಪಯೋಗ

“ಚುನಾವಣಾ ಆಯೋಗವು ಬಿಹಾರದ ಮತದಾರರಿಗೆ ಸರಿಯಾದ ನ್ಯಾಯ ಒದಗಿಸಿಲ್ಲ. ಬಿಜೆಪಿ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ‌ ಮಾಡಿಕೊಂಡಿದೆ. ಯಾವುದು ಕಾಡದಿದ್ದರೂ ಆತ್ಮಸಾಕ್ಷಿ ಎನ್ನುವುದು ಇದ್ದೇ ಇರುತ್ತದೆ. ಅದು ಅಂತಿಮವಾಗಿ ಕೆಲಸ ಮಾಡಲಿದೆ” ಎಂದು ಹೇಳಿದರು.

ಮುಖ್ಯಮಂತ್ರಿ ಹುದ್ದೆ ಬದಲಾವಣೆ ಬಗೆಗಿನ ಊಹಾಪೋಹಗಳ ಬಗ್ಗೆ ಕೇಳಿದಾಗ, “ನಾನು ರಾಜಕೀಯ ವಿಚಾರಗಳನ್ನು ಮಾತನಾಡುವುದಿಲ್ಲ. ನಾನು ಪ್ರಜಾಪ್ರಭುತ್ವ, ಮತದಾನದ ಹಕ್ಕು, ಸಂವಿಧಾನವನ್ನು ಉಳಿಸುವ ವಿಚಾರವಾಗಿ ಮಾತನಾಡುತ್ತೇನೆ” ಎಂದು ಉತ್ತರಿಸಿದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!