ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ (Dharmasthala) ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ (Laksha Deepotsava) ಕಾರ್ಯಕ್ರಮಗಳು ನ.15 ರಿಂದ 19ರ ವರೆಗೆ ನಡೆಯಲಿವೆ.
ನ.18 ರಂದು ಮಂಗಳವಾರ ಸಂಜೆ ಗಂಟೆ ಐದರಿಂದ ಸರ್ವ ಧರ್ಮ ಸಮ್ಮೇಳನದ 93ನೇ ಅಧಿ ವೇಶನ ನಡೆಯಲಿದೆ.
ಸಚಿವ ಡಾ.ಬಿ.ಎಂ.ಪಾಟೀಲ್ ಸರ್ವಧರ್ಮ ಸಮ್ಮೇಳನದ 93ನೇ ಅಧೀ ವೇಶನ ಉದ್ಘಾಟಿಸುವರು. ಹರಿಹರಪುರದ ಪೂಜ್ಯ ಸ್ವಯಂಪ್ರಕಾಶ್ ಸಚ್ಚಿದಾನಂದ ಸರಸ್ವತೀ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ.
ನ. 19 ರಂದು ಬುಧವಾರ ಸಂಜೆ 5 ಗಂಟೆಗೆ ಸಾಹಿತ್ಯ ಸಮ್ಮೇಳನದ 93ನೇ ಅಧೀವೇಶನವನ್ನು ಹಿರಿಯ ಸಾಹಿತಿ ಮತ್ತು ಅಂಕಣಕಾರ ಪ್ರೊ. ಪ್ರೇಮ ಶೇಖರ ಉದ್ಘಾಟಿಸುವರು.
ರಾತ್ರಿ 12 ಗಂಟೆ ಬಳಿಕ ಗೌರಿಮಾರುಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ನಡೆಯಲಿದೆ. ನಾಡಿನೆಲ್ಲೆಡೆಯಿಂದ ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳು ಆಗಮಿಸಲಿದ್ದು, ನ. 20 ರ ಗುರುವಾರ ಬೆಳಗ್ಗಿನ ಜಾವ ಲಕ್ಷದೀಪೋತ್ಸವ ಸಂಪನ್ನ ಆಗಲಿದೆ. (ಸಂಗ್ರಹ ಚಿತ್ರ ಬಳಸಲಾಗಿದೆ)