ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

Delhi car blast: This is not the time to blame the Centre - D.K. Shivakumar

ಬೆಂಗಳೂರು: “ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಸೋಮವಾರ ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿರುವ ಕಾರು ಸ್ಫೋಟ ಪ್ರಕರಣದ ಬಗ್ಗೆ ಕೇಳಿದಾಗ, ದೆಹಲಿಯಲ್ಲಾಗಲಿ ಅಥವಾ ಬೇರೆ ಎಲ್ಲೇ ಆಗಲಿ ನಾವು ಎಚ್ಚರಿಕೆಯಿಂದ ಇರಬೇಕು. ಕರ್ನಾಟಕ ರಾಜ್ಯದ ಭದ್ರತೆ ಬಗ್ಗೆ ಗೃಹ ಸಚಿವರು ಪರಿಶೀಲಿಸುತ್ತಿದ್ದು, ಭದ್ರತೆ ಹೆಚ್ಚಳದ ಬಗ್ಗೆ ಸಿಎಂ ಆದೇಶ ನೀಡಿದ್ದಾರೆ.

ಇಡೀ ದೇಶದಲ್ಲಿ ನಾವು ಶಾಂತಿ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು. ಈ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಈ ಬಗ್ಗೆ ಕೂಡಲೇ ತನಿಖೆ ನಡೆಸಿ, ಸ್ಫೋಟದ ಹಿಂದಿರುವ ಉಗ್ರರಿಗೆ ಶಿಕ್ಷೆ ನೀಡಬೇಕು ಎಂದು ಕೇಂದ್ರದ ಮೇಲೆ ಒತ್ತಡ ಹಾಕುತ್ತೇವೆ ಎಂದು ತಿಳಿಸಿದರು.

ಆರೋಪ ಮಾಡುವ ಸಮಯ ಇದಲ್ಲ

ಪುಲ್ವಾಮಾ ಘಟನೆ ನಂತರ ಎಚ್ಚೆತ್ತುಕೊಂಡಿದ್ದರೆ ಈ ಘಟನೆ ಆಗುತ್ತಿರಲಿಲ್ಲ. ಇದು ಗುಪ್ತಚರ ಇಲಾಖೆ ವೈಫಲ್ಯವೇ ಎಂದು ಕೇಳಿದಾಗ, ಈ ವಿಚಾರದಲ್ಲಿ ಬೇರೆಯವರ ಮೇಲೆ ಆರೋಪ ಮಾಡುವುದಿಲ್ಲ. ಆರೋಪ ಮಾಡುವುದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ.

ಜನಸಾಮಾನ್ಯರನ್ನು ರಕ್ಷಿಸಿ, ಸರ್ಕಾರದ ಗೌರವ ಉಳಿಸಿಕೊಳ್ಳುವುದೇ ಪರಿಹಾರ. ಸೂಕ್ತ ಸಮಯ ಬಂದಾಗ ನಾವು ಆರೋಪ ಮಾಡುತ್ತೇವೆ. ಈಗ ನಾವು ಆರೋಪ ಮಾಡುವುದಕ್ಕಿಂತ ಜಾಗೃತಿ ಮೂಡಿಸಿ, ಜೀವ, ಜೀವನ ಉಳಿಸಲು ಪ್ರಯತ್ನಿಸಬೇಕು ಎಂದರು.

ಕಲಾಲೋಕ ಮಾರಾಟ ಮಳಿಗೆ ಉದ್ಘಾಟನೆ ಬಗ್ಗೆ ಕೇಳಿದಾಗ, “ರಾಜ್ಯದಲ್ಲಿ ತಯಾರಿಸುವ ಉತ್ಪನ್ನಗಳಾದ ಚನ್ನಪಟ್ಟಣ ಗೊಂಬೆ, ಬಿದಿರು ಕಲಾಕೃತಿ, ಶ್ರೀಗಂಧದ ಕಲಾಕೃತಿ, ಮೈಸೂರು ರೇಷ್ಮೆ, ಕರಕುಶಲ ವಸ್ತು, ಸಾಬೂನು, ಕೈಮಗ್ಗ, ಕಾಫಿ ಉತ್ಪನ್ನಗಳ ಮಳಿಗೆ ಆರಂಭಿಸಲು ನಾವು ಸೂಚಿಸಿದ್ದೆವು. ಅದರಂತೆ ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಳಿಗೆ ಆರಂಭಿಸಲಾಗಿದೆ. ಹೊರ ರಾಜ್ಯ ಹಾಗೂ ದೇಶಗಳಿಂದ ಬರುವ ಜನರಿಗೆ ನಮ್ಮ ರಾಜ್ಯದ ಉತ್ಪನ್ನಗಳನ್ನು ಪರಿಚಯಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ” ಎಂದು ತಿಳಿಸಿದರು.

ದೆಹಲಿ ಭೇಟಿ ಬಗ್ಗೆ ಕೇಳಿದಾಗ, “ಮತ ಕಳ್ಳತನ ವಿರುದ್ಧ ನಡೆಸಿದ ಸಹಿ ಸಂಗ್ರಹ ಅಭಿಯಾನದ ದಾಖಲೆಗಳನ್ನು ಸಲ್ಲಿಸಲು ಹೋಗಿದ್ದೆ. ಅವುಗಳನ್ನು ಸಲ್ಲಿಸಿ ಬಂದಿದ್ದು, ಇನ್ನಷ್ಟು ದಾಖಲೆಗಳಿವೆ ಅವುಗಳನ್ನೂ ತಲುಪಿಸುತ್ತೇವೆ” ಎಂದರು.

ರಾಜಕೀಯ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಬಿಜೆಪಿ (BJP) ಸರ್ಕಾರ ಜನರಿಗೆ ಉಜ್ವಲ ಯೋಜನೆ ಬದಲಾಗಿ ಸೌದೆ ಒಲೆ ಯೋಜನೆ ನೀಡಿದೆ. ಅಚ್ಛೇದಿನ ಏನಾಯ್ತು? ಈಗ ಇರುವುದನ್ನು ಕಚ್ಚಾ ದಿನ ಎಂದು ಹೇಳಬೇಕಾ? ಎಂದು ಬಿಜೆಪಿ ನಾಯಕರನ್ನು ಕೇಳಬಯಸುತ್ತೇನೆ" ಎಂದು

[ccc_my_favorite_select_button post_id="120598"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ ಶೋಭಾಯಾತ್ರೆಯಲ್ಲಿ ಡಿಜೆ ಬಳಕೆ..!; ಆಯೋಜಕರ ವಿರುದ್ಧ FIR.!

ದೊಡ್ಡಬಳ್ಳಾಪುರ ಶೋಭಾಯಾತ್ರೆಯಲ್ಲಿ ಡಿಜೆ ಬಳಕೆ..!; ಆಯೋಜಕರ ವಿರುದ್ಧ FIR.!

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳ ದಿಂದ ಭಾನುವಾರ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ (Sobhayatre) ಅದ್ದೂರಿಯಾಗಿ ನೆರವೇರಿದೆ. ಆದರೆ ಆಯೋಜಕರಿಗೆ ಸಂಕಷ್ಟ ಎದುರಾಗಿದೆ.

[ccc_my_favorite_select_button post_id="120613"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]