ಬೆಂಗಳೂರು: ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಗಡ್ಡಪ್ಪ. ಕಳೆದ ಕೆಲ ದಿನಗಳಿಂದ ಚನ್ನೇಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಚನ್ನೇಗೌಡ ಇಂದು (ನ.12)ಕೊನೆಯುಸಿರೆಳೆದಿದ್ದಾರೆ.
ಗಡ್ಡಪ್ಪ ಅವರು ಮೂಲತಃ ಮಂಡ್ಯ ತಾಲೂಕಿನ ನೊದೆಕೊಪ್ಪಲು ಗ್ರಾಮದವರು.
ಇಂದು ಸಂಜೆ ವೇಳೆ ಸ್ವಗ್ರಾಮ ನೊದೆಕೊಪ್ಪಲು ಗ್ರಾಮದಲ್ಲಿಯೇ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಂತಾಪ
ಗಡ್ಡಪ್ಪ ಅವರ ಅಗಲಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ರಾಷ್ಟ್ರ ಪ್ರಶಸ್ತಿ ವಿಜೇತ ‘ತಿಥಿ’ ಚಲನಚಿತ್ರದಲ್ಲಿ ಗಡ್ಡಪ್ಪನ ಪಾತ್ರದಲ್ಲಿ ಅಮೋಘವಾಗಿ ನಟಿಸಿದ್ದ ಮಂಡ್ಯ ತಾಲೂಕಿನ ನೊದೆಕೊಪ್ಪಲು ಗ್ರಾಮದ ಚನ್ನೇಗೌಡ ಅವರು ನಿಧನರಾದ ಸುದ್ದಿ ತಿಳಿದು ಬಹಳ ದುಃಖವಾಯಿತು.
ರಾಷ್ಟ್ರ ಪ್ರಶಸ್ತಿ ವಿಜೇತ 'ತಿಥಿ' ಚಲನಚಿತ್ರದಲ್ಲಿ ಗಡ್ಡಪ್ಪನ ಪಾತ್ರದಲ್ಲಿ ಅಮೋಘವಾಗಿ ನಟಿಸಿದ್ದ ಮಂಡ್ಯ ತಾಲೂಕಿನ ನೊದೆಕೊಪ್ಪಲು ಗ್ರಾಮದ ಚನ್ನೇಗೌಡ ಅವರು ನಿಧನರಾದ ಸುದ್ದಿ ತಿಳಿದು ಬಹಳ ದುಃಖವಾಯಿತು.
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) November 12, 2025
ಜತೆಗೆ 'ತರ್ಲೆ ವಿಲೇಜ್', 'ಜಾನಿ ಮೇರಾ ನಾಮ್', 'ಹಳ್ಳಿ ಪಂಚಾಯಿತಿ' ಸೇರಿ ಸುಮಾರು ಎಂಟು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು.… pic.twitter.com/G2WuMPeTx3
‘ತರ್ಲೆ ವಿಲೇಜ್’, ‘ಜಾನಿ ಮೇರಾ ನಾಮ್’, ‘ಹಳ್ಳಿ ಪಂಚಾಯಿತಿ’ ಸೇರಿ ಸುಮಾರು ಎಂಟು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.