I have been against the Sanatanvadi RSS from the beginning, against the caste system and stupidity: Cmsiddaramaiah

ನಾನು ಮೊದಲಿಂದಲೂ ಸನಾತನವಾದಿ RSS ಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು.
ನಾನು ಮೊದಲಿಂದಲೂ ಸನಾತನವಾದಿ RSS ಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ ಇದ್ದೇನೆ ಎಂದು ಸಿ.ಎಂ.ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಸಂಘದ ಕಟ್ಟಡದಲ್ಲಿ ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು. ಸಮಾಜವನ್ನು ಒಡೆದು ಜಾತಿ ವ್ಯವಸ್ಥೆ ರೂಪಿಸಿದ ಸಿದ್ಧಾಂತ RSS ನದ್ದು. ಈ ಸಿದ್ಧಾಂತ ಶ್ರಮಿಕ ಜಾತಿ, ವರ್ಗಗಳ ವಿರೋಧಿ. ಅದಕ್ಕೇ ನಾನು RSS ಅನ್ನು ಮೊದಲಿನಿಂದಲೂ ವಿರೋಧಿಸುತ್ತೇನೆ. ಇದೇ ಕಾರಣಕ್ಕೆ ಕಾಗಿನೆಲೆ ಪೀಠ ಎಲ್ಲಾ ಶೋಷಿತ ಸಮುದಾಯಗಳ ಪೀಠ ಆಗಬೇಕು ಎನ್ನುವುದನ್ನು ಪ್ರತಿಪಾದಿಸಿದ್ದೆ ಎಂದರು.

ಈದ ಇದೇ ನೂರು ವರ್ಷದ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾಣಕ್ಕೆ ಪ್ರದೇಶ ಕುರುಬರ ಸಂಘದಿಂದ ಬೇಡಿಕೆ ಮತ್ತು ಒತ್ತಾಯ ಬಹಳ ವರ್ಷಗಳಿಂದ ಇತ್ತು. ಈಗ ಎಲ್ಲರನ್ನೂ ಒಪ್ಪಿಸಿ ಹಳೆ ಕಟ್ಟಡ ನೆಲಸಮ‌ ಮಾಡಿ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಕೂಡ ಆಗಿದೆ. ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ 18 ತಿಂಗಳಲ್ಲಿ ನೂತನ‌ ಕಟ್ಟಡ ನಿರ್ಮಾಣ ಆಗಲಿದೆ ಎಂದರು.

ಹಳೆ ಕಟ್ಟಡದಲ್ಲಿದ್ದ ಹಾಸ್ಟೆಲ್ ನಲ್ಲಿ ಓದಿದವರು ಒಳ್ಳೊಳ್ಳೆ ಅಧಿಕಾರಿಗಳಾಗಿದ್ದಾರೆ. ಜಡ್ಜ್ ಗಳೂ ಆಗಿದ್ದಾರೆ. ನಾನು 1983 ರಲ್ಲಿ ಶಾಸಕನಾಗಿ 1984 ರಲ್ಲಿ ಮಂತ್ರಿ ಆದೆ. ನಾನು ಸಾರಿಗೆ ಮಂತ್ರಿ ಆಗಿದ್ದಾಗ 1988 ರಲ್ಲೇ ಕನಕದಾಸರ 500ನೇ ಜಯಂತ್ಸೋವವನ್ನು ಆಚರಣೆ ಮಾಡಿಸಿದೆ.

ಇದೇ ಸಂದರ್ಭದಲ್ಲಿ ಸಮಾಜಕ್ಕೊಂದು ಗುರುಪೀಠ ಬೇಕು ಎಂದು ತೀರ್ಮಾನಿಸಿದೆ. ಆಗ ಸಂಘದ ಕಟ್ಟಡದ ಮೇಲೆ 3 ಕೋಟಿ ರೂಪಾಯಿ ಸಾಲ ಇತ್ತು. ಆ ಸಾಲದ ಸುಳಿಯಿಂದ ಸಂಘವನ್ನು ಬಿಡಿಸಿದ್ದು ನಾವು. ಇದು ಇತಿಹಾಸ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದರು.

ಹೊಸ ಕಟ್ಟಡದಲ್ಲೂ ಹಾಸ್ಟೆಲ್ ಇರಲಿದೆ. ರಾಜಪ್ಪ ಮೇಸ್ಟ್ರು ನನ್ನನ್ನು ನೇರವಾಗಿ ಐದನೇ ತರಗತಿಗೆ ಸೇರಿಸದೇ ಹೋಗಿದ್ದರೆ ನಾನು ವಕೀಲನೂ ಆಗುತ್ತಿರಲಿಲ್ಲ, ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ. ಬಳಿಕ ಪ್ರೊ.ನಂಜುಂಡಸ್ವಾಮಿ ಅವರ ಕಾರಣದಿಂದ ರಾಜಕೀಯಕ್ಕೆ ಬಂದೆ.

ನಾನು ರಾಜಕಾರಣಕ್ಕೆ ಬರದೇ ಹೋಗಿದ್ದರೆ ಕುರುಬ ಸಂಘದ ಕಟ್ಟಡವೂ ಉಳಿಯುತ್ತಿರಲಿಲ್ಲ, ಕಾಗಿನೆಲೆ ಪೀಠವೂ ಆಗುತ್ತಿರಲಿಲ್ಲ, ರಿಯಲ್ ಎಸ್ಟೇಟ್ ರೌಡಿಗಳಿಂದ ಬೈರಪ್ಪನ ಗುಡಿ ಮತ್ತು ಸಮಾಜದ ಭೂಮಿ, ಕಟ್ಟಡಗಳನ್ನು ಉಳಿಸಲು ಸಾಧ್ಯ ಆಗುತ್ತಿರಲಿಲ್ಲ ಎಂದು ಇತಿಹಾಸದ ಘಟನೆಗಳನ್ನು ಒಂದೊಂದಾಗಿ ವಿವರಿಸಿದರು.

ಸರ್ಕಾರದಿಂದ 600 ಕುರುಬ ಸಮುದಾಯ ಭವನಗಳನ್ನು ಮಾಡಲು ಮುಂದಾಗಿದ್ದು, ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ, ದಾವಣಗೆರೆ ಸೇರಿ ರಾಜ್ಯದ ಹತ್ತು ಹಲವು ಕಡೆಗಳಲ್ಲಿ ಸಂಘಕ್ಕೆ ಜಾಗ-ಕಟ್ಟಡ ಉಳಿಸಿಕೊಟ್ಟಿದ್ದೇನೆ.

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಮಾಡಿದ್ದು ನಾನೇ, ಸಂಗೊಳ್ಳಿ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದು ನಾನೇ. ಈಗ ನನಗೂ ಮುಕುಡಪ್ಪನಿಗೂ ಆಗುವುದಿಲ್ಲ. ಆದರೆ ಕುರುಬ ಸಮಾಜಕ್ಕೆ ಆಸ್ತಿ ಉಳಿಸಿ, ಬೆಳೆಸುವ ಕಾರ್ಯದಲ್ಲಿ ಮುಕುಡಪ್ಪ ಸೇರಿ ಶಿವಣ್ಣ, ಮಾಸ್ತಿ, ಸಿದ್ದಲಿಂಗಯ್ಯ, ನಾಗಣ್ಣ ರೀತಿಯ ಹಲವರು ಜೊತೆಗೆ ನಿಂತು ಸಹಕಾರ ಮಾಡಿದರು.

ಈ ಇತಿಹಾಸ ಗೊತ್ತಿದ್ದವರು ಬಹಿರಂಗವಾಗಿ ಮಾತಾಡಬೇಕಿತ್ತು. ಅವರ್ಯಾರೂ ಮಾತಾಡದ ಕಾರಣಕ್ಕೆ, ನಾನು ಮಾತಾಡಬಾರದು ಅಂದುಕೊಂಡಿದ್ದವನು ಎಲ್ಲವನ್ನೂ ಮಾತಾಡಬೇಕಾಗಿ ಬಂತು ಎಂದರು.

ಯಾರು ಮಾತಾಡಲಿ, ಬಿಡಲಿ ಇದು ಸತ್ಯ. ಇದು ಇತಿಹಾಸ. ಒಟ್ಟಿನಲ್ಲಿ ಸಮಾಜದ ಸಂಘಟನೆಗೆ ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳು ಎಂದರು.

*lಎಲ್ಲ ಸಮಾಜಕ್ಕೂ ಮಾಡಿದ್ದೇನೆ

ನಾನು ಕೇವಲ ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗೂ ನಾನು ಕೆಲಸ ಮಾಡಿದ್ದೇನೆ.

ಮೊದಲ ಬಾರಿ ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಭಾಗ್ಯಗಳು, ಎರಡನೇ ಬಾರಿ ಮುಖ್ಯಮಂತ್ರಿ ಆಗಿ ಜಾರಿಗೆ ತಂದ ಗ್ಯಾರಂಟಿಗಳು ಎಲ್ಲಾ ಜಾತಿಯ ಬಡವರಿಗಾಗಿ ಜಾರಿ ಆಗಿದೆ. ಸರ್ವರನ್ನೂ ಒಳಗೊಂಡ, ಸರ್ವರ ಅಭಿವೃದ್ಧಿಯ ಸಮಾಜ ನಿರ್ಮಾಣ ನನ್ನ ಗುರಿ ಎಂದರು‌.

ಅದಕ್ಕೇ ರಾಜ್ಯದ ಎಲ್ಲಾ ಜಾತಿಯ, ಎಲ್ಲಾ ವರ್ಗದ, ಎಲ್ಲಾ ಧರ್ಮದ ಜನರೂ ನನ್ನನ್ನು ಪ್ರೀತಿಸ್ತಾರೆ. ಹೀಗಾಗಿ ನಾನು‌ ನಮ್ಮ ಜಾತಿ ಸೇರಿ ಸಮಾಜದ ಎಲ್ಲಾ ಜಾತಿ, ಧರ್ಮದವರ ಆಶೀರ್ವಾದಕ್ಕಾಗಿ ನಾನು ಋಣಿ ಎಂದು ಕೃತಜ್ಞತೆ ಸಲ್ಲಿಸಿದರು.

ಜೀವಬೆದರಿಕೆಯಿಂದ ಸಂಘದ ಚುನಾವಣೆವರೆಗೂ: ಸಿಎಂ ಸ್ಮರಣೆ

ಹಿಂದೆ ರೌಡಿ ಕೊತ್ವಾಲ್ ರಾಮಚಂದ್ರನ ಜೊತೆ ಇದ್ದ ಪುಟ್ಟಸ್ವಾಮಿಯಿಂದ ಜೀವ ಬೆದರಿಕೆ ಇತ್ತು. ನಾನು ಹೆದರಲಿಲ್ಲ. ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ ಬೆದರಿಕೆ ಇತ್ತು. ಆದರೂ ನಾನು ಹೆದರದೆ ಗ್ರಾಮೀಣ ಭಾಗದ ಸಂಘದ ನಿರ್ದೇಶಕರ ಬೆಂಬಲದಲ್ಲಿ ದಾವಣಗೆರೆಯ ಮಲ್ಲಪ್ಪ ಅವರನ್ನು ರೌಡಿ ಪುಟ್ಟಸ್ವಾಮಿ ವಿರುದ್ಧ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ನಿಲ್ಲಿಸಿದೆ. ಪುಟ್ಟಸ್ವಾಮಿ ನ್ಯಾಯಾಲಯಕ್ಕೆ ಹೋದರೂ ತೀರ್ಪು ನಮ್ಮ ಪರವಾಗಿ ಬಂತು. ಹೀಗೆ ಸಂಘವನ್ನು ನಾನು ಉಳಿಸಿದೆ.

ಬಳಿಕ ನನ್ನ ಹಳೇ ಕಾರಲ್ಲಿ ಇಡೀ ರಾಜ್ಯ ಸುತ್ತಿ ಸಮಾಜವನ್ನು ಸಂಘಟಿಸಿದೆ. ತಾರಾಕಾನಂದರನ್ನು ಪೀಠಾಧ್ಯಕ್ಷರನ್ನಾಗಿ ಮಾಡಲು ತೀರ್ಮಾನಿಸಿದ್ದು ನಾನೇ.

ಮುಖ್ಯಮಂತ್ರಿ ಆಗಿದ್ದ ಬಂಗಾರಪ್ಪ ಅವರನ್ನು ಮತ್ತು ಕೇಂದ್ರ ಸಚಿವರಾಗಿದ್ದ ಶರದ್ ಪವಾರ್ ಅವರನ್ನು ಕರೆಸಿ ಪೀಠಕ್ಕೆ ಚಾಲನೆ ನೀಡಲಾಯಿತು. ಹೀಗೆ ಕುರುಬರ ಸಂಘ ಮತ್ತು ಕುರುಬ ಸಮಾಜದ ಪೀಠವನ್ನು ಉಳಿಸಿದ್ದು ನಾನು.

ರಾಜ್ಯ ಸುತ್ತಿ ಸಮಾಜದ ಸಂಘಟಿಸಿದ್ದು ನಾನು, ಮುಕುಡಪ್ಪ, ಮಾಸ್ತಿ ಮತ್ತು ಇತರರು. ಆಮೇಲೆ ವಿಶ್ವನಾಥ್ ಅವರನ್ನು ಪೀಠದ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ್ದು ನಾನು. ಈಗ ವಿಶ್ವನಾಥ್ ಬಾಯಿಗೆ ಬಂದಂತೆ ಮಾತಾಡುತ್ತಾರೆ. ಆದ್ದರಿಂದ ಇಡೀ ಸಮಾಜ ಈ ಸತ್ಯವನ್ನು ಅರ್ಥ ಮಾಡಿಕೊಳ್ಳಬೇಕು.

ನಾನು ಸಮಾಜಕ್ಕೆ ಏನು ಮಾಡಿದ್ದೇನೆ ಎನ್ನುವ ಚರಿತ್ರೆಯನ್ನು ಮನದಟ್ಟು ಮಾಡಿಕೊಳ್ಳಬೇಕು. ಗುರುಪೀಠ ನಾನು ಮಾಡಿದ್ದು ಎಂದು ನಿರಂಜನಾನಂದಪುರಿ ಸ್ವಾಮೀಜಿಗೆ ಹೆದರಿಸುವವರು ಇತಿಹಾಸ ತಿರುಚುತ್ತಿದ್ದಾರೆ ಎಂದರು.

ರಾಜಕೀಯ

ದೆಹಲಿ ಬಾಂಬ್ ಸ್ಪೋಟವನ್ನು ಬಿಹಾರ ಚುನಾವಣೆಯನ್ನು ಜೋಡಿಸುವ ಷಡ್ಯಂತ್ರ: ಬಿ.ವೈ. ವಿಜಯೇಂದ್ರ ಟೀಕೆ

ದೆಹಲಿ ಬಾಂಬ್ ಸ್ಪೋಟವನ್ನು ಬಿಹಾರ ಚುನಾವಣೆಯನ್ನು ಜೋಡಿಸುವ ಷಡ್ಯಂತ್ರ: ಬಿ.ವೈ. ವಿಜಯೇಂದ್ರ ಟೀಕೆ

ಬಾಂಬ್ ಸ್ಫೋಟದಂಥ ಸಂದಿಗ್ಧ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಟ್ಟಾಗಿ ಒಂದೇ ಧ್ವನಿಯಲ್ಲಿ ಮಾತನಾಡಬೇಕಾಗುತ್ತದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ( B.Y. Vijayendra) ತಿಳಿಸಿದ್ದಾರೆ.

[ccc_my_favorite_select_button post_id="116125"]
ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು

[ccc_my_favorite_select_button post_id="116144"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!