ಶಿವಮೊಗ್ಗ: 2024ರ ಅಕ್ಟೋಬರ್ 22 ರಂದು ಶಿವಮೊಗ್ಗ -ಭದ್ರಾವತಿ ಮಾರ್ಗದ ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.
ಈ ಹಿನ್ನೆಲೆಯಲ್ಲಿ ಹೇಮಾವತಿ ತಂದೆ ರಮೇಶ್ ಎಂಬುವವರಿಗೆ ಅಪಘಾತ ಪರಿಹಾರ ನಿಧಿಯಿಂದ ರೂ.10 ಲಕ್ಷಗಳ ಚೆಕ್‌ನ್ನು ಕ.ರಾ.ರ.ಸಾ.ನಿಗಮದ ಶಿವಮೊಗ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ನವೀನ್ ಟಿ.ಆರ್. ಇವರು ಹಸ್ತಾಂತರ ಮಾಡಿದ್ದಾರೆ ಎಂದು ಕರಾರಾಸಾನಿಗಮದ ಪ್ರಕಟಣೆ ತಿಳಿಸಿದೆ.