Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಗೆ ಮೋಸವಾಗುವ ಸಾಧ್ಯತೆ ಇದೆ ಎಚ್ಚರ

Astrology: ಗುರುವಾರ, ನವೆಂಬರ್ 13, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರು ವರು.(ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ

ಹಣಕಾಸಿನ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು.ಆರ್ಥಿಕ ಸಂಕಷ್ಟ ದೂರಾಗುವುದು. (ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಿಥುನ ರಾಶಿ

ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವುದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಮೂಡುವುದು. ವಿದ್ಯಾಭ್ಯಾಸ ದಲ್ಲಿ ನಿರಾಸಕ್ತಿ ಕಂಡುಬರು ವುದು.(ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಾಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ.
ಶತ್ರುಬಾಧೆ ಕಂಡುಬರುವುದು. ಆರೋಗ್ಯದ ಮೇಲೆ ನಿಗಾ ಇರಲಿ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ನಿಮ್ಮ ಭವಿಷ್ಯವನ್ನು ಸಮೃದ್ಧಗೊಳಿಸಲು ನೀವು ಹಿಂದೆ ಹೂಡಿಕೆ ಮಾಡಿದ ಎಲ್ಲಾ ಹಣವು ಇಂದು ಫಲಪ್ರದ ಫಲಿತಾಂಶಗಳನ್ನು ನೀಡುವ ಯೋಗವಿದೆ. ನಿಮ್ಮ ಕಾರ್ಯ ಪ್ರವೃತ್ತಿಯ ಸಾಧನೆಯ ಮೂಲಕ ವಿಶೇಷ ವ್ಯಕ್ತಿಯನ್ನು ಸೆಳೆಯುತ್ತೀರಿ. (ಭಕ್ತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ

ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡ ಮೊತ್ತದ ಹಣ ಹೂಡಿಕೆ ಈಗ ಬೇಡ. (ಭಕ್ತಿಯಿಂದ ಶ್ರೀ ಕೇದಾರನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ನಿಮ್ಮ ಇಷ್ಟಾರ್ಥಗಳು ಈಡೇರಬಹುದು. ವ್ಯಾಪಾರದ ಸಂದರ್ಭದಲ್ಲಿ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಾರಂಭಿಸಬಹುದು. ವ್ಯಾಪಾರಿಗಳು ಇಂದು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನಿಮ್ಮ ಕಠಿಣ ಪರಿಶ್ರಮ ಯಶಸ್ವಿಯಾಗುತ್ತದೆ ಮತ್ತು ನಿಮ್ಮ ವ್ಯಾಪಾರವು ಬೆಳೆಯುತ್ತದೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಹಣಕಾಸಿನ ವಿಷಯದಲ್ಲಿ ನಿಮ್ಮ ಸ್ವಂತ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಪ್ರತಿಯೊಂದಕ್ಕೂ ಸಾಧ್ಯವಾದಷ್ಟು ಹೆಚ್ಚಿನ ಗಮನವನ್ನು ನೀಡಿ. ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಒಪ್ಪಂದಗಳ ಮಾಡಿಕೊಳ್ಳಲು ಒತ್ತು ನೀಡಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ

ಇಂದು ವಿವಾದಾತ್ಮಕ ವಿಷಯಗಳನ್ನು ಎತ್ತುವುದನ್ನು ತಪ್ಪಿಸಿ. ಸ್ಪರ್ಧೆ ಹೆಚ್ಚಾದಂತೆ ಕೆಲಸದ ವೇಳಾಪಟ್ಟಿಯು ತೀವ್ರವಾಗಿರುತ್ತದೆ. ಸೆಮಿನಾರ್‌ಗಳು ಮತ್ತು ಪ್ರದರ್ಶನಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕಗಳನ್ನು ಒದಗಿಸುತ್ತವೆ. (ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆ ಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸ ಯೋಗವಿದೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ನಿರೀಕ್ಷಿತ ಸರ್ವ ಕಾರ್ಯಗಳು ನೆರವೇರುತ್ತದೆ. ಆರ್ಥಿಕ ಮಟ್ಟವೂ ಏರಿಕೆಯಾಗಲಿದ್ದು, ಸ್ಥಿರಪ್ರಾಪ್ತಿ ಯೋಗವಿದೆ, ಸಂಸಾರ ಸುಖ, ಸಂಬ್ರಮಗಳ ವಾತಾವರಣ ಮೂಡಲಿದೆ. ಶುಭ ಕಾರ್ಯ ಪ್ರಯತ್ನ ಫಲಕೊಡುವ ಯೋಗವಿದೆ. (ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ಜೀವನ ಮುಂದಿನ ಹಾದಿಯ ಸ್ಪಷ್ಟ ಚಿತ್ರಣಗಳು ನಿಮಗೆ ತಿಳಿದಿದೆ. ನಿಮ್ಮ ಹಾದಿಯಲ್ಲಿ ಇತರರು ಬರದಂತೆ ನೋಡಿಕೊಳ್ಳಿ. ಗೊಂದಲ ಕ್ಕೊಳಕಾಗದಿರಿ. ದೃಢ ನಿರ್ಧಾರವಿರಲಿ. ಮುಂದೆ ದೊಡ್ಡ ಸವಾಲುಗಳು ಎದುರಾಗಲಿದ್ದು, ಅದನ್ನು ಎದುರಿಸಲು ಸಿದ್ಥರಾಗಿರಿ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ನವಮಿ
ನಕ್ಷತ್ರ: ಮಖಾ ನಕ್ಷತ್ರ.

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!