CM instructs to monitor drone cameras to avoid human-wildlife conflict

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ

ಬೆಂಗಳೂರು: ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.‌

ವಯಸ್ಸಾದ ಕಾರಣಕ್ಕೆ ಮತ್ತು ಹೊಸ ಯುವ ಹುಲಿಗಳ ದಾಳಿಯಿಂದ ಗಾಯಗೊಂಡ ಹಾಗೂ ಇನ್ನಿತರೆ ಕಾರಣಗಳಿಂದ ಅರಣ್ಯ ಪ್ರದೇಶದಿಂದ ಹೊರಗೆ ಸಂಚರಿಸುತ್ತಿರುವ 15-20 ಹುಲಿಗಳನ್ನು ದ್ರೋಣ್ ಕ್ಯಾಮರಾ ನೆರವಿನಿಂದ ತಕ್ಷಣ ಹಿಡಿಯಲು ಕ್ರಮ ಜರುಗಿಸಿ ಎನ್ನುವ ಸೂಚನೆ ನೀಡಿದರು.

ಈಗಾಗಲೇ ಎಂಟು ಕುಮ್ಕಿ ಆನೆಗಳನ್ನು ಕಾರ್ಯಾಚರಣೆಗೆ ಬಳಸಲಾಗುತ್ತಿದ್ದು ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿ ಮತ್ತು ಸ್ಕ್ವಾಡ್ ಗಳ ಸಂಖ್ಯೆಯನ್ನು ಸಂಘರ್ಷ ಪೀಡಿತ ಅರಣ್ಯ ಪ್ರದೇಶದಲ್ಲಿ ಬಳಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಈ ಬಗ್ಗೆ ಸಮಗ್ರ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿಗಳು, ಮಾನವ ವನ್ಯ ಜೀವಿ ಸಂಘರ್ಷ ನಿಯಂತ್ರಣಕ್ಕೆ ಈ ಕೆಳಗಿನ ಎಂಟು ಅಂಶದ ಕಾರ್ಯಕ್ರಮಕ್ಕೆ ಅಸ್ತು ಎಂದರು.‌

ಮಾನವ ವನ್ಯಜೀವಿ ಸಂಘರ್ಷ ಇರುವ ಪ್ರದೇಶಗಳನ್ನು ಗುರುತಿಸುವುದು ಮತ್ತೆ ಯಾವ ಸ್ವರೂಪದ ಸಂಘರ್ಷ ಇದೇ ಎಂದು ಪಟ್ಟಿ ಮಾಡುವುದು.

ಮಾನವ ಸಂಪನ್ಮೂಲದ ನಿರ್ವಹಣೆ ಸಂಘರ್ಷದ ತೀವ್ರತೆಯ ಆಧಾರದ ಮೇಲೆ ಅಧಿಕಾರಿ, ಸಿಬ್ಬಂದಿಯ ನಿಯೋಜನೆ.

ಗಸ್ತು: ಅರಣ್ಯದ ಅಂಚಿನ ಗ್ರಾಮಗಳಲ್ಲಿ ಗಸ್ತು ಹೆಚ್ಚಳ ಮಾಡುವುದು ಹಾಗೂ ರಿಜಿಸ್ಟರ್ ನಿರ್ವಹಣೆ.

ಹಿರಿಯ ಅಧಿಕಾರಿಗಳು ನಿಯಮಿತವಾಗಿ ಅರಣ್ಯದಂಚಿನ, ಅದರಲ್ಲೂ ಮಾನವ ವನ್ಯ ಜೀವಿ ಸಂಘರ್ಷ ಇರುವ ಗ್ರಾಮದಲ್ಲಿ ವಾಸ್ತವ್ಯ ಮಾಡುವುದು.

ಸ್ಥಳೀಯರನ್ನು ತೊಡಗಿಸಿಕೊಳ್ಳುವುದು, ಅರಣ್ಯದಂಚಿನ ಗ್ರಾಮದ ಉತ್ಸಾಹಿ ಯುವಕರು ಮತ್ತು ಹಿರಿಯರನ್ನು ಗುರುತಿಸಿ ಅರಣ್ಯ ಮಿತ್ರ ಎಂದು ಪರಿಗಣಿಸಿ ಗಸ್ತು, ವನ್ಯಜೀವಿ , ಸೆರೆ, ಕಾರ್ಯಾಚರಣೆ ವೇಳೆ ಅವರ ಸೇವೆ ಬಳಸಿಕೊಳ್ಳುವುದು.

ವನ್ಯಜೀವಿ ಸಂರಕ್ಷಣೆ ಕಾರ್ಯಾಚರಣೆಗೆ ವನ್ಯಜೀವಿಗಳು ಸಂಚರಿಸುವ ಕಾರ್ಯತಂತ್ರ ಸ್ಥಳಗಳಲ್ಲಿ 24/7 ವಾಹನ ಮತ್ತು ಅರಣ್ಯ ಸಿಬ್ಬಂದಿ ಲಭ್ಯವಾಗುವಂತೆ ಮಾಡುವುದು.

ಅಣಕು ಪ್ರದರ್ಶನ

ವನ್ಯಜೀವಿ ಸೆರೆ , ವನ್ಯಜೀವಿ ದಾಳಿ ಮಾಡಿದಾಗ ಏನು ಮಾಡಬೇಕು ಎಂಬ ಬಗ್ಗೆ ಮಾಹಿತಿ ನೀಡಲು ಅಣಕು ಪ್ರದರ್ಶನ ಏರ್ಪಡಿಸುವುದು.

ಜಿಲ್ಲಾ ಮಟ್ಟದಲ್ಲಿ ಸಮನ್ವಯ/ ಸಹಯೋಗ ಸಮಿತಿ ರಚನೆ

ತಾಲ್ಲೂಕು ಮಟ್ಟದಲ್ಲಿ ಉಪಸಮಿತಿ ರಚನೆ ಮಾಡಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ನೆರವು ಪಡೆಯುವುದು

ಈ ಸಮಿತಿ ನಿಯಮಿತವಾಗಿ ಸಭೆ ನಡೆಸಿ ಮಾನವ ವನ್ಯ ಜೀವಿ ಸಂಘರ್ಷ ನಿಯಂತ್ರಣಕ್ಕೆ ಶ್ರಮಿಸುವುದು

ಸಭೆಯಲ್ಲಿ ಚರ್ಚೆಗೆ ಬಂದ ಇತರೆ ಪ್ರಮುಖ ಸಂಗತಿಗಳು..

ಕರ್ನಾಟಕದಲ್ಲಿ ಆನೆಗಳ ಸಂಖ್ಯೆ 6395 ಇದ್ದು ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ಹುಲಿ ಸಂಖ್ಯೆ 563 ಇದ್ದು ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಹಾಗೂ 1879 ಚಿರತೆಗಳಿದ್ದು ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ.

ವನ್ಯಜೀವಿ ಹಾವಳಿಯಿಂದ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 2022-23ರಲ್ಲಿ 57,
2023-24ರಲ್ಲಿ 65, 2024-25ರಲ್ಲಿ 46, 2025-26ರಲ್ಲಿ 32 ಮಾನವ ಜೀವ ಹಾನಿ ಸಂಭವಿಸಿದೆ.

ಚಾಮರಾಜನಗರ, ಕೊಡಗು, ಹಾಸನ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಾನವ ಪ್ರಾಣ ಹಾನಿ ಪ್ರಕರಣಗಳು ಸಂಭವಿಸಿದೆ.

ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ 2024-25 ರಲ್ಲಿ ಮಾನವ ಪ್ರಾಣ ಹಾನಿ ಪ್ರಕರಣಗಳಲ್ಲಿ 30% ಕಡಿತವಾಗಿದೆ.

ವನ್ಯಜೀವಿಗಳು ಆಹಾರ ಹುಡುಕಿಕೊಂಡು ಹೊರಗೆ ಬರುವುದನ್ನು ನಿಗ್ರಹಿಸಬೇಕು.‌ ಬೇಸಿಗೆಯ ಕಾಲದಲ್ಲಿ ವನ್ಯಜೀವಿಗಳಿಗೆ ಅರಣ್ಯದೊಳಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕು

ಅರಣ್ಯದಲ್ಲಿ ವ್ಯಾಪಕವಾಗಿ ಹರಡುವ ಲಾಂಟಾನ ಕಳೆದ ತೆಗೆಯಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ವನ್ಯಪ್ರಾಣಿಗಳ ಮೇವಿಗೆ ಕೊರತೆ ಉಂಟಾಗುತ್ತದೆ.

ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ನರೇಂದ್ರ ಸ್ವಾಮಿ, ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ದೆಹಲಿ ಬಾಂಬ್ ಸ್ಪೋಟವನ್ನು ಬಿಹಾರ ಚುನಾವಣೆಯನ್ನು ಜೋಡಿಸುವ ಷಡ್ಯಂತ್ರ: ಬಿ.ವೈ. ವಿಜಯೇಂದ್ರ ಟೀಕೆ

ದೆಹಲಿ ಬಾಂಬ್ ಸ್ಪೋಟವನ್ನು ಬಿಹಾರ ಚುನಾವಣೆಯನ್ನು ಜೋಡಿಸುವ ಷಡ್ಯಂತ್ರ: ಬಿ.ವೈ. ವಿಜಯೇಂದ್ರ ಟೀಕೆ

ಬಾಂಬ್ ಸ್ಫೋಟದಂಥ ಸಂದಿಗ್ಧ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಟ್ಟಾಗಿ ಒಂದೇ ಧ್ವನಿಯಲ್ಲಿ ಮಾತನಾಡಬೇಕಾಗುತ್ತದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ( B.Y. Vijayendra) ತಿಳಿಸಿದ್ದಾರೆ.

[ccc_my_favorite_select_button post_id="116125"]
ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು

[ccc_my_favorite_select_button post_id="116144"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!