ದೆಹಲಿ ಬಾಂಬ್ ಸ್ಪೋಟವನ್ನು ಬಿಹಾರ ಚುನಾವಣೆಯನ್ನು ಜೋಡಿಸುವ ಷಡ್ಯಂತ್ರ: ಬಿ.ವೈ. ವಿಜಯೇಂದ್ರ ಟೀಕೆ

Conspiracy to link Delhi bomb blast with Bihar elections: B.Y. Vijayendra

ಶಿವಮೊಗ್ಗ: ಬಾಂಬ್ ಸ್ಫೋಟದಂಥ ಸಂದಿಗ್ಧ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಟ್ಟಾಗಿ ಒಂದೇ ಧ್ವನಿಯಲ್ಲಿ ಮಾತನಾಡಬೇಕಾಗುತ್ತದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ( B.Y. Vijayendra) ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಉಗ್ರಗಾಮಿ ಸಂಘಟನೆಗಳು ಇಷ್ಟು ಕೆಟ್ಟದಾಗಿ ನಡೆದುಕೊಳ್ಳಬೇಕಾದರೆ, ನಾವೆಲ್ಲರೂ ಭಾರತೀಯರು ಎಂಬ ಮನೋಭಾವದಿಂದ ದ್ವಂದ್ವ ಹೇಳಿಕೆ ನೀಡದೇ ದೇಶದ ಪರವಾಗಿ ಒಗ್ಗಟ್ಟಿನ ಪ್ರದರ್ಶನ ಮಾಡಬೇಕಿರುವುದು ಆದ್ಯತೆ ಆಗಬೇಕಿತ್ತು.

ರಾಹುಲ್ ಗಾಂಧಿಯವರು ವಿಪಕ್ಷ ನಾಯಕರಾಗಿದ್ದರೂ ದೆಹಲಿಯ ಈ ಭಯೋತ್ಪಾದಕರ ದಾಳಿ ಕುರಿತು ತಮ್ಮ ಪ್ರತಿಕ್ರಿಯೆ ನೀಡಿಲ್ಲ. ಮತ್ತೊಂದು ಕಡೆ ಕಾಂಗ್ರೆಸ್ ಪಕ್ಷದ ಹಿರಿಯರು ಮನ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.

ಬಿಹಾರ ಚುನಾವಣೆಯನ್ನು ಇದಕ್ಕೆ ಜೋಡಿಸುವ ಷಡ್ಯಂತ್ರ, ಕುತಂತ್ರವೂ ನಡೆಯುತ್ತಿದೆ ಎಂದು ಆಕ್ಷೇಪಿಸಿದರು. ಇದು ಕಾಂಗ್ರೆಸ್ಸಿಗರ ಮೂರ್ಖತನದ ಪ್ರದರ್ಶನ ಮಾತ್ರವಲ್ಲ ದೇಶದ್ರೋಹದ ಕೆಲಸ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷದ ಹಿರಿಯರು, ದೇಶದ ಎಲ್ಲ ಮುಖಂಡರು ಇಂಥ ಸಂದಿಗ್ಧ ಸಂದರ್ಭದಲ್ಲಿ ಒಟ್ಟಾಗಿ ಯೋಚಿಸಬೇಕು ಎಂದು ಮನವಿ ಮಾಡಿದರು.

ಮೊನ್ನೆ ನವದೆಹಲಿಯ ಕೆಂಪು ಕೋಟೆಯ ಹತ್ತಿರ ಕಾರಿನಲ್ಲಿ ಬಾಂಬ್ ಸ್ಫೋಟ ಆಗಿದ್ದು, ಇದು ಭಯೋತ್ಪಾದನಾ ದಾಳಿ ಎಂದು ತಿಳಿಸಿದರು. ಗೃಹ ಸಚಿವ ಅಮಿತ್ ಶಾ ಜೀ ಅವರು ತಕ್ಷಣ ಅಲ್ಲಿಗೆ ಭೇಟಿ ಕೊಟ್ಟರು. ಮರುದಿನ ಪ್ರಧಾನಿ ನರೇಂದ್ರ ಮೋದಿ ಜೀ ಅವರೂ ಆಸ್ಪತ್ರೆಗಳಿಗೂ ಭೇಟಿ ಕೊಟ್ಟಿದ್ದಾರೆ. ಸಂಸತ್ ಭವನ, ಬಿಜೆಪಿ ಕೇಂದ್ರ ಕಚೇರಿ, ವಾಯು ಪಡೆ ಕಚೇರಿ, ಸೇನಾ ಭವನ ಮೊದಲಾದ ಪ್ರಮುಖ ಸ್ಥಳಗಳು ಟಾರ್ಗೆಟ್ ಪಟ್ಟಿಯಲ್ಲಿ ಇತ್ತೆಂದು ಬಹಿರಂಗವಾಗಿದೆ ಎಂದರು.

ಒಳಜಗಳ ಬದಿಗಿಡಿ- ರೈತರ ಹಿತ ಕಾಪಾಡಿ..

ಕಬ್ಬು ಬೆಳೆಗಾರರು ಸಂಕಷ್ಟದಲ್ಲಿದ್ದು, ಒಂದು ತಿಂಗಳಿಂದ ಪ್ರತಿಭಟನೆಗಳು ನಿರಂತರವಾಗಿ ನಡೆಯುತ್ತಿದೆ. ನಾನೂ ಬೆಳಗಾವಿ ಜಿಲ್ಲೆಯಲ್ಲಿ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಿದ್ದೇನೆ. ಮುಖ್ಯಮಂತ್ರಿಗಳು ಸಭೆ ನಡೆಸಿದ್ದರೂ ವಾತಾವರಣ ತಿಳಿ ಆಗುತ್ತಿಲ್ಲ.

ಬೀದರ್, ಬಾಗಲಕೋಟೆ ಮೊದಲಾದ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಕಾವೇರುತ್ತಿದೆ ಎಂದು ಗಮನ ಸೆಳೆದರು.

ಮುಖ್ಯಮಂತ್ರಿಗಳು ತಮ್ಮ ಒಳಜಗಳ ಬದಿಗಿಡಬೇಕು. ರೈತರ ಹಿತ ಕಾಪಾಡುವಲ್ಲಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು. ಉಸ್ತುವಾರಿ ಸಚಿವರನ್ನು ಜಿಲ್ಲೆಗಳಿಗೆ ಕಳಿಸಿಕೊಡಿ ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಪಕ್ಷದವರು ಬಳೆ ಕಾರ್ಖಾನೆ ತೆರೆಯಬೇಕಾದೀತು

ಮೂರ್ಖ ಕಾಂಗ್ರೆಸ್ ಪಕ್ಷದವರು ಸ್ವಾತಂತ್ರ್ಯ ಬಂದಾಗಿನಿಂದ ನಡೆದ ಘಟನೆಗಳನ್ನು ಅವಲೋಕನ ಮಾಡಬೇಕು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಎಷ್ಟು ಸಲ ಕೈಗೆ ಬಳೆ ಹಾಕಬೇಕಾಗಿತ್ತು ಎಂದು ಒಂದು ಕ್ಷಣ ಯೋಚಿಸಿ ಎಂದು ತಿಳಿಸಿದರು.

ಬಳೆ ಹಾಕುವುದಲ್ಲ; ನಿಮ್ಮ ಕಾಂಗ್ರೆಸ್ ಪಕ್ಷದವರು ಒಂದು ಬಳೆ ಕಾರ್ಖಾನೆ ತೆರೆಯಬೇಕಾಗುತ್ತದೆ ಎಂದು ತಿಳಿಸಿದರು. ಉಗ್ರಗಾಮಿ ಚಟುವಟಿಕೆಗೆ ಯೋಧರು, ಭಾರತೀಯರು ಅಷ್ಟು ಬಾರಿ ಪ್ರಾಣ ತೆತ್ತಿದ್ದಾರೆ ಎಂದು ಗಮನ ಸೆಳೆದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!