Bihar election results; Karnataka BJP celebrates by distributing laddus

ಬಿಹಾರ ಚುನಾವಣೆ ಫಲಿತಾಂಶ; ಲಾಡು ಹಂಚಿ ಸಂಭ್ರಮಿಸಿದ ಕರ್ನಾಟಕ ಬಿಜೆಪಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ (Narendra Modi) ನಾಯಕತ್ವ ಮುಂದುವರಿಯುವ ಸಂದೇಶವನ್ನು ಬಿಹಾರದ (Bihar) ಜನತೆ ನೀಡಿದ್ದಾರೆ. ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೂ ಇದೇ ಗತಿ ಆಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

ಬಿಹಾರ ಚುನಾವಣೆ ಎನ್‌ಡಿಎ ಮೈತ್ರಿಕೂಡ ಭಜರಿಗೆ ಗೆಲುವಿನತ್ತ ದಾಪುಗಾಲಿಟ್ಟಿರುವ ಹಿನ್ನಲೆಯಲ್ಲಿ ಕರ್ನಾಟಕ ಬಿಜೆಪಿ ಲಾಡು ಚಿ ಸಂಭ್ರಮಿಸಿದರು.

ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್. ಅಶೋಕ, ಕರ್ನಾಟಕ ಬಿಜೆಪಿ ಪರವಾಗಿ ಬಿಹಾರದ ಜನತೆಗೆ ಧನ್ಯವಾದ ಸಲ್ಲಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಮುಂದುವರಿಯಬೇಕು ಹಾಗೂ ಬಿಹಾರಕ್ಕೆ ರೌಡಿಗಳ ಆಡಳಿತ ಬೇಡ ಎಂದು ಮತದಾರರು ಸಂದೇಶ ನೀಡಿದ್ದಾರೆ.

ಲಾಲೂ ಪ್ರಸಾದ್‌ ಯಾದವ್‌ ಕುಟುಂಬ ಸರ್ಕಾರದ ಹಣವನ್ನು ಲೂಟಿ ಮಾಡಿ ಗನ್‌ ಮೂಲಕ ಆಡಳಿತ ನಡೆಸಿತ್ತು. ಅದಕ್ಕಾಗಿ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಮರನ್ನು ಓಲೈಕೆ ಮಾಡಿ ಜನರಿಗೆ ಟೋಪಿ ಹಾಕಿದ್ದಾರೆ. ಆದ್ದರಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸ್ಥಿತಿಯೂ ಮಹಾಘಟಬಂಧನ್‌ನಂತೆಯೇ ಆಗಲಿದೆ. ರಾಹುಲ್‌ ಗಾಂಧಿ ಐರನ್‌ ಲೆಗ್‌ ಆಗಿದ್ದು, ಎಲ್ಲ ಚುನಾವಣೆಗಳನ್ನು ಸೋತಿದ್ದಾರೆ. ಅವರು ಸೋಲನ್ನು ಎದುರಿಸಲಾಗದೆ ವಿದೇಶಕ್ಕೆ ಓಡಲಿದ್ದಾರೆ. ಈ ಚುನಾವಣಾ ಫಲಿತಾಂಶದಿಂದ ಕೇಂದ್ರ ಸರ್ಕಾರ ಇನ್ನಷ್ಟು ಬಲಿಷ್ಠವಾಗಿ ಕಾರ್ಯನಿರ್ವಹಿಸಲಿದೆ ಎಂದರು.

ಕಾಂಗ್ರೆಸ್‌ನವರು ಮತಗಳ್ಳತನ, ಇವಿಎಂ ಸರಿ ಇಲ್ಲ ಎಂದು ಹೇಳಿದ್ದನ್ನೇ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್‌ನ ಕೂಸು. ಆಗ ಸರಿ ಇದ್ದ ಯಂತ್ರಗಳು ಈಗ ಸರಿ ಇಲ್ಲ ಎನ್ನುತ್ತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಅತ್ಯಧಿಕ ಬಹುಮತ ಪಡೆದು ಗೆದ್ದಾಗ ಮತಗಳ್ಳತನ ನಡೆದಿಲ್ಲ. ಈಗ ಮಾತ್ರ ಮತಗಳ್ಳತನ ನಡೆದಿದೆ ಎಂದು ಆರೋಪಿಸುತ್ತಿದ್ದಾರೆ.

ಈ ಫಲಿತಾಂಶ ಸಿದ್ದರಾಮಯ್ಯನವರ ಪಾಲಿಗೆ ಹಬ್ಬವಾಗಿದೆ. ಏಕೆಂದರೆ ಇನ್ನು ಸಿಎಂ ಸಿದ್ದರಾಮಯ್ಯ ರಾಹುಲ್‌ ಗಾಂಧಿಯನ್ನೇ ಆಟವಾಡಿಸುತ್ತಾರೆ. ಡಿ.ಕೆ.ಶಿವಕುಮಾರ್‌ ಹೇಳಿದ್ದೆಲ್ಲವೂ ಸುಳ್ಳಾಗಿದೆ.

ರಾಜ್ಯದಲ್ಲಿ ಅಭಿವೃದ್ಧಿಯಾಗುತ್ತಿಲ್ಲ. ರೈತರ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದೆ. ರೈತರಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ. ಜೈಲಿನಲ್ಲಿ ಕೈದಿಗಳ ಕೈಗೆ ಮೊಬೈಲ್‌ ಸಿಗುತ್ತಿದೆ. ಎಲ್ಲ ತೆರಿಗೆಗಳು ಏರಿಕೆಯಾಗಿದೆ. ಆದ್ದರಿಂದ ಈ ಸರ್ಕಾರವನ್ನು ಜನರು ತಿರಸ್ಕರಿಸುತ್ತಾರೆ ಎಂದರು.

ರಾಜಕೀಯ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ; ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="119679"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!