ಬಿಹಾರ ಚುನಾವಣೆ ಫಲಿತಾಂಶ: NDAಗೆ ಭರ್ಜರಿ ಮುನ್ನಡೆ

Bihar election results: NDA takes a huge lead

ಬೆಂಗಳೂರು: ತೀವ್ರ ಜಿದ್ದಾಜಿದ್ದಿಯಿಂದ ನಡೆದ ಬಿಹಾರ ವಿಧಾನಸಭಾ ಚುನಾವಣೆ (Bihar election,) ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಎನ್‌ಡಿಎಗೆ ಭರ್ಜರಿ ಮುನ್ಸೂಚನೆ ದೊರೆತಿದೆ.

ವೋಟ್ ಚೋರಿ ಆರೋಪ, ನಿರುದ್ಯೋಗ ಸಮಸ್ಯೆ, ಉಚಿತ ಯೋಜನೆ, ಸರ್ಕಾರಿ ಉದ್ಯೋಗ ಘೋಷಣೆ ಸೇರಿದಂತೆ ತೀವ್ರ ಜಿದ್ದಾಜಿದ್ದಿಯಿಂದ ನಡೆದ ಬಿಹಾರ ವಿಧಾನಸಭಾ ಚುನಾವಣೆ (Bihar election,) ಮತ ಎಣಿಕೆ ಕಾರ್ಯ ತೀವ್ರಗತಿಯಲ್ಲಿ ಸಾಗಿದೆ.

ದೇಶದ ವಿಶ್ವಾಸಾರ್ಹ ಸುದ್ದಿ ಸಂಸ್ಥೆ ದೈನಿಕ್ ಬಾಸ್ಕರ್ ವರದಿ ಅನ್ವಯ ಇಂದು ಬೆಳಗ್ಗೆ 9.30ರಂತೆ 243 ಕ್ಷೇತ್ರಗಳಲ್ಲಿ 219 ಕ್ಷೇತ್ರಗಳ ಮತ ಎಣಿಕೆ ಅನ್ಚಯ ಆಡಳಿತಾರೂಢ ಎನ್‌ಡಿಎ 160 ಸ್ಥಾನಗಳಲ್ಲಿ ಮುನ್ನಡೆ ದೊರೆತಿದೆ.

ಉಳಿದಂತೆ ಮಹಾಘಟಬಂಧನ 62 ಸ್ಥಾನಗಳಲ್ಲಿ, ಇತರೆ 5 ಸ್ಥಾನಗಳಲ್ಲಿ ಮುಂದಿದ್ದಾರೆ.

ಇನ್ನೂ ಚುನಾವಣೆ ಆಯೋಗದ ಮಾಹಿತಿ ಅನ್ವಯ BJP – 25, JDU -16, RJD -10, LJPRV – 5, Cong -3, CPI (ML)(L) -1, TPLRSP -1 ಕ್ಷೇತ್ರದಲ್ಲಿ ಮುಂದಿದೆ ಎಂದು ವೆಬ್ಸೈಟ್ ಖಾತೆಯಲ್ಲಿ ಪ್ರಕಟಿಸಿದೆ.

ಚುನಾವಣೆ ಬಳಿಕ ಮುನ್ನ ಹಲವು ಸುದ್ದಿ ಸಂಸ್ಥೆಗಳು, ಬಿಹಾರ ವಿಧಾನಸಭೆ ಚುನಾವಣೆಯ ಚುನಾವಣೋತ್ತರ ಮತಗಟ್ಟೆ ಸಮೀಕ್ಷೆಗಳನ್ನು ಬಹಿರಂಗಗೊಳಿಸಿದ್ದು, ಹಲವು ಸಮೀಕ್ಷೆಗಳು ಎನ್‌ಡಿಎಗೆ ಬಹುಮತ ಸಿಗಲಿವೆ ಎಂದು ಅಂದಾಜಿಸಿವೆ.

ದೇಶದ ವಿಶ್ವಾಸಾರ್ಹ ದೈನಿಕ್ ಭಾಸ್ಕರ ಮೀಡಿಯಾ ಸಂಸ್ಥೆ ಬಿಹಾರ ಚುನಾವಣೆಯಲ್ಲಿ ಎನ್‌ಡಿಎಗೆ 145 ರಿಂದ 160 ಹಾಗೂ ಮಹಾಘಟಬಂಧನ್‌ಗೆ 73ರಿಂದ 91 ಸ್ಥಾನಗಳು ಲಭಿಸಲಿವೆ ಎಂದು ಭವಿಷ್ಯ ನುಡಿದಿದೆ.

ಉಳಿದಂತೆ News 24 ಮಹಾಘಟಬಂಧನ್‌ಗೆ 130-144, NDAಗೆ 95-109 ಇತರೆ 0-8 ಸ್ಥಾನ ಸಿಗಬಹುದು ಎಂದಿದೆ.

IANS-Matrize ಸಂಸ್ಥೆಯ ಪ್ರಕಾರ ಎನ್‌ಡಿಎಗೆ 147 ರಿಂದ 167 ಸ್ಥಾನಗಳು ಹಾಗೂ ಮಹಾಘಟಬಂಧನ್‌ಗೆ 70 ರಿಂದ 90 ಸ್ಥಾನಗಳು ಸಿಗಲಿವೆ ಎಂದು ಅಂದಾಜಿಸಿವೆ.

ಡಿವಿ ರಿಸರ್ಚ್ ಪ್ರಕಾರ, ಎನ್‌ಡಿಎ 137-152 ಸ್ಥಾನಗಳೊಂದಿಗೆ ಸರಕಾರ ರಚಿಸುವ ನಿರೀಕ್ಷೆಯಿದೆ. ಮತ್ತೊಂದೆಡೆ, ಮಹಾಘಟಬಂಧನ್ 83-98 ಸ್ಥಾನಗಳನ್ನು ಪಡೆಯುವ ನಿರೀಕ್ಷೆ ಇದೆ. ಜನ್ ಸುರಾಜ್ 2-4 ಸ್ಥಾನಗಳನ್ನು ಮತ್ತು ಇತರರು 1-8 ಸ್ಥಾನಗಳನ್ನು ಪಡೆಯಬಹುದು ಎನ್ನುತ್ತಿದೆ.

ಜೆವಿಸಿಯ ಸಮೀಕ್ಷೆಯ ಪ್ರಕಾರ, ಎನ್‌ಡಿಎ 142 ಸ್ಥಾನಗಳನ್ನು, ಎಂಜಿಬಿ 95 ಮತ್ತು ಜೆಎಸ್‌ಪಿ 1 ಮತ್ತು ಇತರರು 5 ಸ್ಥಾನಗಳನ್ನು ಪಡೆಯಲಿದ್ದಾರೆ ಎಂದು ಊಹಿಸಲಾಗಿದೆ.

ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಸಮೀಕ್ಷೆಯು ಎನ್‌ಡಿಎಗೆ 147-167 ಸ್ಥಾನಗಳು ಸಿಗುವ ಸುಳಿವು ನೀಡಿದ್ದು, ಇದು ಆರಾಮದಾಯಕ ಬಹುಮತವಾಗಿದೆ. ಮ್ಯಾಟ್ರಿಜ್ ಪ್ರಕಾರ, ಮಹಾಘಟಬಂಧನ್ ಚುನಾವಣೆಯಲ್ಲಿ 70-90 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!