National Industrial Corridor Development Program (NICDP) covering 9 districts of Karnataka

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ನವದೆಹಲಿ: ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಶ್‌ ಗೋಯಲ್‌ (Piyush Goyal) ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದರು.

ನವದೆಹಲಿಯಲ್ಲಿ ಗುರುವಾರ ವಾಣಿಜ್ಯ ಸಚಿವಾಲಯದ ಕಚೇರಿಗೆ ತೆರಳಿ ಸಚಿವ ಗೋಯಲ್‌ ಅವರನ್ನು ಭೇಟಿಯಾದ ಕುಮಾರಸ್ವಾಮಿ ಅವರು; ಈ ಯೋಜನೆ ಕುರಿತ ಮನವಿಯನ್ನು ಸಲ್ಲಿಸಿ ರಾಜ್ಯದ ಕೈಗಾರಿಕಾಭಿವೃದ್ಧಿ ಬಗ್ಗೆ ವಿವಿಧ ಆಯಾಮಗಳಲ್ಲಿ ಚರ್ಚೆ ನಡೆಸಿದರು.

ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಗಳೂರು, ಹುಬ್ಬಳ್ಳಿ-ಧಾರವಾಡ, ರಾಯಚೂರು ಮತ್ತು ಬೀದರ್ ಜಿಲ್ಲೆಗಳನ್ನು ಒಳಗೊಂಡ ಸುವಿಶಾಲವಾದ, ಬಹುವ್ಯಾಪ್ತಿಯುಳ್ಳ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP) ಅನುಷ್ಠಾನ ಮಾಡಬೇಕೆಂದು ಕೋರಿ ಗೋಯಲ್‌ ಅವರನ್ನು ಕೋರಲಾಯಿತು.

ಕೈಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿ ರಾಜ್ಯವಾಗಿರುವ ಕರ್ನಾಟಕದಾದ್ಯಂತ ಸೂಕ್ತ ಕೈಗಾರಿಕಾ ಕಾರಿಡಾರ್ ಯೋಜನೆಯ ಚೌಕಟ್ಟಿನಡಿಯಲ್ಲಿ ಕೈಗಾರಿಕಾ ಪಾರ್ಕುಗಳನ್ನು ಸ್ಥಾಪಿಸುವ ಕುರಿತಂತೆ ಸಚಿವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಲಾಯಿತು ಎಂದು ಸಚಿವ ಕುಮಾರಸ್ವಾಮಿ ಅವರು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಂತೆ ಪ್ರಾದೇಶಿಕ ಕೈಗಾರಿಕಾ ಬೆಳವಣಿಗೆಯನ್ನು ಬಲಪಡಿಸಿ ಉತ್ತೇಜಿಸಲು, ಸಾಗಾಣಿಕೆಯ ಮೂಲಸೌಕರ್ಯವನ್ನು ಅಧಿಕವಾಗಿ ಅಭಿವೃದ್ಧಿಪಡಿಸಲು ಹಾಗೂ ಕರ್ನಾಟಕದ ಉದ್ದಗಲಕ್ಕೂ ಬೃಹತ್ ಪ್ರಮಾಣದಲ್ಲಿ ಉದ್ಯೋಗಾವಕಾಶ ಸೃಷ್ಟಿಸಲು ಈ ಯೋಜನೆಯು ಬಹುದೊಡ್ಡ ಮಟ್ಟದಲ್ಲಿ ಕೊಡುಗೆ ನೀಡುತ್ತದೆ ಎಂಬ ಅಂಶವನ್ನು ಸಚಿವ ಗೋಯಲ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ನನ್ನ ಪ್ರಸ್ತಾವನೆಗೆ ಅವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದರು. ರಾಜ್ಯದ ಕೈಗಾರಿಕಾಭಿವೃದ್ಧಿಗೆ ಕೈಜೋಡಿಸುವುದಾಗಿ ಭರವಸೆ ನೀಡಿದರು ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.

ಈ ಯೋಜನೆ ಅನುಷ್ಠಾನಕ್ಕೆ ಬಂದರೆ ಸಾಗಾಣಿಕೆ ಸುಲಭವಾಗಿ ಕೈಗಾರಿಕಾಭಿವೃದ್ಧಿ ವೇಗಗತಿಯಲ್ಲಿ ಸಾಗುತ್ತದೆ. ಉದ್ದೇಶಿತ ಜಿಲ್ಲೆಗಳಲ್ಲಿ ಯೋಜನೆ ಬಂದರೆ ಇಡೀ ರಾಜ್ಯಕ್ಕೆ ಸಮಗ್ರವಾಗಿ ಅನುಕೂಲ ಆಗುತ್ತದೆ. ಮುಖ್ಯವಾಗಿ ಈ ಪ್ರದೇಶಗಳು ಸಾಮೂಹಿಕವಾಗಿ ದೊಡ್ಡ ಮಟ್ಟದಲ್ಲಿ ಕೈಗಾರಿಕಾ ಅಭಿವೃದ್ಧಿ ಕಾಣುವುದಲ್ಲದೆ, ಸಮತೋಲಿತ ಪ್ರಾದೇಶಿಕ ಬೆಳವಣಿಗೆಗೆ ಕಾಣಿಕೆ ನೀಡುತ್ತವೆ ಕುಮಾರಸ್ವಾಮಿ ಚರ್ಚೆಯ ವೇಳೆ ಒತ್ತಿ ಹೇಳಿದರು.

ಈ ಪ್ರಸ್ತಾವಿತ ಕೈಗಾರಿಕಾ ಪಾರ್ಕುಗಳನ್ನು ಸೂಕ್ತವಾದ ಕೈಗಾರಿಕಾ ಕಾರಿಡಾರ್ ಇಲ್ಲವೇ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP) ಚೌಕಟ್ಟಿನ ಅಡಿಯಲ್ಲಿ ಪರಿಗಣಿಸಬೇಕೆಂದು ವಿನಂತಿಸಿದ ಕುಮಾರಸ್ವಾಮಿ ಅವರು; ಈ ಜಿಲ್ಲೆಗಳನ್ನು ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್‌ಗಳಿಗೆ ಸಂಯೋಜಿಸುವ ಮೂಲಕ ಕರ್ನಾಟಕವು ಉದ್ಯೋಗ ಸೃಷ್ಟಿಯಲ್ಲಿ ನಿರ್ಣಾಯಕ ಪಾತ್ರ ವಹಿಸಲು ಅನುಕೂಲವಾಗುತ್ತದೆ. ಅಲ್ಲದೆ, ಸಾಕಾಣಿಗೆ ಸುಲಭವಾಗಿ ಖಾಸಗಿ ಬಂಡವಾಳ ಹೂಡಿಕೆಯಲ್ಲೂ ಗಮನಾರ್ಹ ಪ್ರಗತಿ ಸಾಧಿಸಲಿದೆ ಎಂದು ಉಕ್ಕು ಸಚಿವರು ಗೋಯಲ್‌ ಅವರಿಗೆ ವಿವರಿಸಿದರು.

ಸಚಿವರಿಂದ ಸಕಾರಾತ್ಮಕ ಪ್ರತಿಕ್ರಿಯೆ

ಸಚಿವ ಗೋಯಲ್‌ ಅವರೊಂದಿಗೆ ಚರ್ಚೆ ಬಗ್ಗೆ ಸಂತಸ ವ್ಯಕ್ತಪಡಸಿದ ಕುಮಾರಸ್ವಾಮಿ ಅವರು; ವಾಣಿಜ್ಯ ಮತ್ತು ಕೈಗಾರಿಕೆ ಸಚಿವರು ಈ ಪ್ರಸ್ತಾವನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರಲ್ಲದೆ, ಯೋಜನೆಯ ಅನುಷ್ಠಾನದ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದರು. ಅಲ್ಲದೆ; ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಉತ್ಪಾದನೆ ಮತ್ತು ಕೈಗಾರಿಕಾ ಸ್ಪರ್ಧಾತ್ಮಕತೆಯನ್ನು ಬಲಪಡಿಸುವ ಕೇಂದ್ರ ಸರ್ಕಾರದ ವಿಶಾಲ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಉಪಕ್ರಮವನ್ನು ದೊಡ್ಡ ಪ್ರಮಾಣದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಯೋಜನೆಯಿಂದ ರಾಜ್ಯದ ಉತ್ತರ, ಮಧ್ಯ ಮತ್ತು ದಕ್ಷಿಣ ಪ್ರದೇಶಗಳಲ್ಲಿ ಕೈಗಾರಿಕಾ ವಿಸ್ತರಣೆಗೆ ಒತ್ತು ನೀಡುವಲ್ಲಿ ಪ್ರಮುಖ ಹೆಜ್ಜೆಯಾಗಿದೆ ಎಂಬುದಾಗಿ ಕುಮಾರಸ್ವಾಮಿ ತಿಳಿಸಿದರು.

ಸಮತೋಲಿತ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿ

ಪ್ರಸ್ತಾವಿತ ಕೈಗಾರಿಕಾ ಪಾರ್ಕುಗಳು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸುವ, ಪ್ರಾದೇಶಿಕ ಪೂರೈಕೆ ಸರಪಳಿಯ ಸಂಪರ್ಕಗಳನ್ನು ಮತ್ತಷ್ಟು ಬಲಪಡಿಸುವ ಹಾಗೂ ಹುಬ್ಬಳ್ಳಿ-ಧಾರವಾಡ ಮತ್ತು ಮಂಗಳೂರಿನಲ್ಲಿ ಸಾಗಣೆ ಮತ್ತು ಉತ್ಪಾದನೆಯಿಂದ ಮೊದಲುಗೊಂಡು ರಾಯಚೂರಿನಲ್ಲಿ ಕೃಷಿ ಸಂಸ್ಕರಣೆ, ಮೈಸೂರು ಮತ್ತು ಕೋಲಾರದಲ್ಲಿ ಮೌಲ್ಯವರ್ಧಿತ ವಲಯಗಳ ವಿಸ್ತರಣೆವರೆಗೆ ವಿಶೇಷ ಕೈಗಾರಿಕಾ ಸಮೂಹಗಳನ್ನು ಉತ್ತೇಜಿಸುತ್ತವೆ ಎಂದು ಸಚಿವ ಕುಮಾರಸ್ವಾಮಿ ವಿವರಿಸಿದರು.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!