ಬೆಂಗಳೂರು: ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ (Salumarada timmakka) ನಿಧನರಾಗಿದ್ದಾರೆ. ಅವರಿಗೆ 114 ವರ್ಷ ವಯಸ್ಸಾಗಿತ್ತು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ವಿಧಿವಶರಾಗಿದ್ದಾರೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ, ಹುಲಿಕಲ್ ಗ್ರಾಮದ ಚಿಕ್ಕಯ್ಯರನ್ನು ವಿವಾಹವಾಗಿದ್ದರು. ಆದರೆ ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ.
ಹೀಗಾಗಿ ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ್ದರು.
ಸಾಲು ಮರದ ತಿಮ್ಮಕ್ಕೆ ಎಂದೇ ಪ್ರಸಿದ್ಧರಾಗಿದ್ದ ಇವರಿಗೆ 2019ರಲ್ಲಿ ಪದ್ಮಶ್ರೀ ಲಭಿಸಿತ್ತು.
ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ನಾಯಕರು, ಗಣ್ಯರಿಂದ ಸಂತಾಪ ವ್ಯಕ್ತವಾಗಿದೆ.