Education Minister Madhu Bangarappa gives good news to PU students

ಪಿಯು ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶುಭ ಸುದ್ದಿ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ನೀಡಲಾಗುತ್ತಿರುವ ‘ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಯ 11 ಮತ್ತು 12ನೇ ತರಗತಿ ಮಕ್ಕಳಿಗೆ ವಿಸ್ತರಿಸಲು ಕ್ರಮಕೈಗೊಳ್ಳಲಾಗುವುದು. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಹಾಗೂ ಪಂಡಿತ್ ಜವಾಹರಲಾಲ್ ನೆಹರು ಅವರ ಜಯಂತಿ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಜನಪ್ರಿಯ ಮುಖ್ಯಮಂತ್ರಿಗ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ದೇಶದಲ್ಲೇ ಮೊದಲ ಬಾರಿಗೆ ಆಯೋಜಿಸಿದ್ದ “ಮೆಗಾ ಪಿ.ಟಿ.ಎಂ (ಪೋಷಕರು-ಶಿಕ್ಷಕರ ಮಹಾಸಭೆ)” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು

ಈ ವೇಳೆ 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ‘ಮೌಲ್ಯ ಶಿಕ್ಷಣ’ ದ ಡಿಜಿಟಲ್ ಅವತರಣಿಕೆಯ ಪುಸ್ತಕವನ್ನು ಬಿಡುಗಡೆ ಮಾಡಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಗೌರವಿಸಲಾಯಿತು.

ಗೌರಿಬಿದನೂರಿನ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ಎನ್. ಸಂಕೇತ್ ರಾಜ್ JEE ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಭಾರತದ ಪ್ರತಿಷ್ಠಿತ ಇಂಜಿನಿಯರಿಂಗ್ ಸಂಸ್ಥೆಯಾದ ಐಐಟಿ ಖರಗ್‌ಪುರ್‌ನಲ್ಲಿ ಪ್ರವೇಶ ಪಡೆದು ಎಲ್ಲರಿಗೂ ಮಾದರಿಯಾಗಿದ್ದು ಅವರಿಗೆ 1 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ನೀಡಿ, ಅಭಿನಂದಿಸಿ ಗೌರವಿಸಲಾಯಿತು.

ಬಳಿಕ ಮಕ್ಕಳ ಶೈಕ್ಷಣಿಕ ಪ್ರಗತಿ ಮತ್ತು ಭವಿಷ್ಯದ ಬಗ್ಗೆ ಪೋಷಕರು, ಮಕ್ಕಳು ಮತ್ತು ಶಿಕ್ಷಕರು ಒಟ್ಟಾಗಿ ಚರ್ಚಿಸಲು ಒಂದು ಉತ್ತಮ ವೇದಿಕೆಯಾಗಿದ್ದು, ಈ ವೇಳೆ ರಾಜ್ಯದ ವಿವಿಧ ಭಾಗಗಳಿಂದ ಆನ್ಲೈನ್ ಮೂಲಕ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರೊಂದಿಗೆ ಸಂವಾದ ನಡೆಸಿ ಅವರ ಪ್ರಶ್ನೆಗಳಿಗೆ ಉತ್ತರಿಸಿದರು‌.

ಬಳಿಕ ಬೈಲಹೊಂಗಲದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ರಾಕೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಯ 11 ಮತ್ತು 12ನೇ ತರಗತಿ ಮಕ್ಕಳಿಗೆ ವಿಸ್ತರಿಸಲು ಕ್ರಮಕೈಗೊಳ್ಳಲಾಗುವುದು. ಪಿಯು ಕಾಲೇಜು ವಿದ್ಯಾರ್ಥಿಗಳಿಗೂ ಸೌಲಭ್ಯ ಒದಗಿಸುವ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು’ ಎಂದು ಹೇಳಿದರು.

‘ರಾಕೇಶ್ ಹೇಳಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ತರಗತಿಗಳು ನಡೆಯುತ್ತವೆ. ಮನೆಗಳಿಂದ ಬೆಳಗ್ಗೆ ಬೇಗನೆ ಹೊರಡುತ್ತಾರೆ. ಹಾಗಾಗಿ, ಪಿಯು ಕಾಲೇಜುಗಳಿಗೂ ಮಧ್ಯಾಹ್ನದ ಊಟವನ್ನು ವಿಸ್ತರಿಸಬೇಕು ಎಂಬ ಬೇಡಿಕೆ ಸೂಕ್ತವಾಗಿದೆ.

ಮೊದಲು 8ನೇ ತರಗತಿಯವರೆಗೆ ಇದ್ದ ಮೊಟ್ಟೆ ವಿತರಣೆಯನ್ನು 9 ಮತ್ತು 10ನೇ ತರಗತಿಗೆ ವಿಸ್ತರಿಸಿದ್ದೇವೆ. ಮುಂದಿನ ಶೈಕ್ಷಣಿಕ ವರ್ಷದಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ ಎಲ್ಲ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ಜಾರಿಗೆ ಸಿದ್ಧತೆ ಮಾಡಿಕೊಂಡಿದ್ದೇವೆ’ ಎಂದು ಹೇಳಿದರು.

ಸಮಾರಂಭದಲ್ಲಿ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ವಿಧಾನಪರಿಷತ್ ಶಾಸಕರಾದ ಬಲ್ಕಿಶ್ ಬಾನು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ ರೇವಣ್ಣ, ಶಾಸಕರಾದ ವಿಜಯಾನಂದ ಕಾಶಪ್ಪನವರ್, ಬಿ.ಬಿ. ಚಿಮ್ಮನಕಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಕರ್, ಯೋಜನಾ ನಿರ್ದೇಶಕಿ ವಿದ್ಯಾಕುಮಾರಿ, ಪಿಯು ನಿರ್ದೇಶಕರಾದ ಭರತ್ ಎಸ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!