ಪಕ್ಷ ಹೇಳಿದಷ್ಟು ದಿನ ಡಿ.ಕೆ. ಶಿವಕುಮಾರ್ ಅವರು ಅಧ್ಯಕ್ಷ ಸ್ಥಾನದಲ್ಲಿ ಇರುತ್ತಾರೆ; ಡಿ.ಕೆ. ಸುರೇಶ್

If it is written on the forehead, D.K. Shivakumar will become CM, otherwise not: D.K. Suresh

ಬೆಂಗಳೂರು: ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಹೈಕಮಾಂಡ್. ಹೈಕಮಾಂಡ್ ಯಾವ ತೀರ್ಮಾನ ಮಾಡಲಿದೆ ಎಂದು ಕಾದು ನೋಡೋಣ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಅವರು ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಒಪ್ಪಿಗೆ ನೀಡಿರುವ ಸುದ್ದಿ ಬಗ್ಗೆ ಕೇಳಿದಾಗ, “ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ನೋಡಿದ್ದೇನೆ. ಇದು ಸಿಎಂ ಹಾಗೂ ಹೈಕಮಾಂಡ್ ನಾಯಕರಿಗೆ ಬಿಟ್ಟ ವಿಚಾರ. ಕಾದು ನೋಡೋಣ” ಎಂದರು.

ಸಂಪುಟ ಪುನಾರಚನೆ ಆದರೆ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂಬ ಚರ್ಚೆ ಇದೆಯಲ್ಲ ಎಂದು ಕೇಳಿದಾಗ, “ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಏನೇ ಇದ್ದರೂ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆಯೇ ಹೊರತು ಬೇರೆಯವರಲ್ಲ” ಎಂದು ಪ್ರತಿಕ್ರಿಯಿಸಿದರು.

ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ದೆಹಲಿಗೆ ಹೋಗಿದ್ದು, ನೀವೂ ತೆರಳುತ್ತಿರುವ ಕಾರಣ ಎಂದು ಕೇಳಿದಾಗ, ನಾನು ಈಗಾಗಲೇ ದೆಹಲಿಗೆ ತೆರಳಿರುವುದಾಗಿ ಮಾಧ್ಯಮಗಳು ಪ್ರಕಟಿಸಿವೆ. ನಾನು ದೆಹಲಿಗೆ ಹೋಗುವುದು ಹೊಸತಲ್ಲ. ಶಿವಕುಮಾರ್ ಅವರು ಅವರ ಕೆಲಸದ ಮೇಲೆ ಹೋಗಿದ್ದಾರೆ, ನನ್ನ ಪಾಡಿಗೆ ನಾನು ಹೋಗುತ್ತಿರುವೆ” ಎಂದು ತಿಳಿಸಿದರು.

ದೆಹಲಿಗೆ ಹೋದಾಗ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ದೆಹಲಿಗೆ ಹೋದಾಗ ಅವಕಾಶ ಸಿಕ್ಕರೆ ಪಕ್ಷದ ನಾಯಕರನ್ನು ಭೇಟಿ ಮಾಡುತ್ತೇನೆ” ಎಂದರು.

ಕಾಯುವ ಸಮಯ ಮುಗಿದಿದೆ ಎಂಬ ಚರ್ಚೆ ಬಗ್ಗೆ ಕೇಳಿದಾಗ, “ಆ ವಿಚಾರ ನನಗೆ ಗೊತ್ತಿಲ್ಲ. ಈ ಬಗ್ಗೆ ನೀವು ಹೇಳುತ್ತಿದ್ದು, ಏನಾಗುತ್ತದೆಯೋ ಕಾದು ನೋಡೋಣ” ಎಂದು ತಿಳಿಸಿದರು.

ನಿಮ್ಮ ಸಹೋದರ ಸಿಎಂ ಆಗಬೇಕು ಎಂಬ ಆಸೆ ನಿಮ್ಮದು ಎಂದು ಕೇಳಿದಾಗ, “ಈ ವಿಚಾರ ಸಾಕಷ್ಟು ಬಾರಿ ಹೇಳಿದ್ದೇನೆ. ಎಲ್ಲದಕ್ಕೂ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ಸಿಎಂ, ಸಚಿವರು, ಶಾಸಕರು, ಶಿವಕುಮಾರ್ ಎಲ್ಲರಿಗೂ ಹೈಕಮಾಂಡ್ ತೀರ್ಮಾನವೇ ಮುಖ್ಯ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆ ಕಾದು ನೋಡಬೇಕು” ಎಂದು ತಿಳಿಸಿದರು.

ಪವರ್ ಶೇರಿಂಗ್ ಹಾಗೂ ಸಂಪುಟ ಪುನಾರಚನೆ ಚರ್ಚೆ ಬಗ್ಗೆ ಕೇಳಿದಾಗ, “ಎಲ್ಲವನ್ನೂ ಕಾದು ನೋಡೋಣ” ಎಂದು ತಿಳಿಸಿದರು.

ಯಾರ ಕ್ಲೇಮ್ ಏನಿದೆಯೋ ಗೊತ್ತಿಲ್ಲ

ಶಿವಕುಮಾರ್ ಅವರ ಕ್ಲೇಮ್ ಮೇಲೆ ಎಲ್ಲವೂ ನಿಂತಿದೆಯಲ್ಲವೇ ಎಂದು ಕೇಳಿದಾಗ, “ಕಾದು ನೋಡೋಣ, ಇಲ್ಲಿ ಶಿವಕುಮಾರ್ ಒಬ್ಬರೇ ಕ್ಲೇಮ್ ಮಾಡುತ್ತಿಲ್ಲವಲ್ಲ. ಬಹಳಷ್ಟು ಜನರ ಕ್ಲೇಮ್ ಇದೆ. ಯಾರ ಕ್ಲೇಮ್ ಏನಿದೆಯೋ ಗೊತ್ತಿಲ್ಲವಲ್ಲ” ಎಂದರು.

ಸಂಪುಟ ಪುನಾರಚನೆಯಾದರೆ ಸಿಎಂ ಬದಲಾವಣೆ ಇಲ್ಲ ಎಂಬ ಪರಮೇಶ್ವರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಹಿರಿಯ ಸಚಿವರು, ಅವರು ಹೇಳುತ್ತಾರೆ. ಸಚಿವ ಸಂಪುಟ ಪುನಾರಚನೆ ಸಿಎಂ ಪರಮಾಧಿಕಾರ. ಹೈಕಮಾಂಡ್ ಅಪ್ಪಣೆಯೊಂದಿಗೆ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ವಿಚಾರದಲ್ಲಿ ಹೈಕಮಾಂಡ್ ಶಿವಕುಮಾರ್ ಅವರ ಬಳಿ ಚರ್ಚೆ ಮಾಡಿದರೆ, ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಅಗತ್ಯವಾದ ಸಲಹೆ ನೀಡುತ್ತಾರೆ. ಸಿಎಂ ಈಗಾಗಲೇ ಇದ್ದಾರೆ. ಸಿಎಂ ಇಲ್ಲದಿದ್ದಾಗ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಮಾಡಬಹುದು” ಎಂದು ತಿಳಿಸಿದರು.

ಪಕ್ಷ ಹೇಳಿದಷ್ಟು ದಿನ ಶಿವಕುಮಾರ್ ಅವರು ಅಧ್ಯಕ್ಷ ಸ್ಥಾನದಲ್ಲಿ ಇರುತ್ತಾರೆ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಪ್ರಸ್ತಾಪವನ್ನು ಹೈಕಮಾಂಡ್ ಮುಂದೆ ಇಟ್ಟಿರುವ ಬಗ್ಗೆ ಕೇಳಿದಾಗ, “ಹೈಕಮಾಂಡ್ ಯಾವ ತೀರ್ಮಾನ, ಸಲಹೆಯನ್ನು ಶಿವಕುಮಾರ್ ಅವರು ಕೇಳುತ್ತಾರೆ. ಶಿವಕುಮಾರ್ ಅವರು ಮಾತ್ರವಲ್ಲ, ಎಲ್ಲರೂ ಕೇಳುತ್ತಾರೆ. ಅದರಲ್ಲಿ ಯಾವುದೇ ಅನುಮಾನ ಬೇಡ. ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿಯಬೇಕು ಎಂಬ ಆಸೆ ಶಿವಕುಮಾರ್ ಅವರಿಗಿಲ್ಲ. ಪಕ್ಷ ಮುಂದುವರಿಯಲು ಹೇಳಿದೆ, ಎಷ್ಟು ದಿನ ಅವಕಾಶ ನೀಡುತ್ತಾರೋ ಅಷ್ಟು ದಿನ ಪಕ್ಷದ ಕೆಲಸ ಮಾಡಿಕೊಂಡು ಇರುತ್ತಾರೆ” ಎಂದು ಹೇಳಿದರು.

ಸೋಲು ಗೆಲುವು ಸಹಜ

ಬಿಹಾರ ಚುನಾವಣೆ ಬಗ್ಗೆ ಕೇಳಿದಾಗ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಗೆಲುವು ಸೋಲು ಇದ್ದೇ ಇರುತ್ತದೆ. ಬಿಹಾರದಲ್ಲಿ ಚುನಾವಣೆಗೂ ಮುನ್ನ ಎನ್ ಡಿಎ ಸರ್ಕಾರ ಕರ್ನಾಟಕ ಗ್ಯಾರಂಟಿ ಯೋಜನೆ ಮಾದರಿಯಲ್ಲೇ ಅನುಷ್ಠಾನ ಮಾಡಿತು. ಹೀಗಾಗಿ ಮಹಿಳಾ ಮತದಾರರು ಎನ್ ಡಿಎ ಪರ ಒಲವು ತೋರಿದ್ದಾರೆ.

10 ಸಾವಿರ ರೂ. ಒಟ್ಟಿಗೆ ಮಹಿಳೆಯರ ಖಾತೆಗೆ ಹಾಕಿದ ಪರಿಣಾಮ ಹಾಗೂ ಚುನಾವಣೆ ಮುನ್ನ 47 ಲಕ್ಷ ಮತಗಳನ್ನು ಮತಪಟ್ಟಿಯಿಂದ ಕಿತ್ತು ಹಾಕಿದ್ದು ಪ್ರಮುಖ ಕಾರಣವಾಗಿದೆ. ಜನ ತೀರ್ಪು ನೀಡಿದ್ದು, ಅದನ್ನು ಸ್ವಾಗತಿಸುತ್ತೇವೆ. ನಮ್ಮ ಪಕ್ಷಕ್ಕೆ ಸೋಲು, ಗೆಲುವು ಹೊಸತಲ್ಲ. ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಾ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ತಿಳಿಸಿದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!