ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.
ಘಟನೆಯಲ್ಲಿ ಮೃತ ದುರ್ದೈವಿಯನ್ನು ದೊಡ್ಡಬಳ್ಳಾಪುರ ನಗರದ ನಿವಾಸಿ ಶ್ರೇಯಸ್ (25 ವರ್ಷ) ಎಂದು ಗುರುತಿಸಲಾಗಿದೆ.
ಭಾನುವಾರ ರಾತ್ರಿ 11.30ರ ವೇಳೆ ದೊಡ್ಡಬಳ್ಳಾಪುರ- ದಾಬಸ್‌ಪೇಟೆ ನಡುವಿನ ರಾಷ್ಟ್ರೀಯ ಹೆದ್ದಾರಿ ನಾರನಹಳ್ಳಿ ಬಳಿ ಮುಂದೆ ಸಾಗುತ್ತಿದ್ದ ಲಾರಿ, ಏಕಾಏಕಿ ಎಡಬಲಕ್ಕೆ ತೆರಳಿದ ಕಾರಣ ಹಿಂದೆ ಬರುತ್ತಿದ್ದ ಕಾರು ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಘಟನೆಯಲ್ಲಿ ಎಲೆಕ್ಟ್ರಿಕ್ ಕಾರು ತೀವ್ರ ಹಾನಿಗೊಳಗಾಗಿದ್ದು, ಕಾರಿನಲ್ಲಿದ್ದ ಶ್ರೇಯಸ್ ಸಾವನಪ್ಪಿದ್ದಾರೆ ತಿಳಿದುಬಂದಿದೆ.
ಈ ಕುರಿತಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ದೇಹವನ್ನು ಶವಾಗಾರಕ್ಕೆ ರವಾನಿಸಲಾಗಿದೆ.