ದೊಡ್ಡಬಳ್ಳಾಪುರ: ನಗರದ ತೇರಿನ ಬೀದಿಯಲ್ಲಿ ಶ್ರೀ ಪ್ರಸನ್ನ ಚಂದ್ರಮೌಳೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವವು (Sri Prasanna Chandramouleshwara Swamy Brahma Rathotsava) ವಿಜೃಂಭಣೆಯಿಂದ ನೆರವೇರಿತು.
ಮುಜರಾಯಿ ಇಲಾಖೆ ಹಾಗೂ ದೇವಾಲಯದ ಭಕ್ತ ಮಂಡಲಿ ವತಿಯಿಂದ ನಡೆದ ಬ್ರಹ್ಮ ರಥೋತ್ಸವದಲ್ಲಿ ವಿವಿದೆಡೆಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ರಥಕ್ಕೆ ಬಾಳೆಹಣ್ಣು, ದವನ ಅರ್ಪಿಸಿ ಧನ್ಯತಾ ಭಾವ ಮೆರೆದರು.
ಶ್ರೀ ಶ್ರೀಕಂಠೇಶ್ವರ ಭಕ್ತ ಮಂಡಲಿ, ನಂಜುಂಡೇಶ್ವರ ಸೇವಾ ಸಮಿತಿ, ಶ್ರೀ ಮುತ್ಯಾಲಮ್ಮ ಸೇವಾ ಸಮಿತಿ ಸೇರಿದಂತೆ ವಿವಿಧ ಅರವಂಟಿಗೆ ಸಮಿತಿಗಳಿಂದ ಜಾತ್ರೆಗೆ ಆಗಮಿಸಿದ್ದ ಭಕ್ತಾದಿಗಳಿಗೆ ಅರವಂಟಿಗೆ ಹಾಗೂ ಪ್ರಸಾದ ವಿನಿಯೋಗ ನಡೆಯಿತು.
ಬ್ರಹ್ಮ ರಥೋತ್ಸವದ ಅಂಗವಾಗಿ ನ.18ರಂದು ಹಗಲು ಪರಿಷೆ, ಅಶ್ವವಾಹನೋತ್ಸವ, ವೀರಭದ್ರನ ಕುಣಿತವಿದೆ.
ಡಿ.13ರವರೆಗೆ ದೇವಾಲಯದಲ್ಲಿ ಪ್ರಾಕಾರೋತ್ಸವ ಹಾಗೂ ವಿಶೇಷ ಪೂಜಾ ಕಾರ್ಯಾಕ್ರಮಗಳಿವೆ.