ಹಗಲು ರಾತ್ರಿ ಪಕ್ಷ ಕಟ್ಟಿದ್ದೇನೆ, ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನು ನಾನಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Are BJP members pure? Why is no ED case registered against them?: DCM D.K. Shivakumar

ಬೆಂಗಳೂರು: “ನಾನು ಪಕ್ಷದ ಶಿಸ್ತಿನ ಸಿಪಾಯಿ. ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನಲ್ಲ. ನಾನು ಹಗಲು ರಾತ್ರಿ ದುಡಿದು ಪಕ್ಷ ಕಟ್ಟಿದ್ದೇನೆ. ಮುಂದೆಯೂ ಕಟ್ಟುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಹೇಳಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೀರಿ ಎಂಬ ಸುದ್ದಿ ಹರಿದಾಡುತ್ತಿರುವ ಬಗ್ಗೆ ಕೇಳಿದಾಗ, ನನ್ನ ಮಾನಸಿಕ, ದೈಹಿಕ ಹಾಗೂ ರಾಜಕೀಯ ಆರೋಗ್ಯ ಸರಿಯಾಗಿದೆ. ನಾನು ಖರ್ಗೆ ಸಾಹೇಬರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ. ಡಿಸೆಂಬರ್ ತಿಂಗಳ ಒಳಗಾಗಿ ನೂರು ಕಾಂಗ್ರೆಸ್ ಕಚೇರಿಗಳಿಗೆ ಶಂಕುಸ್ಥಾಪನೆ ಮಾಡಲೇಬೇಕಾಗಿದೆ.

ಗಾಂಧಿ ಭಾರತ ಎಂಬ ಪುಸ್ತಕ ರಚಿಸಿದ್ದೇನೆ. ಇದರ ಬಿಡುಗಡೆಗೆ ದಿನಾಂಕ ನಿಗದಿ ಮಾಡಬೇಕಾಗಿದೆ. ಸದ್ಯದಲ್ಲೇ ಸಂಸತ್ ಅಧಿವೇಶನ ಆರಂಭವಾಗಲಿದೆ. ಕಾಂಗ್ರೆಸ್ ಸಂಸ್ಥಾಪನಾ ದಿನ ಆಚರಣೆ ಮಾಡಬೇಕು. ಇದೆಲ್ಲವನ್ನು ಯಾರು ಮಾಡಬೇಕು? ನಾನೇ ಮಾಡಬೇಕು. ನಾನೇಕೆ ರಾಜಿನಾಮೆ ನೀಡಲಿ. ಈಗ ಅಂತಹ ಸಂದರ್ಭವಿಲ್ಲ ಎಂದು ತಿಳಿಸಿದರು.

“ಕಾಂಗ್ರೆಸ್ ಪಕ್ಷ ಎಲ್ಲಿಯವರೆಗೂ ಈ ಸ್ಥಾನದಲ್ಲಿ ಕೆಲಸ ಮಾಡಲು ಹೇಳುತ್ತಾರೋ ಅಲ್ಲಿಯವರೆಗೆ ನಾನು ಪಕ್ಷದ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡಿಕೊಂಡು ಹೋಗುತ್ತೇನೆ. ಮುಂದೆಯೂ ಪಕ್ಷ ಅಧಿಕಾರಕ್ಕೆ ಬರುವಂತೆ ದುಡಿಯುವವನು ನಾನು” ಎಂದು ಸ್ಪಷ್ಟಪಡಿಸಿದರು.

ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆಯಾಗುತ್ತಿದೆ, ಖರ್ಗೆ ಅವರ ಭೇಟಿ ವೇಳೆ ಈ ಬಗ್ಗೆ ಚರ್ಚೆ ಮಾಡುತ್ತೀರಾ ಎಂದು ಕೇಳಿದಾಗ, ಅದೆಲ್ಲಾ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಹೈಕಮಾಂಡ್ ಬಳಿ ಚರ್ಚೆ ಮಾಡುತ್ತಾರೆ. ನನ್ನನ್ನು ಕರೆದರೆ ನಾನು ಹೋಗುತ್ತೇನೆ. ನಾನು ಕೇವಲ ಪಕ್ಷದ ಕಚೇರಿಗಳ ಶಂಕುಸ್ಥಾಪನೆಗೆ ದಿನಾಂಕ ನಿಗದಿ ಮಾಡಲು ಹೋಗುತ್ತಿರುವೆ.

ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಒಟ್ಟಾಗಿ ಶಂಕುಸ್ಥಾಪನೆ ಮಾಡಬೇಕು ಎಂಬುದು ನನ್ನ ಆಸೆ. ಡಿ. 1 ರಿಂದ ಸಂಸತ್ ಅಧಿವೇಶನ ಆರಂಭವಾಗಲಿದ್ದು, ಅಷ್ಟರೊಳಗೆ, ಯಾವುದಾದರೂ ವಾರಾಂತ್ಯದಲ್ಲಿ ಬಂದು ಹೋಗಿ ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದರು.

“ಕಾಂಗ್ರೆಸ್ ಕಚೇರಿ ನಿರ್ಮಾಣದ ಕಟ್ಟಡ ನಕ್ಷೆ ಅನುಮೋದನೆಗೆ ನಾನು ₹2.30 ಕೋಟಿ ಹಣವನ್ನು ಪಾವತಿಸುತ್ತಿದ್ದೇನೆ. ರಾಮಲಿಂಗಾರೆಡ್ಡಿ ಅವರ ಮುಂದಾಳತ್ವದಲ್ಲಿ ಒಂದು ಕಚೇರಿ ನಿರ್ಮಿಸಲಾಗುತ್ತಿದೆ. 75-80 ಕಡೆ ಕಚೇರಿ ನಿರ್ಮಾಣಕ್ಕೆ ಜಾಗ ಕೂಡ ಸಿದ್ಧವಾಗಿವೆ. ನೂರು ಕಚೇರಿ ನಿರ್ಮಾಣ ಕಾರ್ಯ ಮಾಡುತ್ತೇವೆ” ಎಂದು ತಿಳಿಸಿದರು.

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಆಯ್ಕೆಯಾಗುವ ಗ್ರಾಮ ಪಂಚಾಯತಿಗಳ (Grama Panchayats) ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿದೆ

[ccc_my_favorite_select_button post_id="121230"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!