If the cabinet is expanded, D.K. Shivakumar will be given Panganama: R. Ashoka

ಸಂಪುಟ ವಿಸ್ತರಣೆಯಾದರೆ ಡಿ.ಕೆ.ಶಿವಕುಮಾರ್‌ಗೆ ಪಂಗನಾಮ: ಆರ್‌.ಅಶೋಕ

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಹೇಳಿದ ಕಾಂಗ್ರೆಸ್‌ ನಾಯಕರು ದೆಹಲಿಗೆ ಹೋಗುತ್ತಿರುವುದೇಕೆ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಪ್ರಶ್ನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂದು ನಾನು ಪದೇ ಪದೆ ಹೇಳಿದ್ದೆ. ಆದರೂ ಆ ರೀತಿ ಇಲ್ಲ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ. ಈಗ ಡಿ.ಕೆ.ಶಿವಕುಮಾರ್‌ ( D.K. Shivakumar) ಸೋದರರು ದೆಹಲಿಗೆ ಹೋಗಿ ಕುಳಿತಿದ್ದಾರೆ.

ಸಿಎಂ ಬದಲಾವಣೆ ಇಲ್ಲವೆಂದ ಮೇಲೆ ಎಲ್ಲರೂ ಮಲ್ಲಿಕಾರ್ಜುನ ಖರ್ಗೆಯವನ್ನು ಏಕೆ ಭೇಟಿಯಾಗುತ್ತಿದ್ದಾರೆ? ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿದಿಲ್ಲ, ವನ್ಯಜೀವಿ-ಮಾನವ ಸಂಘರ್ಷ ಜೋರಾಗಿದೆ, ಮಳೆ ಹಾನಿ ಪರಿಹಾರ ನೀಡಿಲ್ಲ. ಹೀಗೆ ಅನೇಕ ಸಮಸ್ಯೆಗಳಿದ್ದರೂ ಸಿಎಂ ಕುರ್ಚಿಗಾಗಿ ಮ್ಯೂಸಿಕಲ್‌ ಚೇರ್‌ ಸ್ಪರ್ಧೆ ನಡೆಯುತ್ತಿದೆ.

ಸಚಿವ ಸಂಪುಟ ವಿಸ್ತರಣೆಯಾದರೆ ಡಿ.ಕೆ.ಶಿವಕುಮಾರ್‌ಗೆ ಪಂಗನಾಮ ಸಿಗಲಿದೆ. ದೇವಸ್ಥಾನಗಳಿಗೆ ಹೋಗಿ ಪೂಜೆ ಮಾಡಿದ್ದು ವ್ಯರ್ಥವಾಗಲಿದೆ ಎಂದರು.

ಚೆನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಬಗ್ಗೆ ಅರಣ್ಯ ಸಚಿವರು ಉತ್ತರ ನೀಡಬೇಕಿದೆ. ಇದು ಆಘಾತಕಾರಿ ಸಂಗತಿಯಾಗಿದ್ದು, ಈ ಬಗ್ಗೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿದೆ. ಬೆಳಗಾವಿ ಅಧಿವೇಶನದಲ್ಲಿ ಆರಂಭದಿಂದಲೇ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಿದೆ.

ಕಳೆದ ಬಾರಿ ಚರ್ಚೆಯಾದ ಸಮಸ್ಯೆಗಳನ್ನು ಪರಿಹರಿಸಲಾಗಿದೆಯೇ ಎಂದು ತಿಳಿಸಬೇಕು. ಕಬ್ಬು ಬೆಳೆಗಾರರ ಸಮಸ್ಯೆ, ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ಮಾಡಲಾಗುವುದು. ಕೇಂದ್ರ ಸಚಿವರಾದ ಎಚ್‌.ಡಿ.ಕುಮಾರಸ್ವಾಮಿ ಅವರ ಜೊತೆ ಈ ಬಗ್ಗೆ ಮತ್ತೊಮ್ಮೆ ಚರ್ಚೆ ಮಾಡಲಾಗುವುದು ಎಂದರು.

ಚಾಮರಾಜನಗರದಲ್ಲಿ ರೈತರನ್ನು ಭೇಟಿ ಮಾಡಿದ್ದು, ಬೆಳೆ ಪರಿಹಾರ ಹಾಗೂ ಇತರೆ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದೇನೆ. ಪರಿಹಾರ ನೀಡದೆಯೇ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಪುಟಗಟ್ಟಲೆ ಭಾಷಣ ಮಾಡುತ್ತಾರೆಯೇ ಹೊರತು ಪರಿಹಾರ ನೀಡುವುದಿಲ್ಲ.

ಜಿಎಸ್‌ಟಿ ಸಮಿತಿಯ ಸಭೆಗೆ ಹೋಗದೆ, ಸಲಹೆ ನೀಡಬೇಕಾದ ಸಭೆಗೆ ಹೋಗದೆ ಈಗ ಇಲ್ಲಿ ಬಂದು ಆರೋಪ ಮಾಡುತ್ತಾರೆ. ಇರುವ ಅವಕಾಶಗಳನ್ನು ಬಳಸಿಕೊಳ್ಳದೆಯೇ ಈಗ ಮಾತಾಡಿ ಪ್ರಯೋಜನವಿಲ್ಲ.

ಸಿಎಂ ಸಿದ್ದರಾಮಯ್ಯ ಮನವಿ ಕೊಟ್ಟು ಬಂದು ನಾಟಕವಾಡುತ್ತಿದ್ದಾರೆ. ಮನವಿ ಕೊಟ್ಟು ಹೊರಗೆ ಬಂದ ನಂತರ ವಂಚನೆಯಾಗಿದೆ ಎಂದು ಆರೋಪ ಮಾಡುತ್ತಾರೆ ಎಂದರು.

ರಾಜಕೀಯ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ; ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="119679"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!