ನಿಮ್ಮ ಹಣ, ನಿಮ್ಮ ಹಕ್ಕು ಅಭಿಯಾನ: ನ.21 ರಂದು ನಿಷ್ಕ್ರಿಯ ಬ್ಯಾಂಕ್ ಠೇವಣಿಗಳನ್ನು ಹಸ್ತಾಂತರಿಸುವ ಅರಿವು ಶಿಬಿರ

Registration for skills training

ಬೆಂ.ಗ್ರಾ. ಜಿಲ್ಲೆ: ದೀರ್ಘಕಾಲದಿಂದ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ (Bank) ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಸಲುವಾಗಿ ಜಿಲ್ಲಾಡಳಿತ ಭವನದಲ್ಲಿ ವಿಶೇಷ ಅರಿವು ಶಿಬಿರವನ್ನು (Awareness camp) ಆಯೋಜಿಸಲಾಗಿದೆ.

ಶಿಬಿರವು ನವೆಂಬರ್ 21 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ.

ಜಿಲ್ಲೆಯ ಸಾರ್ವಜನಿಕರು, ವಾರಸುದಾರರು ತಮ್ಮ ಸಂಬಂಧಿತ ಗುರುತಿನ ದಾಖಲೆಗಳು, ಬ್ಯಾಂಕ್ ದಾಖಲೆಗಳು ಮತ್ತು ಅರ್ಹತಾ ಪತ್ರಗಳೊಂದಿಗೆ ಶಿಬಿರದಲ್ಲಿ ಭಾಗವಹಿಸಿ ಅಗತ್ಯ ಸಲಹೆ ಮತ್ತು ಸವಲತ್ತುಗಳನ್ನು ಪಡೆಯಬಹುದು.

ಭಾರತದ ಹಣಕಾಸು ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ಎಲ್ಲಾ ಬ್ಯಾಂಕ್, ವಿಮಾ ಮತ್ತು ಇತರ ಇಲಾಖಾ ಶಾಖೆಗಳಲ್ಲಿ 2025 ರ ಡಿಸೆಂಬರ್ 31 ರವರೆಗೆ ನಿಮ್ಮ ಹಣ ನಿಮ್ಮ ಹಕ್ಕು ಶಿಬಿರ ನಡೆಯಲಿದೆ. ಅದರಂತೆ, ದೀರ್ಘಕಾಲದವರೆಗೆ ಹಕ್ಕು ಪಡೆಯದ ಹಣಕಾಸಿನ ಸ್ವತ್ತುಗಳನ್ನು ಕಾನೂನುಬದ್ಧ ವಾರಸುದಾರರಿಗೆ ಮರುಪಡೆಯಲು ಸಹಾಯ ಮಾಡಲು ಈ ಶಿಬಿರವನ್ನು ನಡೆಸಲಾಗುತ್ತಿದೆ.

ನಿಷ್ಕ್ರಿಯ ಖಾತೆಗಳಲ್ಲಿರುವ ಹಣ ಮತ್ತು ಹತ್ತು ವರ್ಷಗಳಿಗಿಂತ ಹಳೆಯದಾದ ಕ್ಲೈಮ್ ಮಾಡದ ಠೇವಣಿಗಳನ್ನು (ಮೊತ್ತಗಳು) ಆರ್‌ಬಿಐನ ಡಿಇಎ ನಿಧಿಗೆ ವರ್ಗಾಯಿಸಲಾಗುತ್ತದೆ.

ಆರ್ ಬಿಐ ನ ಯು‌ಡಿ‌ಜಿ‌ಎ‌ಎಂ ವೆಬ್ಸೈಟ್ ನಲ್ಲಿ (https://udgam.rbi.org.in) ನೀವು ಅಥವಾ ನಿಮ್ಮ ಕಾನೂನುಬದ್ಧ ಉತ್ತರಾಧಿಕಾರಿಗಳು ಯಾವುದೇ ಸಮಯದಲ್ಲಿ ಅದನ್ನು ಕ್ಲೈಮ್ ಮಾಡಬಹುದು.

ಬ್ಯಾಂಕಿಂಗ್ ವಲಯ, ವಿಮಾ ವಲಯ, ಹಣಕಾಸು ವಲಯ ಮತ್ತು ಇತರ ವಲಯಗಳ ಅಧಿಕಾರಿಗಳು ಈ ಶಿಬಿರದಲ್ಲಿ ಭಾಗವಹಿಸಿ ಸಲಹೆ ನೀಡುತ್ತಾರೆ, ಶಿಬಿರದ ಸದುಪಯೋಗ ಪಡೆದುಕೊಳ್ಳಲು ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಆಯ್ಕೆಯಾಗುವ ಗ್ರಾಮ ಪಂಚಾಯತಿಗಳ (Grama Panchayats) ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿದೆ

[ccc_my_favorite_select_button post_id="121230"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!