ದೊಡ್ಡಬಳ್ಳಾಪುರ: ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ರಾಯಚೂರಿನಲ್ಲಿ ನಡೆದ ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಅಂಡರ್ 17 ಬಾಲಕರ ವಿಭಾಗದಲ್ಲಿ ಬೆಂಗಳೂರು ವಿಭಾಗೀಯ ತಂಡ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.
ಈ ತಂಡದಲ್ಲಿ ದೊಡ್ಡಬಳಾಪುರದ ಹಿಲ್ಸ್ ಸ್ಪೋರ್ಟ್ಸ್ ಅಕಾಡೆಮಿಯ ಸುದರ್ಶನ್ ಎಂ ಶೆಟ್ಟಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವ ಬಾಲಕ ಸುದರ್ಶನ್ ಎಂ ಶೆಟ್ಟಿ ಅವರಿಗೆ ಹಿಲ್ಸ್ ಸ್ಪೋರ್ಟ್ಸ್ ಅಕಾಡೆಮಿ ಮುಖ್ಯಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.