Allegations of election irregularities; If Congress has evidence, submit it to the court: B.Y. Vijayendra

ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಮತ್ತೆ ಹೋರಾಟಕ್ಕೆ ಬಿಜೆಪಿ ನಿರ್ಧಾರ..!

ಪುತ್ತೂರು (ದಕ್ಷಿಣ ಕನ್ನಡ): ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ಇದರ ನಡುವೆ ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ದಿನೇದಿನೇ ಹೆಚ್ಚಾಗುತ್ತಿದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ (B.Y. Vijayendra) ಟೀಕಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಇಲ್ಲಿ ಮಾತನಾಡಿದ ಅವರು, ಭ್ರಷ್ಟ-ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಅಧಿವೇಶನದಲ್ಲಿ ಮತ್ತು ಹೊರಗಡೆ ಹೋರಾಟ ಮಾಡಲು ಬಿಜೆಪಿ ನಿರ್ಧರಿಸಿದೆ ಎಂದು ಪ್ರಕಟಿಸಿದರು.

ಅಭಿವೃದ್ಧಿ ಕುರಿತು ಚಿಂತಿಸಬೇಕಾದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವ ಸಂಪುಟದವರು ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. ಕಾಂಗ್ರೆಸ್ ಪಕ್ಷವು ತಾನು ನೀಡಿದ ಭರವಸೆಗಳನ್ನು ಈಡೇರಿಸಿಲ್ಲ; ಕಾಂಗ್ರೆಸ್ಸಿನ ಭರವಸೆ ನಂಬಿ ಮೋಸಹೋದ ಭಾವನೆ ಮತದಾರರಲ್ಲಿದೆ ಎಂದು ವಿವರಿಸಿದರು.

ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮಶತಾಬ್ದಿ ಸಂದರ್ಭದಲ್ಲಿ ಇಂದು ಅಭೂತಪೂರ್ವ ಕಾರ್ಯಕ್ರಮ ಇಲ್ಲಿ ಆಯೋಜಿಸಲಾಗಿದೆ ಎಂದರು. ರಾಜ್ಯದ ರೈತರು, ಕಬ್ಬು ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರಕಾರವು ಖರೀದಿ ಕೇಂದ್ರ ತೆರೆದಿಲ್ಲವೆಂದು ಆಕ್ಷೇಪಿಸಿ ಮೆಕ್ಕೆ ಜೋಳ ಬೆಳೆಗಾರರೂ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ವಜಾಕ್ಕೆ ಆಗ್ರಹ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಅವರು ಒಂದು ಹೇಳಿಕೆ ನೀಡಿದ್ದಾರೆ. ಕರಾವಳಿ ಭಾಗದ ಯಕ್ಷಗಾನ ಕಲಾವಿದರು ಸಲಿಂಗಕಾಮಿಗಳು ಎಂಬ ಉದ್ಧಟತನದ ಹೇಳಿಕೆಯನ್ನು ನೀಡಿದ್ದಾರೆ ಎಂದು ವಿಜಯೇಂದ್ರ ಅವರು ಖಂಡಿಸಿದರು.

ಅವರ ಹೇಳಿಕೆ ಯಕ್ಷಗಾನ ಕಲಾವಿದರು, ಕರಾವಳಿ ಭಾಗಕ್ಕೆ ಮಾತ್ರವಲ್ಲದೇ ಇಡೀ ಹಿಂದೂ ಸಮಾಜಕ್ಕೆ ಮಾಡಿದ ಅವಮಾನ ಎಂದು ಆಕ್ಷೇಪಿಸಿದರು. ಅವರ ಹೇಳಿಕೆಯು ಕಾಂಗ್ರೆಸ್ ಪಕ್ಷದ ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು ಹೇಳಿದರು.

ಮುಖ್ಯಮಂತ್ರಿ, ಸರಕಾರಕ್ಕೆ ಇಲ್ಲಿನ ಕಲೆ, ಪರಂಪರೆ, ಸಂಸ್ಕೃತಿ ಬಗ್ಗೆ ಕಿಂಚಿತ್ತಾದರೂ ತಕ್ಷಣ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಕಿತ್ತು ಬಿಸಾಕಬೇಕೆಂದು ಒತ್ತಾಯಿಸಿದರು. ಬಿಜೆಪಿ ಮಾತ್ರವಲ್ಲ; ಇಡೀ ಹಿಂದೂ ಸಮಾಜ ಇದನ್ನು ಖಂಡಿಸಬೇಕಿದೆ. ಪಕ್ಷಾತೀತವಾಗಿ ಇದರ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ಪ್ರಶ್ನೆಗೆ ಉತ್ತರಿಸಿದರು.

ಸ್ಪೀಕರ್ ಯು.ಟಿ.ಖಾದರ್ ಅವರ ವಿರುದ್ಧ ಹಿಂದಿನ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭ್ರಷ್ಟಾಚಾರದ ಕುರಿತು ಆಧಾರಸಹಿತ ಆರೋಪ ಮಾಡಿದ್ದಾರೆ. ಆ ಸ್ಥಾನದ ಗೌರವ ಉಳಿಸಲು ಅವರೇ ರಾಜೀನಾಮೆ ಕೊಟ್ಟರೆ ಒಳ್ಳೆಯದು ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!