ಜೆಡಿಎಸ್ ಅವರಿಗೆ ಏನೂ ಮಾಡಲು ಆಗಿಲ್ಲ.. ಈಗ ಮೊಸರಲ್ಲಿ ಕಲ್ಲು ಹುಡುಕುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

We are not worried about the CM post, why should you: DCM D.K. Shivakumar

ಬೆಂಗಳೂರು: “ಜೆಡಿಎಸ್ (JDS) ಅವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು ಆಗಿಲ್ಲ. ಈಗ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಹರಿಹಾಯ್ದರು.

‘ನೀಲಿ ದಳ’ (ಬ್ಲೂ ಪೋರ್ಸ್) ಹಾಗೂ ರೋಬೋಟಿಕ್ ತಂತ್ರಜ್ಞಾನ ಬಳಕೆಗೆ ಚಾಲನೆ ನೀಡಿದ ನಂತರ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.

ಎರಡನೇ ಬೆಳೆಗೆ ತುಂಗಭದ್ರಾ ನೀರು ಹರಿಸುವ ವಿಚಾರವಾಗಿ ರೈತರ ಜೊತೆ ಸೇರಿ ಜೆಡಿಎಸ್ ಹೋರಾಟದ ಬಗ್ಗೆ ಕೇಳಿದಾಗ, ಅವರು ಪ್ರತಿಭಟನೆ ಮಾಡಿದಾಗಲೇ ನಾವು ಏನು ಕೆಲಸ ಮಾಡಿದ್ದೇವೆ ಎಂಬುದು ಜನರಿಗೆ ತಿಳಿಯಲಿದೆ. ಈಗ ಏಕೆ ಪ್ರತಿಭಟನೆ ಮಾಡುತ್ತಿದ್ದಾರೆ. ಮೊದಲು ಕೇಂದ್ರ ಸರ್ಕಾರದ ಬಳಿ ತೆರಳಿ ನಾನು ಒಂದಷ್ಟು ಯೋಜನೆಗಳ ಬಗ್ಗೆ ಅರ್ಜಿ ಹಾಕಿದ್ದು ಅವುಗಳ ಅನುಷ್ಠಾನಕ್ಕೆ ಒಪ್ಪಿಗೆ ಪಡೆಯಲಿ.

ಬಿಜೆಪಿ ಸಂಸದರನ್ನು ಕರೆದುಕೊಂಡು ಹೋಗಿ ಪ್ರತಿಭಟನೆ ನಡೆಸಿ, ಅಗತ್ಯ ಅನುದಾನ ತೆಗೆದುಕೊಂಡು ಬರಲಿ. ನಮ್ಮ ಪಾಲಿನ 28-30 ಟಿಎಂಸಿ ತುಂಗಭದ್ರಾ ನೀರು ಆಂದ್ರಕ್ಕೆ ಸೇರುತ್ತಿದೆ. ಚಂದ್ರಬಾಬು ನಾಯ್ಡು ಅವರು ಇದರ ಸಭೆಗೆ ಬರುತ್ತಿಲ್ಲ. ಮೊದಲು ಅವರಿಂದ ಒಪ್ಪಿಗೆ ಕೊಡಿಸಲಿ ಎಂದು ತಿವಿದರು.

ಕುಮಾರಸ್ವಾಮಿ ಅವರನ್ನು ಜೊತೆಯಲ್ಲಿ ಕರೆದುಕೊಂಡು ಹೋದರೆ ಭೇಟಿಯಾಗಬಹುದು ಎನ್ನುವ ಬಗ್ಗೆ ಕೇಳಿದಾಗ, “ನಾನು ಇದಕ್ಕೆ ತಯಾರಿದ್ದೇನೆ‌. ಅವರೇ ಸಮಯ ನಿಗದಿ ಮಾಡಲಿ ನಾನು ಹೋಗಲು ತಯಾರಿದ್ದೇನೆ” ಎಂದರು.

ಅಕ್ರಮ ನಡೆದಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ

ಕಸ ಗುಡಿಸುವ ಯಂತ್ರ ಬಾಡಿಗೆ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ಈ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಶೋಭಾ ಕರಂದ್ಲಾಜೆ ಹಾಗೂ ನಿಖಿಲ್ ಕುಮಾರಸ್ವಾಮಿ ಅವರು ಲೋಕಾಯುಕ್ತ ಅಥವಾ ಸೂಕ್ತ ತನಿಖಾ ಸಂಸ್ಥೆಗೆ ದೂರು ನೀಡಲಿ.

ನಾನು ಕೇಂದ್ರ ಶೋಭಾ ಕರಂದ್ಲಾಜೆ ಅವರಿಗೆ ಉತ್ತರಿಸುತ್ತೇನೆಯೇ ಹೊರತು ಆತನಿಗಲ್ಲ. ಕಸ ಗುಡಿಸುವ ಯಂತ್ರಗಳ ಬಗ್ಗೆ ಅಧ್ಯಯನ ನಡೆಸಿಯೇ ಮುಂದುವರೆದಿರುವುದು. ಇದು ಕೇವಲ ಒಂದು ವರ್ಷದ‌ ಯೋಜನೆಯಲ್ಲ. ಏಳು ವರ್ಷಗಳ ಯೋಜನೆ. ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ನಾವು ತನಿಖೆ ನಡೆಸಲು ಸಿದ್ಧರಿದ್ದೇವೆ.

ಶೋಭಾ ಕರಂದ್ಲಾಜೆ ಅವರ ಟೀಕೆಗಳನ್ನು ನಾನು ಸ್ವಾಗತ ಮಾಡುತ್ತೇನೆ. ಅವರ ಪ್ರಶ್ನೆಗಳಿಗೆ ಉತ್ತರಿಸುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ. ಈ ವಿಚಾರದಲ್ಲಿ ನಾವು ಪಾರದರ್ಶಕವಾಗಿದ್ದೇವೆ. ಈ ಮೊತ್ತ ದೊಡ್ಡದಾಗಿ ಕಾಣುತ್ತಿರಬಹುದು. ಇದು ಕೇವಲ ವಾಹನದ ವಿಚಾರವೊಂದೇ ಇಲ್ಲ. ಚಾಲಕ, ಸಹಾಯಕ, ಸ್ವಚ್ಛ ಮಾಡುವವರು ಸೇರಿದಂತೆ ಅನೇಕ ವಿಚಾರಗಳಿವೆ. ಎಲ್ಲಾ ಆಯಾಮಗಳಿಂದ ಆಲೋಚಿಸಿ ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದರು.

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಆಯ್ಕೆಯಾಗುವ ಗ್ರಾಮ ಪಂಚಾಯತಿಗಳ (Grama Panchayats) ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿದೆ

[ccc_my_favorite_select_button post_id="121230"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!