Five environmentalists to receive awards in the name of Salu Marada Timmakka:

ಪ್ರತಿ ವರ್ಷ ಸಾಲು ಮರದ ತಿಮ್ಮಕ್ಕನವರ ಹೆಸರಿನಲ್ಲಿ ಐದು ಪರಿಸರವಾದಿಗಳಿಗೆ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಂದು ಕೋಟಿ ದತ್ತಿ ನಿಧಿಯನ್ನು ಸ್ಥಾಪಿಸಿ ಠೇವಣಿ ಇರುವ ಹಣದ ಬಡ್ಡಿಯಲ್ಲಿ ಪ್ರತಿ ವರ್ಷವೂ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಹಾಗೂ ಕನಿಷ್ಠ ಐದು ಪರಿಸರವಾದಿಗಳಿಗೆ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿಯನ್ನು ಪ್ರತಿ ವರ್ಷ ಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರುಇಂದು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ವತಿಯಿಂದ ಆಯೋಜಿಸಲಾಗಿದ್ದ ಸುವರ್ಣ ಮಹೋತ್ಸವ -2025 ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ವರ್ಷಗಳ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಪರಿಸರ ಸಂರಕ್ಷಣೆ ಕೇವಲ ಸರ್ಕಾರದ ಜವಾಬ್ದಾರಿಯಲ್ಲ

ಇಂದು ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಜನ್ಮದಿನ. 1974ರ ಇಂದಿನ ದಿನದಂದು ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪಿತವಾಯಿತು. ಶ್ರೀಮತಿ ಇಂದಿರಾಗಾಂಧಿಯವರು ಪರಿಸರ ಮತ್ತು ಅರಣ್ಯ ರಕ್ಷಣೆಗೆ ಹಲವು ಪ್ರಮುಖ ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಪರಿಸರ ಸಂರಕ್ಷಣೆಯ ಜವಾಬ್ದಾರಿ ಕೇವಲ ಸರ್ಕಾರದ ಮೇಲಿಲ್ಲ. ಸಾರ್ವಜನಿಕರು ಪರಿಸರ ಸಂರಕ್ಷಣೆಯಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಬೇಕು.

ಭೂಮಿಯ ಮೇಲಿನ ಜೀವಸಂಕುಲಕ್ಕೆ ಉತ್ತಮ ಪರಿಸರದಲ್ಲಿ ಬದುಕಲು ಅವಶ್ಯ. ಮಾಲಿನ್ಯ ರಹಿತ ಪರಿಸರವನ್ನು ನಿರ್ಮಿಸುವುದು ಅತ್ಯಂತ ಅವಶ್ಯವಾಗಿದೆ. ನಾವು ಉಸಿರಾಡುವ ಗಾಳಿ, ನೀರು ಹಾಗೂ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅಗತ್ಯ.

ಕೇಂದ್ರದ ವರದಿಯ ಪ್ರಕಾರ ದೇಶದ ಹಲವು ನಗರಗಳು ಮಾಲಿನ್ಯದಿಂದ ಕೂಡಿವೆ. ಈ ಪಟ್ಟಿಯಲ್ಲಿ ಬೆಂಗಳೂರು , ದಾವಣಗೆರೆ, ಕಲ್ಬುರ್ಗಿ ನಗರವೂ ಸೇರಿರುವುದು ಆತಂಕಕಾರಿ ವಿಷಯ. ನಮ್ಮ ರಾಜ್ಯವನ್ನು ವಾಸಯೋಗ್ಯವಾಗಿಸಲು , ಜನರೆಲ್ಲರೂ ಪರಿಸರ ಬಗ್ಗೆ ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂದರು.

ಜನ ಸರ್ಕಾರದ ಜೊತೆ ಕೈಜೋಡಿಸಿದಾಗ ಮಾತ್ರ 2030 ರ ಹೊತ್ತಿಗೆ ಬೆಂಗಳೂರನ್ನು ಪ್ಲಾಸ್ಟಿಕ್ ಮುಕ್ತ ನಗರವಾಗಿಸಲು ಸಾಧ್ಯ

ಬೆಂಗಳೂರು ನಗರ ಒಂದರಲ್ಲೇ 900 ಟನ್ ಪ್ಲಾಸ್ಟಿಕ್ ಉತ್ಪಾದನೆಯಾಗುತ್ತದೆ. ಇದನ್ನು ಜನ ಅರ್ಥಮಾಡಿಕೊಳ್ಳದೇ ಹೋದರೆ ಪ್ಲಾಸ್ಟಿಕ್ ಮುಕ್ತ ನಗರವಾಗಲು ಸಾಧ್ಯವಿಲ್ಲ ಪರಿಸರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿ, ಸರ್ಕಾರದ ಜೊತೆ ಕೈಜೋಡಿಸಿದಾಗ ಮಾತ್ರ 2030 ರ ಹೊತ್ತಿಗೆ ಬೆಂಗಳೂರನ್ನು ಪ್ಲಾಸ್ಟಿಕ್ ಮುಕ್ತ ನಗರವಾಗಿಸಲು ಸಾಧ್ಯ ಎಂದರು.

ಅತಿ ಹೆಚ್ಚು ಮಾಲಿನ್ಯ ಹೊಂದಿರುವ ನಗರಗಳ ಪಟ್ಟಿಯಲ್ಲಿ ರಾಜ್ಯದ ನಾಲ್ಕು ಜಿಲ್ಲೆಗಳು

ಕೇಂದ್ರದ ವರದಿಯ ಪ್ರಕಾರ 131 ನಗರಗಳು ಮಾಲಿನ್ಯದಿಂದ ಕೂಡಿದ್ದು, ನಿಗದಿತ ಮಟ್ಟಕ್ಕಿಂತಲೂ ಹೆಚ್ಚಿದೆ. ಅದರಲ್ಲಿ ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ದಾವಣಗೆರೆ ಮತ್ತು ಕಲಬುರಗಿ ಜಿಲ್ಲೆಗಳು ಸೇರಿವೆ. ಇದು ಆತಂಕಕಾರಿ ವಿಷಯ.

ಬೆಂಗಳೂರಿನಲ್ಲಿ ವಾಸ ಮಾಡಲು ಸಾಧ್ಯವಾಗದಂತಹ ಪರಿಸ್ಥಿತಿ ಮುಂದಿನ ದಿನಗಳಲ್ಲಿ ನಿರ್ಮಾಣವಾಗುವ ಸಾಧ್ಯತೆ ಇದೆ. ಅದಕ್ಕಾಗಿ ಎಲ್ಲರೂ ಪರಿಸರದ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಸಾಲು ಮರದ ತಿಮ್ಮಕ್ಕ ಇದಕ್ಕೆ ಶ್ರೇಷ್ಠ ಉದಾಹರಣೆ ಎಂದರು. ಇತ್ತೀಚೆಗೆ ನಿಧನರಾದ ಅವರು ಬಹಳಷ್ಟು ಮರಗಿಡಗಳನ್ನು ತಮ್ಮ ಮಕ್ಕಳಂತೆ ಬೆಳೆಸುವ ಪ್ರವೃತ್ತಿಯನ್ನು ಬೆಳೆಸಿಕೊಂಡಿದ್ದರು. ಪ್ರತಿಯೊಬ್ಬರೂ ಸಾಲಮರದ ತಿಮ್ಮಕ್ಕನವರಂತೆ ಆಗಬೇಕು ಎನ್ನುವ ಆಶಯ ನಮ್ಮದು ಎಂದರು.

ಬೆಂಗಳೂರು ಪ್ಲಾಸ್ಟಿಕ್ ಮತ್ತು ಕಸ ಮುಕ್ತ ನಗರವಾಗಬೇಕು

ಬೆಂಗಳೂರು ಗಾರ್ಬೇಜ್ ನಗರ ಎಂಬ ಟೀಕೆಗೆ ನಗರ ಗುರಿಯಾಗುತ್ತಿದ್ದು,ಬೆಂಗಳೂರನ್ನು ಗಾರ್ಬೇಜ್ ನಗರವಾಗಿಸುವುದು ನಮ್ಮ ಉದ್ದೇಶವಲ್ಲ. ಪ್ಲಾಸ್ಟಿಕ್ ಮತ್ತು ಕಸ ಮುಕ್ತ ನಗರವಾಗಿಸಬೇಕು ಎನ್ನುವುದು ಸರ್ಕಾರದ ಉದ್ದೇಶ. ಜನರೂ ಹಸಿ ಮತ್ತು ಒಣ ತ್ಯಾಜ್ಯವನ್ನು ಬೇರ್ಪಡಿಸಬೇಕು ಎಂದು ಮನವಿ ಮಾಡಿದರು.

ಕೈಗಾರಿಕೋದ್ಯಮಿಗಳು ತ್ಯಾಜ್ಯವನ್ನು ಸಾರ್ವಜನಿಕರಿಗೆ, ಸಮಾಜಕ್ಕೆ ಹಾಗೂ ಪರಿಸರಕ್ಕೆ ಹಾನಿಯಾಗದಂತೆ ನಿರ್ವಹಿಸುವುದು ಕೈಗಾರಿಕೋದ್ಯಮಿಗಳ ಜವಾಬ್ದಾರಿ ಎಂದರು.

ನಿರುದ್ಯೋಗದ ಸಮಸ್ಯೆ ಬಗೆಹರಿಸಲು ಕೈಗಾರಿಕೆಗಳು ಅಗತ್ಯ. ಆದರೆ ಪರಿಸರ ಮಾಲಿನ್ಯ ಉಂಟಾಗದಂತೆ ಎಚ್ಚರ ವಹಿಸುವುದು ಅವಶ್ಯಕ . ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯಲ್ಲಿ ತೊಡಗಿ ಇತರರಿಗೆ ಮಾದರಿಯಾಗಬೇಕು. ತಿಮ್ಮಕ್ಕ ಪರಿಸರವಾದಿಯಾಗಿದ್ದರಿಂದ ನಾವು ಅವರನ್ನು ನೆನೆಸುತ್ತಿದ್ದೇವೆ. ವಿದ್ಯಾರ್ಥಿಗಳು ಪ್ರತಿ ವರ್ಷ ಇಂಥ ಸಮಾರಂಭಗಳನ್ನು ಆಯೋಜಿಸಿ ಜಾಗೃತಿ ಉಂಟುಮಾಡಬೇಕು ಎಂದರು.

ರಾಜಕೀಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ (Prahlad Joshi) ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ

[ccc_my_favorite_select_button post_id="118281"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!