ದೊಡ್ಡಬಳ್ಳಾಪುರ: ಭಾರತದ ಮಾಜಿ ಪ್ರಧಾನಿ, ಏಕೈಕ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಅವರ 108ನೇ ಜನ್ಮದಿನ ಇಂದು (ನ.19).
ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು ಇಂದಿರಾ ಅವರನ್ನು ಸ್ಮರಿಸಿದ್ದಾರೆ.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿರುವ ಮುಖಂಡರು, ಪುಷ್ಪ ನಮನ ಸಲ್ಲಿಸಿದ್ದಾರೆ.
ಈ ವೇಳೆ ದೊಡ್ಡಬಳ್ಳಾಪುರ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಜಗನ್ನಾಥ, ಕಾರ್ಯ ಅದಕ್ಷ ಅಂಜನಮೂರ್ತಿ, ಪ್ರಧಾನ ಕಾರ್ಯದರ್ಶಿಗಳಾದ ಜವಾಜಿ ರಾಜೇಶ್, ಮಧುಕುಮರ್, ಎಸ್.ಸಿ.ಕಾಂಗ್ರೆಸ್ ಅಧ್ಯಕ್ಷ ಬಿ.ಮುನಿರಾಜು, ಕಾರ್ಮಿಕ ಘಟಕದ ಅಧ್ಯಕ್ಷ ರಾಮಾಂಜಿನಪ್ಪ, ಮಾಜಿ ಜಿಲ್ಲಾ ಅಧ್ಯಕ್ಷೆ ರೇವತಿ ಅನಂತರಾಮ್, ನಗರಸಭಾ ಸದಸ್ಯೆ ವಾಣಿ, ಆಶ್ರಯ ಕಮಿಟಿ ಸದಸ್ಯೆ ಮೋಸಿನಾ, ಮುನ್ನಾ, ಮಮತಾ, ಅನಿತಾ ಮತ್ತಿತರರಿದ್ದರು.