ಬರಬೇಕಾದ ಗೃಹಲಕ್ಷ್ಮಿ ಹಣ ಬಾಕಿ ಎಷ್ಟು..?; ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದು ಇಷ್ಟು..!

LKG-UKG to start in Anganwadis: Lakshmi Hebbalkar

ತುಮಕೂರು: ಕಳೆದ ಮೂರು ತಿಂಗಳಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿಯಾಗದಿರುವ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ (Lakshmi Hebbalakara) ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಮೂರು ತಿಂಗಳು ಅಲ್ಲ, ಸೆಪ್ಟೆಂಬರ್ ಮತ್ತು ಅಕ್ಟೋಬರ್ ಎರಡು ತಿಂಗಳ ಹಣ ಮಾತ್ರ ಬಾಕಿ ಉಳಿದಿದ್ದು, ಶೀಘ್ರದಲ್ಲೇ ಪಾವತಿ ಮಾಡಲಾಗುವುದು.

ವಿವಿಧ ಯೋಜನೆಗಳೊಂದಿಗೆ ಗೃಹಲಕ್ಷ್ಮಿ ಯೋಜನೆಗೆ ತಿಂಗಳಿಗೆ 2,500 ಕೋಟಿ ಬೇಕಾಗುತ್ತದೆ. ಅವುಗಳ ಹೊಂದಾಣಿಕೆ ಕಾಣರ ಸ್ವಲ್ಪ ವಿಳಂಬ ಆಗುತ್ತಿದೆ. ಆದರೆ ಇದು ಕಾಳಜಿ ಇಲ್ಲವೆಂದಲ್ಲ, ಕಾಲ ಕಾಲಕ್ಕೆ ಫಲಾನುಭವಿಗಳಿಗೆ ಯೋಜನೆಯ ನೆರವು ಕಲ್ಪಿಸಲಾಗುತ್ತಿದೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಹಿಂದಿನ ಬಜೆಟ್‌ನಲ್ಲಿ 1 ಸಾವಿರ ಗೌರವ ಧನ ಹೆಚ್ಚಿಸಲಾಗಿದೆ. ಮುಂದಿನ ಬಜೆಟ್‌ನಲ್ಲಿ ಮತ್ತೆ 1 ಸಾವಿರ ಹೆಚ್ಚಿಸಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಭರವಸೆ ನೀಡಿದರು.

ನಗರದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ (ಐಸಿಡಿಎಸ್) ಸುವರ್ಣ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗೌರವ ಧನ ಹೆಚ್ಚಳದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆಗೆ ಚರ್ಚಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಲ್ಲಿ ಶೇ.70ರಷ್ಟು ಮಂದಿ ಗೃಹಲಕ್ಷ್ಮಿ ನೆರವು ಪಡೆಯುತ್ತಿದ್ದಾರೆ. ಗೃಹಲಕ್ಷ್ಮಿ ಸಹಕಾರ ಬ್ಯಾಂಕ್‌ನಲ್ಲಿ 30 ಸಾವಿರದಿಂದ ₹5 ಲಕ್ಷದ ವರೆಗೆ ಸಾಲ ವಿತರಿಸಲು ಯೋಜನೆ ರೂಪಿಸಲಾಗಿದೆ ಎಂದರು.

ನ.28ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಗ್ರ 30 ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಅಕ್ಕ ಪಡೆ, ಸಹಕಾರ ಬ್ಯಾಂಕ್‌ಗೆ ಅಧಿಕೃತವಾಗಿ ಚಾಲನೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

5 ಸಾವಿರ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ

ರಾಜ್ಯದ ಐದು ಸಾವಿರ ಅಂಗನವಾಡಿಗಳಲ್ಲಿ ಎಲ್‌ಜಿ-ಯುಕೆಜಿ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸಲಾಗುತ್ತಿದೆ. ಖಾಸಗಿ ಶಾಲೆಗಳಲ್ಲಿ ಸಿಗುವಂತಹ ಗುಣಮಟ್ಟದ ಇಂಗ್ಲಿಷ್ ಶಿಕ್ಷಣ ಬಡಮಕ್ಕಳಿಗೂ ಸಿಗಬೇಕು ಎಂದು ಅಂಗನವಾಡಿಗಳಲ್ಲಿ ಎಲ್‌ ಕೆಜಿ-ಯುಕೆಜಿ ತರಗತಿಗಳನ್ನು ಆರಂಭಿಸಲಾಗುತ್ತಿದೆ.

ರಾಜ್ಯದ ಒಟ್ಟಾರೆ ಎಲ್ಲ ಅಂಗನವಾಡಿಗಳ ಪೈಕಿ 17 ಸಾವಿರ ಕಾರ್ಯಕರ್ತೆಯರು ಪದವೀಧರರಿದ್ದು, 4 ಸಾವಿರ ಸ್ನಾತಕೋತ್ತರ ಪದವೀಧರರಿದ್ದಾರೆ. ಇವರನ್ನು ಬಳಸಿಕೊಂಡು ಮೊದಲ ಹಂತದಲ್ಲಿ ಐದು ಸಾವಿರ ಅಂಗನವಾಡಿಗಳನ್ನು ಇದೇ 28ರಂದು ಆರಂಭಿಸಲಾಗುತ್ತಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು.

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಆಯ್ಕೆಯಾಗುವ ಗ್ರಾಮ ಪಂಚಾಯತಿಗಳ (Grama Panchayats) ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿದೆ

[ccc_my_favorite_select_button post_id="121230"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!