ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ ಕ್ವಿನ್ ಸಿಟಿಯ 200 ಎಕರೆಯಲ್ಲಿ ಸೆಮಿಕಂಡಕ್ಟರ್ ಪಾರ್ಕ್

Exclusive Roundtable on KWIN-City Project

ಬೆಂಗಳೂರು: ಆಧುನಿಕ ಬಗೆಯ ಕೈಗಾರಿಕೋದ್ಯಮಗಳ ಮಹತ್ತ್ವವನ್ನು ಅರಿತಿರುವ ರಾಜ್ಯ ಸರಕಾರವು ಉದ್ದೇಶಿತ ದೊಡ್ಡಬಳ್ಳಾಪುರ- ದಾಬಸ್ ಪೇಟೆ ನಡುವಿನ ಕ್ವಿನ್ ಸಿಟಿಯ (Kwin City) 200 ಎಕರೆ ಜಾಗದಲ್ಲಿ ಸೆಮಿಕಂಡಕ್ಟರ್ ಪಾರ್ಕ್ ಅಭಿವೃದ್ಧಿಪಡಿಸಲಿದೆ. ಇಲ್ಲಿ ಈ ತರಹದ ಕಂಪನಿಗಳಿಗೆ ಬೇಕಾಗುವ ಸಕಲ ಸೌಕರ್ಯಗಳನ್ನೂ ಕಲ್ಪಿಸಲಾಗುವುದು. ಇದು ದೇಶ ಮತ್ತು ರಾಜ್ಯ ಮಟ್ಟದಲ್ಲಿ ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ರೀತಿಯ ನಾವೀನ್ಯತಾ ಕೇಂದ್ರವಾಗಿ ಕೆಲಸ ಮಾಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (M.B. Patila) ಹೇಳಿದ್ದಾರೆ.

ಮಂಗಳವಾರ ಇಲ್ಲಿನ ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆರಂಭವಾದ ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯು ಮುಂಚೂಣಿ ತಂತ್ರಜ್ಞಾನ ಕಂಪನಿಗಳಿಂದ ಮತ್ತು ಪ್ರಮುಖ ಆ್ಯಂಕರ್ ಹೂಡಿಕೆದಾರರಿಂದ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಆದ್ಯತೆ ನೀಡಿದೆ.

ಇಂತಹ ಹೂಡಿಕೆಯು ಕೈಗಾರಿಕೋದ್ಯಮದ ವಿವಿಧ ವಲಯಗಳಿಗೆ ಹರಿದು ಬರಬೇಕು ಎನ್ನುವುದು ಸರಕಾರದ ಗುರಿಯಾಗಿದೆ. ಇಂತಹ ವಲಯಗಳಲ್ಲಿ ಡ್ರೋನ್, ಸೆಮಿಕಂಡಕ್ಟರ್ ಸಾಧನಗಳು ಮತ್ತು ಸೌರ ವಿದ್ಯುತ್ ಎಲ್ಲವನ್ನೂ ಪರಿಗಣಿಸಲಾಗಿದೆ. ಇದರ ಜೊತೆಯಲ್ಲಿ ಇಂಡಸ್ಟ್ರಿ 5.0 ಮತ್ತು ಇನ್ನಿತರ ಅತ್ಯಾಧುನಿಕ ಕೈಗಾರಿಕಾ ವಿಧಾನಗಳನ್ನೂ ಗಂಭೀರವಾಗಿ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ ಕ್ವಿನ್ ಸಿಟಿಯ 200 ಎಕರೆಯಲ್ಲಿ ಸೆಮಿಕಂಡಕ್ಟರ್ ಪಾರ್ಕ್

ಕೈಗಾರಿಕೆಗಳು ಬೆಳೆಯಬೇಕು ಮತ್ತು ಹೂಡಿಕೆದಾರರು ನಮ್ಮಲ್ಲಿಗೆ ಬರಬೇಕೆಂದರೆ, ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯಪರಿಸರ ಚೆನ್ನಾಗಿರಬೇಕು. ನಮ್ಮಲ್ಲಿ 800ಕ್ಕೂ ಹೆಚ್ಚು ಆರ್ & ಡಿ ಕೇಂದ್ರಗಳು, 100ಕ್ಕೂ ಅಧಿಕ ಚಿಪ್ ವಿನ್ಯಾಸ ಕಂಪನಿಗಳು ಮತ್ತು 18,300 ನವೋದ್ಯಮಗಳು ಇವೆ.

ನಮ್ಮಲ್ಲಿರುವ ಆರ್ ಮತ್ತು ಡಿ ಕೇಂದ್ರಗಳು ಕೃತಕ ಬುದ್ಧಿಮತ್ತೆ, ಡೀಪ್ ಟೆಕ್, ಕ್ವಾಂಟಂ ಕಂಪ್ಯೂಟಿಂಗ್, ಸ್ಪೇಸ್-ಟೆಕ್ ಮುಂತಾದ ಅತ್ಯಾಧುನಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿವೆ.

ಉದ್ದೇಶಿತ ಕ್ವಿನ್ ಸಿಟಿಗೆ ಕೊಟ್ಟಿರುವ 5,000 ಎಕರೆ ಜಾಗದಲ್ಲಿ ಆರ್ ಮತ್ತು ಡಿ ಕೇಂದ್ರಗಳಿಗಾಗಿ ಅಗತ್ಯವಿರುವಷ್ಟು ಸ್ಥಳವನ್ನು ಮೀಸಲಿಟ್ಟು, ಅದಕ್ಕೆ ತಕ್ಕ ಕಾರ್ಯಪರಿಸರ ಅಭಿವೃದ್ಧಿ ಪಡಿಸಲಿದ್ದೇವೆ ಎಂದು ಅವರು ವಿವರಿಸಿದ್ದಾರೆ.

ರಾಜ್ಯದಲ್ಲಿ ಹಲವು ತಂತ್ರಜ್ಞಾನ ಕಂಪನಿಗಳು ಎಐ, ಎಂಎಲ್ (ಮಷೀನ್ ಲರ್ನಿಂಗ್), ಕ್ವಾಂಟಂ, ರೋಬೋಟಿಕ್ಸ್, ಆಧುನಿಕ ತಯಾರಿಕೆ ಮತ್ತು ಸುಸ್ಥಿರ ನಾವೀನ್ಯತೆಯ ಕ್ಷೇತ್ರಗಳಲ್ಲಿ ಸಕ್ರಿಯವಾಗಿವೆ. ಇಂತಹ ಕಂಪನಿಗಳಿಗೆ ಬೆಂಬಲ ಕೊಡಲೆಂದೇ ಸರಕಾರವು 600 ಕೋಟಿ ರೂ.ಗಳನ್ನು ಒದಗಿಸಿದೆ.

ರಾಜ್ಯವು ಡೀಪ್ ಸೈನ್ಸ್ ಮತ್ತು ಮುಂಚೂಣಿ ತಂತ್ರಜ್ಞಾನ ಎರಡರಲ್ಲೂ ಅಗ್ರಸ್ಥಾನದಲ್ಲಿ ಇರಬೇಕೆನ್ನುವುದು ಸರಕಾರದ ಸಂಕಲ್ಪವಾಗಿದೆ. ಇದಕ್ಕೆ ಪೂರಕವಾಗಿ ಇತ್ತೀಚೆಗೆ ಧಾರವಾಡದಲ್ಲಿ ಎಐ ಮತ್ತು ಕ್ವಾಂಟಂ ಕಂಪ್ಯೂಟಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಉತ್ಕೃಷ್ಟತಾ ಕೇಂದ್ರವನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ. ಇನ್ನೊಂದೆಡೆಯಲ್ಲಿ ಜೈವಿಕ ತಂತ್ರಜ್ಞಾನ, ಸೈಬರ್ ಸೆಕ್ಯುರಿಟಿ ತರಹದ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕೈಗಾರಿಕೆಗಳು ಶಿಕ್ಷಣ ಸಂಸ್ಥೆಗಳೊಂದಿಗೆ ಕೈಜೋಡಿಸಿವೆ ಎಂದು ಪಾಟೀಲ ನುಡಿದಿದ್ದಾರೆ.

ರಾಜ್ಯವು ಇ.ಎಸ್.ಡಿ.ಎಂ., ಸಂಚಾರ ವ್ಯವಸ್ಥೆ, ಜೈವಿಕ ತಂತ್ರಜ್ಞಾನ ಮತ್ತು ನವೋದ್ಯಮ ಪರಿಪೋಷಣೆಗೆ ಸಂಬಂಧಿಸಿದಂತೆ ಪುರೋಗಾಮಿ ನೀತಿಗಳನ್ನು ಹೊಂದಿದೆ. ಇದಲ್ಲದೆ ಜಪಾನ್, ಅಮೆರಿಕ, ಜರ್ಮನಿ ಮತ್ತು ಸಿಂಗಪುರದಂತಹ ರಾಷ್ಟ್ರಗಳೊಂದಿಗೆ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಆಯ್ಕೆಯಾಗುವ ಗ್ರಾಮ ಪಂಚಾಯತಿಗಳ (Grama Panchayats) ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿದೆ

[ccc_my_favorite_select_button post_id="121230"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!