Doddaballapura TAPMCS President and Vice President elected..!

ದೊಡ್ಡಬಳ್ಳಾಪುರ TAPMCS ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!

ದೊಡ್ಡಬಳ್ಳಾಪುರ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಡಿ.ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಎನ್.ಜಗನ್ನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಟಿಎಪಿಎಂಸಿಎಸ್ ಚುನಾವಣೆಯನ್ನು ರಾಜಕೀಯ ಪಕ್ಷಗಳ ಮುಖಂಡರು ಈ ಬಾರಿ ಪ್ರತಿಷ್ಠೆಯಾಗಿ ಪರಿಗಣಿಸಿದ್ದರಿಂದ ವಿಧಾನ ಸಭಾ ಚುನಾವಣೆಯಷ್ಠೆ ಜೋರಾಗಿ 13 ಜನ ನಿರ್ದೇಶಕರ ಆಯ್ಕೆಗೆ ಮತದಾನ ನಡೆದಿತ್ತು.

ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಟಿಎಪಿಎಂಸಿಎಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ.

ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಿ.ಸಿದ್ದರಾಮಯ್ಯ ಅವರು ಮಾತನಾಡಿ, ಸಂಘದಲ್ಲಿ ಈ ಹಿಂದೆ ಉತ್ತಮ ಆಡಳಿತ ನೀಡಿರುವುದನ್ನು ಗುರುತಿಸಿ ಎರಡನೇ ಬಾರಿಗೂ ಜನರು ಆರ್ಶೀವಾದ ಮಾಡಿದ್ದಾರೆ. ಹಾಗೆಯೇ ಪಕ್ಷದ ಮುಖಂಡರು ಸಹ ಅಧ್ಯಕ್ಷ ಸ್ಥಾನ ನೀಡಿದ್ದಾರೆ.

ತಾಲ್ಲೂಕಿನಲ್ಲೇ ಅತ್ಯಂತ ಹಳೇಯ ಸಹಕಾರಿ ಸಂಸ್ಥೆಯಾಗಿರುವ ಟಿಎಪಿಎಂಸಿಎಸ್ ಎಷ್ಟೇ ಲಾಭಗಳಿಸಿದರು ಅದು ಷೇರುದಾರರಿಗೆ ತಲುಪಲಿದೆ. ಈ ನಂಬಿಕೆಯಲ್ಲೇ ಬಹುತೇಕ ಗ್ರಾಹಕರು ಟಿಎಪಿಎಂಸಿಎಸ್ ವತಿಯಿಂದ ನಡೆಸಲಾಗುತ್ತಿರುವ ಜನತಾ ಬಜಾರ್ಶಾಖೆಗಳಲ್ಲಿಯೇ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಗ್ರಾಹಕರ ಹಾಗೂ ಪಕ್ಷದ ಮುಖಂಡರ ನಂಬಿಕೆಯನ್ನು ಮತ್ತಷ್ಟು ಹೆಚ್ಚು ಮಾಡುವ ರೀತಿಯಲ್ಲಿ ಉತ್ತಮ ಆಡಳಿತ ನೀಡಲಾಗುವುದು ಎಂದರು.

ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ರೈತರ ಅನುಕೂಲಕ್ಕಾಗಿ ರಸಗೊಬ್ಬರ, ಪಶುಆಹಾರ, ಗುಣಮಟ್ಟದ ದಿನಸಿ ಸೇರಿದಂತೆ ಸಾಕಷ್ಟು ವಹಿವಾಟು ನಡೆಸಲಾಗುತ್ತಿದೆ.

ತಾಲ್ಲೂಕಿನಲ್ಲಿ ಸಂಘವು 6 ಸಾವಿರ ಜನ ಷೇರುದಾರರು ಹೊಂದಿರುವ ದೊಡ್ಡ ಸಹಕಾರಿ ಸಂಸ್ಥೆಯಾಗಿದೆ. ಕಾಂಗ್ರೆಸ್ ಪಕ್ಷವು ಸದಾ ಸಹಕಾರಿ ಕ್ಷೇತ್ರದ ಏಳಿಗೆಗಾಗಿ ಶ್ರಮಿಸುತ್ತಲೇ ಬರುತ್ತಿದೆ. ಈ ನಂಬಿಕೆಯ ಮೇಲೆಯೇ ಕ್ಷೇತ್ರದ ಜನರು ಕಾಂಗ್ರೆಸ್ ಬೆಂಬಲಿತ ನಿರ್ದೇಶಕರನ್ನು ಆಯ್ಕೆ ಮಾಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಚುಂಚೇಗೌಡ, ಕಾಂಗ್ರೆಸ್ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಎಂ.ಬೈರೇಗೌಡ, ನಗರ ಬ್ಲಾಕ್ ಅಧ್ಯಕ್ಷ ಕೆ.ಪಿ.ಜಗನ್ನಾಥ್, ಕಸಬಾ ಬ್ಲಾಕ್ ಅಧ್ಯಕ್ಷ ಅಪ್ಪಿ ವೆಂಕಟೇಶ್ ಹಾಗೂ ಸಂಘದ ನಿರ್ದೆಶಕರು ಇದ್ದರು.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!