ಬೆಂ.ಗ್ರಾ.ಜಿಲ್ಲೆ: ಐ.ಸಿ.ಡಿ.ಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟಣೆ ಕುರಿತು ರಾಜ್ಯ ಮಟ್ಟದ ಸಮಾವೇಶಕ್ಕೆ ಪೂರ್ವಭಾವಿ ಸಭೆ ನಡೆಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅವರು ಜಿಲ್ಲೆಗೆ ಆಗಮಿಸಲಿದ್ದಾರೆ.
ಇವರ ಅಧ್ಯಕ್ಷತೆಯಲ್ಲಿ ನವೆಂಬರ್ 21 ಶುಕ್ರವಾರಸಂಜೆ 04.00 ಗಂಟೆಗೆ “ಜಿಲ್ಲಾಡಳಿತ ಭವನದ ಆಡಿಟೋರಿಯಂ” ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.