Dharmasthala case: Who is BJP on? - Cmsiddaramaiah

ನನ್ನ ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೂಢನಂಬಿಕೆ ಮತ್ತು ಕಂದಾಚಾರಗಳಲ್ಲಿ ನಂಬುವುದಿಲ್ಲವಾದ್ದರಿಂದ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುತ್ತೇನೆ. ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಸಮಾನವಾಗಿ ಕಂಡು, ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ.

ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ ಎಂದು ತಿಳಿಸಿದರು.

2028 ರಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ

ಮಾಜಿ ಸಂಸದ ಡಿ.ಕೆ.ಸುರೇಶ್ (D.K. Suresh) ಅವರು ಡಿ.ಕೆ.ಶಿವಕುಮಾರ್ (D.K. Shivakumar) ಅವರು ಸಿಎಂ ಆಗುವ ಬಗ್ಗೆ ಮಾಡಿದ ಹೇಳಿಕೆಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಇಂತಹ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಐದು ವರ್ಷ ಆಡಳಿತ ನಡೆದು ಜನಾದೇಶ ಇದೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ.

ನವೆಂಬರ್ ಕ್ರಾಂತಿ ಎಂಬ ವಿಷಯವನ್ನು ಮಾಧ್ಯಮದವರೇ ಸೃಷ್ಟಿಸಿದರು. ಜನರು ಆಸೆಯಂತೆ ಐದು ವರ್ಷ ಸರ್ಕಾರ ನಡೆಸಿ ನಂತರವೂ ಪುನ: ಕಾಂಗ್ರೆಸ್ ಪಕ್ಷವೇ ಆಯ್ಕೆಯಾಗಿ ಬರಲಿದೆ ಎಂದು ತಿಳಿಸಿದರು.

ಸಂಪುಟ ಪುನರ್ರಚನೆ: ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ

ಐದು ವರ್ಷವೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಕೆ ಬಗ್ಗೆ ನಡೆಯುತ್ತಿರುವ ಚರ್ಚೆಗೆ ಉತ್ತರಿಸಿ, ಇದು ಅನಾವಶ್ಯಕ ಚರ್ಚೆ. ಎರಡೂವರೆ ವರ್ಷದ ನಂತರ ಸಂಪುಟ ಪುನರ್ರಚನೆ ಮಾಡಬಹುದು ಎಂದು ತಿಳಿಸಿದ ನಂತರವಷ್ಟೇ, ಮುಖ್ಯಮಂತ್ರಿ ಬದಲಾವಣೆಯ ವಿಷಯ ಮುನ್ನಲೆಗೆ ಬಂದಿರುವುದು.

ಸಂಪುಟ ಪುನರ್ರಚನೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಬೇಕಿದೆ. ಒಟ್ಟು 34 ಸಚಿವರ ಸ್ಥಾನವಿದ್ದು, ಅದರಲ್ಲಿ ಎರಡು ಸ್ಥಾನಗಳು ಖಾಲಿಯಿದೆ. ಸಂಪುಟ ಪುನರ್ರಚನೆ ಸಂದರ್ಭದಲ್ಲಿ ಈ ಖಾಲಿ ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದರು.

ಜನರು ಅಪೇಕ್ಷಿಸುವವರೆಗೆ ಬಜೆಟ್ ಮಂಡನೆ

2028 ರಲ್ಲಿಯೂ ಸಿದ್ದರಾಮಯ್ಯನವರ ನೇತೃತ್ವದಲ್ಲಿಯೇ ಚುನಾವಣೆ ಎದುರಿಸಲಾಗುವುದೇ ಎಂಬುದಕ್ಕೆ ಉತ್ತರಿಸಿ, ಈ ಬಗ್ಗೆ ಭವಿಷ್ಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಜನರು ಎಲ್ಲಿವರೆಗೆ ಅಪೇಕ್ಷಿಸುವರೋ, ಅಲ್ಲಿಯವೆಗೆ ನಾನೇ ಬಜೆಟ್ ಮಂಡಿಸುತ್ತೇನೆ ಎಂದು ತಿಳಿಸಿದರು.

ಬೆಂಗಳೂರು ಬ್ಯಾಂಕ್ ದರೋಡೆ: ಅಪರಾಧಿಗಳ ಬಂಧನಕ್ಕೆ ಕ್ರಮ

ಬೆಂಗಳೂರಿನಲ್ಲಿ ನಡೆದ ಬ್ಯಾಂಕ್ ದರೋಡೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಕಳುವಿನ ಬಗ್ಗೆ ಸುಳಿವು ಸಿಕ್ಕಿದ್ದು, ಘಟನೆಗೆ ಬಳಸಿದ ಕಾರು ಪೊಲೀಸರಿಗೆ ದೊರಕಿದೆ. ಬ್ಯಾಂಕ್ ದರೋಡೆಯ ಅಪರಾಧಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದರು.

ಪ್ರಧಾನಿ ಮೋದಿ ಭೇಟಿ

ಪ್ರಧಾನಿ ಮೋದಿ ಅವರೊಂದಿಗಿನ ಭೇಟಿಯ ಬಗ್ಗೆ ವಿವರಗಳನ್ನು ಕೇಳಲಾಗಿ, ರಾಜ್ಯದಲ್ಲಿ ಅಧಿಕ ಮಳೆಯುಂಟಾಗಿದ್ದು, ಅದರಿಂದ ಹಾನಿಗೆ ಪರಿಹಾರ ಕೇಳಲಾಗಿದೆ. ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ರೈತರು , ಕಾರ್ಖಾನೆ ಮಾಲಿಕರೊಂದಿಗೆ ನಡೆಸಿದ ಚರ್ಚೆಗಳ ಬಗ್ಗೆ ವಿವರಿಸಲಾಯಿತು. 11.25 ಇಳುವರಿಯಿರುವ ಕಬ್ಬು ಬೆಳೆಯ ಒಂದು ಟನ್ ಗೆ ( ಕಟಾವು ಮತ್ತು ಸಾಗಣೆ ವೆಚ್ಚ ಹೊರತುಪಡಿಸಿ) 3,300 ರೂ. ನೀಡುವ ತೀರ್ಮಾನಕ್ಕೆ ರೈತರು ಹಾಗೂ ಕಾರ್ಖಾನೆಯವರು ಸಮ್ಮತಿಸಿದ್ದಾರೆ ಎಂದರು.

ರಾಜಕೀಯ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ; ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="119679"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!