Government is closing schools, monasteries are running well; Union Minister H.D. Kumaraswamy

ಸರ್ಕಾರ ಶಾಲೆಗಳನ್ನು ಮುಚ್ಚುತ್ತಿದೆ, ಮಠಗಳು ಉತ್ತಮವಾಗಿ ನಡೆಸುತ್ತಿವೆ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಸರ್ಕಾರ ಶಾಲೆಗಳನ್ನು ಮುಚ್ಚುತ್ತಿದೆ. ರಾಜ್ಯ ಮಠಮಾನ್ಯಗಳು ಬಡವರಿಗೆ, ದುರ್ಬಲರಿಗೆ ಶಿಕ್ಷಣ ನೀಡಲು ಸರ್ಕಾರದ ಮಾಡುವ ಕೆಲಸವನ್ನು ಮಾಡುತ್ತಿವೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಹೇಳಿದರು.

ನಗರದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಹಮ್ಮಿಕೊಂಡಿದ್ದ 17ನೆ ಬಿಜಿಎಸ್ ಸಂಸ್ಥಾಪನಾ ದಿನ ಹಾಗೂ ಬಿಜಿಎಸ್ ಉತ್ಸವದ ಉದ್ಘಾಟನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯ ಸರ್ಕಾರವು ನಡೆಸಲಾಗಿದೆ ಶಾಲೆಗಳನ್ನು ಮುಚ್ಚುವ ಕೆಲಸ ಮಾಡುತ್ತಿದೆ. ರೈತರು, ಬಡವರು, ಆರ್ಥಿಕ ದುರ್ಬಲರ ಮಕ್ಕಳು ವ್ಯಾಸಂಗ ಮಾಡುವ ಶಾಲೆಗಳಿಗೆ ಸರ್ಕಾರ ಬೀಗ ಹಾಕುತ್ತಿದೆ. ಇಂತಹ ಸಂದರ್ಭದಲ್ಲಿ ಮಠಗಳು ನಾಡಿನ ಮಕ್ಕಳಿಗೆ ಅನ್ನ, ಅಕ್ಷರ, ಆಶ್ರಯ ನೀಡುವ ಕೆಲಸ ಮಾಡುತ್ತಿವೆ ಎಂದು ಕೇಂದ್ರ ಸಚಿವರು ಹೇಳಿದರು.

ಶಿಕ್ಷಣ ಸಂಸ್ಥೆಗಳನ್ನು ಕಟ್ಟುವುದು ಸುಲಭ. ಅವುಗಳ ನಿರ್ವಹಣೆ ಹಾಗೂ ನಡೆಸಿಕೊಂಡು ಹೋಗುವುದು ಸುಲಭವಲ್ಲ. ಆದರೆ, ದಕ್ಷತೆ, ಕ್ಷಮತೆಯಿಂದ ಮಠಗಳು ಸುನಾಯಾಸವಾಗಿ ನಡೆಸಿಕೊಂಡು ಹೋಗುತ್ತಿವೆ. ದೂರದೃಷ್ಟಿ, ಸಮಾಜದ ಕುರಿತಾದ ಕಾಳಜಿಯಿಂದ ಇದೆಲ್ಲವೂ ಸಾಧ್ಯವಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಮಠಗಳು ಕೇವಲ ಶಿಕ್ಷಣ ಸಂಸ್ಥೆಗಳನ್ನು ಅಷ್ಟೇ ನಡೆಸುತ್ತಿಲ್ಲ. ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿವೆ. ಅಲ್ಲದೆ, ಸಮಾಜ ಸೇವೆಯ ನಡುವೆಯೇ ಆಧ್ಯಾತ್ಮ ಕ್ಷೇತ್ರದಲ್ಲಿಯೂ ನಿಸ್ವಾರ್ಥವಾಗಿ ತೊಡಗಿಸಿಕೊಂಡಿವೆ ಎಂದು ಸಚಿವರು ಪ್ರತಿಪಾದಿಸಿದರು.

ಮುಂದಿನ ತಲೆಮಾರಿಗೆ ಗಟ್ಟಿಯಾದ, ಉತ್ತಮ ಮೌಲ್ಯಗಳನ್ನು ಕಲಿಸುವ ಶಿಕ್ಷಣ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಆದಿಚುಂಚನಗಿರಿ ಮಠವು ಮುಂಚೂಣಿಯಲ್ಲಿ ನಿಂತು ಸಮಾಜದಲ್ಲಿ ಅರಿವು ಮೂಡಿಸುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದರು.

ಶ್ರೀ ಆದಿಚುಂಚನಗಿರಿ ಮಠದ ಡಾ. ಶ್ರೀ ನಿರ್ಮಲಾನಂದ ನಾಥ ಮಹಾಸ್ವಾಮೀಜಿ, ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಶ್ರೀ ಆದಿಚುನಚಗಿರಿ ಶಿಕ್ಷಣ ಟ್ರಸ್ಟ್ ಮುಖ್ಯಸ್ಥರಾದ ಶ್ರೀ ಪ್ರಕಾಶನಾಥ ಸ್ವಾಮೀಜಿ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್.ಆರ್. ರಂಗನಾಥ್, ಗ್ಯಾರಂಟಿ ನ್ಯೂಸ್ ಮುಖ್ಯಸ್ಥರಾದ ಶಿವಸ್ವಾಮಿ, ಹಿರಿಯ ನಟಿ ಮಾಲಾಶ್ರೀ, ನಟಿ ಆರಾಧನಾ ಮುಂತಾದವರು ಉಪಸ್ಥಿತರಿದ್ದರು.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!