Grand Kannada Rajyotsava will be held in Kuntanahalli tomorrow

ಕುಂಟನಹಳ್ಳಿಯಲ್ಲಿ ನಾಳೆ ಅದ್ಧೂರಿ ಕನ್ನಡ ರಾಜ್ಯೋತ್ಸವ; 22 ದೇವರ ಉತ್ಸವದ ವಿಶೇಷ..!

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ); ನಾಳೆ (ನ.22) ದೊಡ್ಡಬಳ್ಳಾಪುರ ತಾಲ್ಲೂಕಿನ ಕುಂಟನಹಳ್ಳಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ (Kannada Rajyotsava) ಆಚರಿಸಲಾಗುತ್ತಿದೆ.

ಆದರೆ ಕುಂಟನಹಳ್ಳಿ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವವನ್ನು ಬಹಳ ವರ್ಷಗಳಿಂದ ಧಾರ್ಮಿಕ ಭಾವನೆಗೆ ಜೋಡಿಸಿ ಗ್ರಾಮಸ್ಥರು ಆಚರಿಸುತ್ತಿರುವುದು ವ್ಯಾಪಕ ಗಮನ ಸೆಳೆದಿದೆ.

ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ ಎಂಬುದು ನಿಮಗೂ ತಿಳಿದಿದೆ.

ಮೈಸೂರು ರಾಜ್ಯವು (ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.

ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.

ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ರಜಾದಿನವೆಂದು ಪಟ್ಟಿ ಮಾಡಲಾಗಿದೆ ಮತ್ತು ವಿಶ್ವದಾದ್ಯಂತ ಕನ್ನಡಿಗರು ಇದನ್ನು ಆಚರಿಸುತ್ತಾರೆ. ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಅಲ್ಲವೆ.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕುಂಟನಹಳ್ಳಿ ಗ್ರಾಮದಲ್ಲಿ ಹಲವು ವರ್ಷಗಳಿಂದ ಕನ್ನಡ ರಾಜ್ಯೋತ್ಸವಕ್ಕೆ ಧಾರ್ಮಿಕ ಭಾವನೆ ಜೋಡಿಯಾಗಿದೆ.

ಹೌದು ನಾಳೆ ನವೆಂಬರ್ 22 ರಂದು ಕುಂಟನಹಳ್ಳಿ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ 22 ದೇವರುಗಳ ಉತ್ಸವ ಆಯೋಜಿಸಲಾಗಿದ್ದು, ಗ್ರಾಮದಲ್ಲಿ ಹಬ್ಬದ ಸಂಭ್ರಮ ನಿರ್ಮಾಣವಾಗಿದೆ.

ನಾಳೆ ಕುಂಟನಹಳ್ಳಿ ಆಂಜನೇಯ ಸ್ವಾಮಿ, ಮೈಲಾರಲಿಂಗೇಶ್ವರ ಸ್ವಾಮಿ ಮಾಚೋಹಳ್ಳಿ, ಬೊಮ್ಮನಹಳ್ಳಿ ಆಂಜನೇಯ ಸ್ವಾಮಿ, ಲಕ್ಷ್ಮೀ ಕರಗದಾಂಬ ಸೋಮಶೆಟ್ಟಿಹಳ್ಳಿ, ಪಟೇಲಮ್ಮ ದೇವಿ ಅದ್ದಿಗಾನಹಳ್ಳಿ, ಮುತ್ಯಾಲಮ್ಮ ದೇವಿ ದೊಡ್ಡಬಳ್ಳಾಪುರ, ಅದ್ದೆ ತಿಮ್ಮರಾಯ ಸ್ವಾಮಿ, ಲಕ್ಷ್ಮೀ ನರಸಿಂಹಸ್ವಾಮಿ‌ ಲಿಂಗಾಪುರ, ಮಹೇಶ್ವರಮ್ಮ ದೇವಿ ನೇರಳಘಟ್ಟ, ಬ್ಯಾಡರಹಳ್ಳಿ ಕೆಂಪಮ್ಮ ದೇವಿ, ಗೊರವನಹಳ್ಳಿ ಮಹಾಲಕ್ಷ್ಮಿ , ಬಿದಲೂರು ಭೈರವೇಶ್ವರ ಸ್ವಾಮಿ, ಹೊನ್ನಾಘಟ್ಟ ಶನಿಮಹಾತ್ಮ, ಕಾಡನೂರು ಚನ್ನಕೇಶವ ಸ್ವಾಮಿ, ಹೊನ್ನಾಘಟ್ಟ ಅಕ್ಕಯ್ಯಮ್ಮ, ದೊಡ್ಡಬಳ್ಳಾಪುರ ದೊಡ್ಡಮ್ಮ ದೇವಿ, ಲಕ್ಷ್ಮೀ ವೆಂಕಟೇಶ್ವರಸ್ವಾಮಿ ಅಣಗಲಪುರ, ಭೈರವೇಶ್ವರ ಸ್ವಾಮಿ ಕೂಗೇನಹಳ್ಳಿ, ಎಸ್. ನಾಗೇನಹಳ್ಳಿ ಮುನೇಶ್ವರ ಸ್ವಾಮಿಯ ಉತ್ಸವ ನಡೆಯಲಿದೆ.

ಕನ್ನಡ ರಾಜ್ಯೋತ್ಸವದ ಜೊತೆ ದೇವರ ಉತ್ಸವ ಹಲವು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದ್ದು, ಇದೇ ಪ್ರಥಮ ಬಾರಿಗೆ 22 ದೇವರುಗಳ ಉತ್ಸವ ಗ್ರಾಮಸ್ಥರಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ ಎಂದು ಯುವ ಮುಖಂಡ ರಘು, ಮುರುಳಿ ಅವರು ಹರಿತಲೇಖನಿಗೆ ತಿಳಿಸಿದ್ದಾರೆ.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!