ಬೆಂಗಳೂರು: ಜೆಡಿಎಸ್ ಪಕ್ಷದ (JDS) ಪಕ್ಷದ ರಾಷ್ಟ್ರೀಯ ಪರಿಷತ್ ಮತ್ತು ರಾಷ್ಟೀಯ ಸಮಾವೇಶದ ಅಂಗವಾಗಿ ರಾಜ್ಯ ಕಚೇರಿ ಜೆ.ಪಿ ಭವನದಲ್ಲಿ ನಾಳೆ (ನ.22) ಸಂಜೆ ನಾಲ್ಕು ಗಂಟೆಗೆ ದ್ವಜಾರೋಹಣ ನಡೆಸಲಾಗುವುದು.
ನಂತರ ಸಂಜೆ 5 ಗಂಟೆಗೆ ಪಕ್ಷದ ರಜತ ಮಹೋತ್ಸವ ಆಚರಣೆ ಅಂಗವಾಗಿ ಪಕ್ಷ ನಡೆದು ಬಂದ ದಾರಿ ಹಾಗೂ ಸನ್ಮಾನ್ಯ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರು ಸಾಧನೆ ಕುರಿತು ಪ್ರದರ್ಶಿಸಿ ಉದ್ಘಾಟನೆ ನಡೆಸಲಾಗುವುದು.
ಸಂಜೆ 6:30ಕ್ಕೆ ಪಕ್ಷದ ರಾಜ್ಯ ಪರಿಷತ್, ರಾಷ್ಟೀಯ ಪರಿಷತ್ ವಿವಿಧ ರಾಜ್ಯಗಳಿಂದ ಬಂದಿರುವ ಪ್ರತಿನಿಧಿಗಳ ಜತೆ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಭೆ ಏರ್ಪಡಿಸಲಾಗಿದೆ.
ಸಭೆಯಲ್ಲಿ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ H.D. ದೇವೇಗೌಡರು ಮತ್ತು ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ Hd ಕುಮಾರಸ್ವಾಮಿ ಅವರು ಕೋರ್ ಕಮಿಟಿ ಸದಸ್ಯರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಭಾಗಿಯಾಗುತ್ತಾರೆ.