ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಾಲ: ಆರ್‌.ಅಶೋಕ

Loan from Prime Minister Narendra Modi for development: R. Ashoka

ಬೆಂಗಳೂರು: ಎರಡೂವರೆ ವರ್ಷದಲ್ಲಿ ತೆರಿಗೆಗಳನ್ನು ಏರಿಸಿದ್ದೇ ಕಾಂಗ್ರೆಸ್‌ ಸರ್ಕಾರದ ಸಾಧನೆ. ಈ ಆಡಳಿತದ ಅವಧಿ ಕರಾಳ ವರ್ಷಗಳಾಗಿವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಹೋಳಾಗಿ ಸಿಎಂ ಕುರ್ಚಿಗಾಗಿ ಕಾದಾಟ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್‌ ಸಿಎಂ ಕುರ್ಚಿಗಾಗಿ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಜಿಎಸ್‌ಟಿಯನ್ನು ಇಳಿಸಿದ್ದರೆ, ಈ ಎರಡೂವರೆ ವರ್ಷದಲ್ಲಿ ಕಾಂಗ್ರೆಸ್‌ ಸರ್ಕಾರ ಎಲ್ಲ ತೆರಿಗೆಗಳನ್ನು ಏರಿಕೆ ಮಾಡಿದೆ. ಇದೇ ಇವರ ಸಾಧನೆ. ಬಜೆಟ್‌ನಲ್ಲಿ ಚಾಂಪಿಯನ್‌ ಎಂದು ಹೇಳಿಕೊಳ್ಳುವ ಸಿಎಂ ಸಿದ್ದರಾಮಯ್ಯ ಸಾಲ ಮಾಡುವುದರಲ್ಲಿ, ಭ್ರಷ್ಟಾಚಾರದಲ್ಲಿ, ರೈತರನ್ನು ಕೊಲ್ಲುವಲ್ಲಿ, ಜಾತಿಗಳ ಮಧ್ಯೆ ಬೆಂಕಿ ಹಚ್ಚುವಲ್ಲಿ, ಹೈಕಮಾಂಡ್‌ಗೆ ಹಣ ಕಳುಹಿಸುವಲ್ಲಿ ಚಾಂಪಿಯನ್‌ ಆಗಿದ್ದಾರೆ ಎಂದರು.

ಕ್ರಾಂತಿ ಇಲ್ಲ ಎಂದು ಹೇಳಿದ್ದರೂ ಎಲ್ಲರೂ ಹೈಕಮಾಂಡ್‌ಗೆ ಬಳಿಗೆ ಹೋಗಿದ್ದಾರೆ. ಸಿಎಂ ಸ್ಥಾನಕ್ಕೆ ಒಪ್ಪಂದ ನಡೆದಿದೆಯೇ ಇಲ್ಲವೇ ಎಂಬುದನ್ನು ಜನರಿಗೆ ಸರಿಯಾಗಿ ತಿಳಿಸಬೇಕು.

ಇಂತಹ ಕಚ್ಚಾಟದಿಂದಲೇ ಗೂಗಲ್‌ ಕಂಪನಿ ಪಕ್ಕದ ರಾಜ್ಯಕ್ಕೆ ಹೋಗಿದೆ. ಬೆಂಗಳೂರು ಕಸ, ರಸ್ತೆಗುಂಡಿಯ ಸಮಸ್ಯೆಯಿಂದಾಗಿ ಉದ್ಯಮಿಗಳು ಈ ಕಡೆಗೆ ಬರುತ್ತಿಲ್ಲ. ಇಂತಹ ನಗರವನ್ನೇ ಬ್ರ್ಯಾಂಡ್‌ ಮಾಡಿದ್ದಾರೆ ಎಂದರು.

ಬೆಂಗಳೂರಿನಲ್ಲಿ ಕಸ ಗುಡಿಸುವ ಯಂತ್ರಕ್ಕಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಯಂತ್ರಗಳನ್ನು ಖರೀದಿ ಮಾಡಿದರೆ 308 ಕೋಟಿ ರೂ. ವೆಚ್ಚವಾಗುತ್ತದೆ. ಆದರೆ ಈ ಸರ್ಕಾರ ಬಾಡಿಗೆಗಾಗಿ 610 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ 72 ಲಕ್ಷ ರೂ. ಗೆ ಒಂದು ವಾಹನ ಖರೀದಿ ಮಾಡಿದರೆ, ಈ ಸರ್ಕಾರ ಎರಡೂವರೆ ಕೋಟಿ ರೂ.ಖರ್ಚು ಮಾಡುತ್ತಿದೆ. ಅಂದರೆ ಇದು ದೊಡ್ಡ ಹಗರಣವಾಗಿದೆ.

ಒಂದು ಗಂಟೆಗೆ 2 ಕಿ.ಮೀ. ಸ್ವಚ್ಛ ಮಾಡಬಹುದು. ಆದರೆ ಒಂದು ಗಂಟೆಯಲ್ಲಿ 40 ಕಿ.ಮೀ. ಕಸ ಗುಡಿಸಿದ್ದಾರೆ ಎಂದು ಬಿಲ್‌ ಮಾಡಲಾಗುತ್ತಿದೆ. ಈ ಮೂಲಕ ಹಣ ಲೂಟಿ ಮಾಡಲಾಗುತ್ತಿದೆ. ನಗರದಲ್ಲಿರುವ ಟ್ರಾಫಿಕ್‌ ನಡುವೆ ಇಷ್ಟು ಕಸ ಗುಡಿಸಲು ಸಾಧ್ಯವೇ ಇಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿಗಾಗಿ ಸಾಲ ಮಾಡಿದರೆ, ಸಿಎಂ ಸಿದ್ದರಾಮಯ್ಯ ಲೂಟಿಗಾಗಿ ಸಾಲ ಮಾಡಿದ್ದಾರೆ. ಬಿಜೆಪಿ ಮೇಲೆ ಕಮಿಶನ್‌ ಆರೋಪ ಮಾಡಿ ಈಗ ಇವರೇ ಕಮಿಶನ್‌ ಪಡೆಯುತ್ತಿದ್ದಾರೆ ಎಂದರು.

ರೈತರ ಪರ ಹೋರಾಟ

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನವೆಂಬರ್‌ 27, 28 ರಂದು ಹಾಗೂ ಡಿಸೆಂಬರ್‌ 1 ಮತ್ತು 2 ರಂದು ಜಿಲ್ಲಾ ಕೇಂದ್ರಗಳಲ್ಲಿ ರೈತ ಮೋರ್ಚಾ ವತಿಯಿಂದ ಹೋರಾಟ ಮಾಡಿ ಬೆಳೆ ಹಾನಿ ಪರಿಹಾರಕ್ಕೆ ಆಗ್ರಹಿಸಲಾಗುವುದು.

ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭ, ತುಂಗಭದ್ರಾ ಜಲಾಶಯದಿಂದ ಎರಡನೇ ಬೆಳೆಗೆ ನೀರು ಹರಿಸದೇ ಇರುವುದರಿಂದ ಅದಕ್ಕೆ ಪರಿಹಾರ, ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮೊದಲಾದ ಒತ್ತಾಯಗಳನ್ನು ಮಾಡಲಾಗುವುದು. ಈ ಮೂಲಕ ರೈತರ ಹೋರಾಟಕ್ಕೆ ಬೆಂಬಲಿಸಲಾಗುವುದು ಎಂದು ತಿಳಿಸಿದರು.

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಆಯ್ಕೆಯಾಗುವ ಗ್ರಾಮ ಪಂಚಾಯತಿಗಳ (Grama Panchayats) ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿದೆ

[ccc_my_favorite_select_button post_id="121230"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!