Siddaramaiah CM conference to retain chair: Opposition Leader R. Ashoka

ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಆರ್.ಅಶೋಕ

ಬೆಂಗಳೂರು: ಸಿಎಂ (Cm) ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದಾಗಿ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ (R. Ashoka) ಲೇವಡಿ ಮಾಡಿದ್ದಾರೆ.

ಶಾಸಕರ ಕಚೇರಿ ಮುಂಭಾಗ ಆಯೋಜಿಸಿದ್ದ ” ವಂದೇ ಮಾತರಂ ಸಂಭ್ರಮಾಚರಣೆ” ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಡಲೇ ಕಾಂಗ್ರೆಸ್‌ ಹೈಕಮಾಂಡ್‌ ಯಾರು ಮುಖ್ಯಮಂತ್ರಿ ಎಂದು ಸ್ಪಷ್ಟವಾಗಿ ತಿಳಿಸಲಿ ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವೆ ಕಾದಾಟ ನಡೆಯುತ್ತಿರುವುದರಿಂದ ಸರ್ಕಾರ ಸತ್ತುಹೋಗಿದೆ. ಡಿ.ಕೆ.ಶಿವಕುಮಾರ್‌ ಅವರನ್ನು ಸಿಎಂ ಪದವಿಯಲ್ಲಿ ಕೂರಿಸಬೇಕು ಎಂದು ಅವರ ಪರ ಶಾಸಕರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟ ಅಂತಿಮ ಹಂತಕ್ಕೆ ಬಂದಿದೆ.

ರಾಹುಲ್‌ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ನೀಡಿಲ್ಲವೆಂದರೆ ಸರ್ಕಾರ ನಡೆಯುವುದಿಲ್ಲ. ಅಧಿಕಾರಿಗಳು ಕೆಲಸ ಮಾಡುವುದಿಲ್ಲ. ಆಡಳಿತಯಂತ್ರ ಕೋಮಾದಲ್ಲಿದೆ ಎಂದರು.

ಸಾರ್ವಜನಿಕರು, ರೈತ ಸಮುದಾಯ, ವಿದ್ಯಾರ್ಥಿಗಳು ಎದುರಿಸುತ್ತಿರುವ ಹತ್ತಾರು ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಕಾಳಜಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಇಲ್ಲ ಎಂದರು.

ಸಿದ್ದರಾಮಯ್ಯನವರನ್ನು ಉಳಿಸಲು ಒಂದು ಗ್ಯಾಂಗ್‌, ಇಳಿಸಲು ಮತ್ತೊಂದು ಗ್ಯಾಂಗ್‌ ಕೆಲಸ ಮಾಡುತ್ತಿದೆ. ಡಿ.ಕೆ.ಶಿವಕುಮಾರ್‌ ಸಿಎಂ ಆಗಬೇಕೆಂದು ಒಂದು ತಂಡ, ಆಗಬಾರದೆಂದು ಮತ್ತೊಂದು ತಂಡ ತಂತ್ರ- ಕುತಂತ್ರ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ನಡುವೆ ಅಪರಾಧ ಕೃತ್ಯಗಳು ಹೆಚ್ಚಿವೆ. ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ರಾಜಕೀಯ ಪರಿಸ್ಥಿತಿ ಅಧೋಗತಿಗೆ ಹೋಗಿದೆ. ಇಲ್ಲಿ ಯಾರು ಮುಖ್ಯಮಂತ್ರಿ ಎಂದು ತಿಳಿಯುತ್ತಿಲ್ಲ. ರಾಹುಲ್‌ ಗಾಂಧಿ ವೀಕ್‌ ಲೀಡರ್‌ ಆಗಿದ್ದು, ಇಡೀ ರಾಜ್ಯದಲ್ಲಿ ವೀಕ್‌ ನಾಯಕತ್ವ ಎದ್ದು ಕಾಣುತ್ತಿದೆ. ಈ ಗೇಮ್‌ಗಳ ನಡುವೆ ರಾಜ್ಯದ ಜನರು ಪರಿತಪಿಸುತ್ತಿದ್ದಾರೆ. ಆದ್ದರಿಂದ ಕೂಡಲೇ ಕಾಂಗ್ರೆಸ್‌ ಹೈಕಮಾಂಡ್‌ ಸಿಎಂ ಬಗ್ಗೆ ತನ್ನ ತೀರ್ಮಾನವನ್ನು ನೀಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್‌ನ ಇಬ್ಬರು ಶಾಸಕರು ಜೈಲಲ್ಲಿದ್ದಾರೆ. ಅವರ ಮತಗಳನ್ನು ಕೇಳಲು ಡಿಕೆಶಿ ಜೈಲಿಗೆ ಹೋಗಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ಇಂತಹ ಪಾಡು ಬಂದಿರುವುದು ಶೋಚನೀಯ.

136 ಶಾಸಕರನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತಿಲ್ಲ. ವಿರೋಧ ಪಕ್ಷದ ಕಾಟ ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಹೇಳುವುದಾದರೆ, ನಮ್ಮ ವಿರೋಧ ಪಕ್ಷ ಬಲವಾಗಿದೆ ಎಂದರ್ಥ. ಸರ್ಕಾರಕ್ಕೆ ಅಂಕುಶ ಹಾಕಲು ನಾವಿದ್ದೇವೆ. ನಾವು ಅದನ್ನು ಸಮರ್ಥವಾಗಿ ಮಾಡುತ್ತಿದ್ದೇವೆ ಎಂದರು.

ಡಿ.ಕೆ.ಶಿವಕುಮಾರ್‌ ಒತ್ತಡಕ್ಕೊಳಗಾಗಿ ಮಾತಾಡುತ್ತಿದ್ದಾರೆ. ಸಿದ್ದರಾಮಯ್ಯ ವಚನಭ್ರಷ್ಟರು ಎಂದು ಅವರೇ ಪರೋಕ್ಷವಾಗಿ ಹೇಳುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ವಚನಭ್ರಷ್ಟ ಎಂಬ ಹಣೆಪಟ್ಟಿ ಸಿಗಲಿದೆ ಎಂದರು.

ರಾಜಕೀಯ

ರೈತನಿಗೆ ಜಾತಿ ನಿಂದನೆ ಆರೋಪ; ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಎಫ್‌ಐಆರ್

ರೈತನಿಗೆ ಜಾತಿ ನಿಂದನೆ ಆರೋಪ; ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಎಫ್‌ಐಆರ್

ಕೆರೆಯ ಮಣ್ಣು ಸಾಗಾಟ ಸಂಬಂಧ ರೈತರೊಬ್ಬರಿಗೆ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ (BJP MLA ) ಬಿ.ಪಿ.ಹರೀಶ್ (B.P. Harish) ವಿರುದ್ಧ ದಾವಣಗೆರೆಯ ಡಿಸಿಆರ್‌ಇ ಪೊಲೀಸ್ ಠಾಣೆಯಲ್ಲಿ

[ccc_my_favorite_select_button post_id="118506"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!