Doddaballapur Artists' Cultural Festival-2025 is the start of celebration

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರ ಕಲಾವಿದರ ಸಾಂಸ್ಕೃತಿಕ ಹಬ್ಬ-2025ಕ್ಕೆ ಸಂಭ್ರಮದ ಚಾಲನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘದ ವತಿಯಿಂದ ಮೂರು ದಿನಗಳ ಕಾಲ ನಗರದ ಡಾ.ರಾಜ್‍ಕುಮಾರ್ ಕಲಾ ಮಂದಿರದಲ್ಲಿ ನಡೆಯಲಿರುವ 70ನೇ ಕನ್ನಡ ರಾಜ್ಯೋತ್ಸವ ಹಾಗೂ ಕಲಾವಿದರ ಸಾಂಸ್ಕೃತಿಕ ಹಬ್ಬ-2025 (Artists’ Cultural Festival-2025) ಕಾರ್ಯಕ್ರಮಕ್ಕೆ ಸಂಭ್ರಮದ ಚಾಲನೆ ನೀಡಲಾಯಿತು.

ನಗರದ ವಿನಾಯಕ ನಗರದ ಕಲಾಭವನದ ಬಳಿಯಿಂದ ಡಾ.ರಾಜ್‍ಕುಮಾರ್ ಕಲಾ ಮಂದಿರದವರೆಗೆ, ಭುವನೇಶ್ವರಿ ದೇವಿಯ ಭವ್ಯ ಮೆರವಣಿಗೆ ವೀರಗಾಸೆ, ಡೊಳ್ಳು ಕುಣಿತ, ಗೊರವನ ಕುಣಿತ, ಗಾರುಡಿ ಗೊಂಬೆಗಳು, ತಮಟೆ ವಾದ್ಯ, ಮಂಗಳ ವಾದ್ಯ ಮೊದಲಾದ ಜಾನಪದ ಕಲಾ ತಂಡಗಳೊಡನೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಮೆರವಣಿಗೆಯಲ್ಲಿ ಕಲಾವಿದರ ವಿವಿಧ ವೇಷ ಭೂಷಣಗಳು ಗಮನ ಸೇಳೆದವು. ಕನ್ನಡದ ಶಾಲುಗಳನ್ನು ಧರಿಸಿ ಭಾವುಟ ಹಿಡಿದ ನೂರಾರು ಕಲಾವಿದರು ಮೆರವಣಿಗೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.

ಕಲೆಯಿಂದ ಸಾಂಸ್ಕೃತಿಕ ಬೆಸುಗೆ

ಡಾ.ರಾಜ್‍ಕುಮಾರ್ ಕಲಾ ಮಂದಿರದದಲ್ಲಿ ಸಮಾರಂಭವನ್ನು ಉದ್ಘಾಟಿಸಿದ ತಪಸೀಹಳ್ಳಿಯ ಪುಷ್ಪಾಂಡಜ ಆಶ್ರಮದ ಪೀಠಾಧ್ಯಕ್ಷ ದಿವ್ಯಜ್ಞಾನಾನಂದ ಸ್ವಾಮಿ ಮಾತನಾಡಿ, ನಮ್ಮ ಕಲೆ ಸಂಸ್ಕೃತಿಗಳ ಉಳಿವಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಪೂರಕವಾಗಿದ್ದು, ಕಲೆಯಿಂದ ಸಾಂಸ್ಕೃತಿಕ ಬೆಸುಗೆಯಾಗಲಿದೆ. ಪೌರಾಣಿಕ ಪಾತ್ರಗಳು ನಮ್ಮ ಬದುಕಿನ ಸಂವೇದನೆಯನ್ನು ಬಿಂಬಿಸುತ್ತದೆ. ಕಲೆಯಿಂದ ನಮ್ಮ ಮನಸ್ಸಿನ ದುಗುಡಗಳು ಮರೆಯಾಗಿ ಮನಸ್ಸು ಪ್ರಪುಲ್ಲವಾಗುತ್ತದೆ. ಇಂತಹ ಕಲೆಗಳಿಗೆ ಉತ್ತೇಜನ ನೀಡುವಲ್ಲಿ ನಿರತವಾಗಿರುವ ಕಲಾವಿದರ ಸಂಘದ ಕಾರ್ಯ ಹಾಗೂ ಇಂದಿನ ಸಮಾರಂಭ ಅಭಿನಂದನೀಯ ಎಂದರು.

ಜಿಲ್ಲಾ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ಕೆಂಪಣ್ಣ ಮಾತನಾಡಿ, ಇಂದಿನ ಪೀಳಿಗೆಗೆ ನಾವು ಕಲೆಯ ಬಗ್ಗೆ ಅಭಿರುಚಿ ಮೂಡಿಸಿ, ಕಲಿಸದಿದ್ದರೆ ನೈಕ ಕಲೆಗಳು ನೇಪಥ್ಯಕ್ಕೆ ಸರಿಯುತ್ತವೆ. ಈ ದಿಸೆಯಲ್ಲಿ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಕಲಾವಿದರ ಪಾತ್ರ ಮಹ್ವದ್ದಾಗಿದೆ. ಅಂತೆಯೇ ಸಮುದಾಯದ ಉತ್ತೇಜನ ಬೇಕಿದೆ. ಕಲಾವಿದರು, ಮಾಸಾಶನಕ್ಕೆ ಮಾತ್ರ ಸೀಮತವಾಗದೇ ಎಲ್ಲಾ ರೀತಿಯ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕಿದೆ ಎಂದರು.

ತಾಲೂಕು ಕಲಾವಿದರ ಸಂಘದ ಅಧ್ಯಕ್ಷ ಎನ್.ರಾಮಾಂಜಿನಪ್ಪ ಅದ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ತಾಲೂಕಿನ ಹಿರಿಯ ಕಲಾವಿದರನ್ನು ಸನ್ಮಾನಿಸಲಾಯಿತು.
ಕಾರ್ಯನಕ್ರಮದಲ್ಲಿ ಹಿರಿಯ ಕಲಾವಿದರಾದ ಶಿವರಾಜ್, ನಟ ವೀಡಾ ಸುಧೀರ್, ಕೆ.ಎನ್.ತಮ್ಮಣ್ಣ, ತಾಲೂಕು ಕಲಾವಿದರ ಸಂಘದ ಪದಾಧಿಕಾರಿಗಳು ಇದ್ದರು.

ರಾಜಕೀಯ

ದೊಡ್ಡಬಳ್ಳಾಪುರ ಜೆಡಿಎಸ್ ಕಚೇರಿಯಲ್ಲಿ ಅದ್ಧೂರಿ ಸಂಕ್ರಾತಿ ಆಚರಣೆ..

ದೊಡ್ಡಬಳ್ಳಾಪುರ ಜೆಡಿಎಸ್ ಕಚೇರಿಯಲ್ಲಿ ಅದ್ಧೂರಿ ಸಂಕ್ರಾತಿ ಆಚರಣೆ..

ಬೆಳೆದ ಬೆಳೆಗಳ ರಾಶಿ ಹಾಗೂ ರಾಸುಗಳ ಪೂಜೆಸುವ ಮಹತ್ವದ ದಿನವೇ ಸಂಕ್ರಾಂತಿ ಆಚರಣೆಯಾಗಿದೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಮುನೇಗೌಡ (B. MuneGowda)

[ccc_my_favorite_select_button post_id="118481"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!