Fishing allowed in lakes: DCM D.K. Shivakumar

ಕೆರೆಗಳಲ್ಲಿ ಮೀನುಗಾರಿಕೆಗೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕೆರೆಗಳಿಗೆ ನೀರು ತುಂಬಿಸುತ್ತಿದ್ದು, ಈ ಕೆರೆಗಳಲ್ಲಿ ಮೀನುಗಾರಿಕೆ ಮಾಡಲು ಅವಕಾಶ ಕಲ್ಪಿಸಿಕೊಡಲಿದೆ. ಮೀನುಗಾರರಿಗೆ ಅಗತ್ಯ ಪ್ರೋತ್ಸಾಹ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಶನಿವಾರ ನಡೆದ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯ ಮೇಳದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

“ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ 10 ಸಾವಿರಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸುವ ಕೆಲಸ ಮಾಡಿದ್ದೇವೆ. ಈ ಕೆರೆಗಳಿಗೆ ನೀರು ತುಂಬಿಸುವ ಪ್ರಕ್ರಿಯೆಯಲ್ಲಿ ವಿದ್ಯುತ್ ಇಲಾಖೆಗೆ 3 ಸಾವಿರ ಕೋಟಿಯಷ್ಟು ಮೊತ್ತ ಪಾವತಿಸಬೇಕಾಗಿದೆ. ಈ ಕೆರೆಗಳ ಪೈಕಿ ಸಣ್ಣ ಕೆರೆಗಳನ್ನು ಸೊಸೈಟಿಗಳಿಗೆ ಜವಾಬ್ದಾರಿ ನೀಡುತ್ತೇವೆ. ಉಳಿದ ಕೆರೆಗಳನ್ನು ಹರಾಜು ಪ್ರಕ್ರಿಯೆ ಮೂಲಕ ಮೀನುಗಾರಿಕೆ ಮಾಡಲು ಅವಕಾಶ ನೀಡಲಾಗುವುದು. ಇದನ್ನು ಬಳಸಿಕೊಂಡು ನೀವು ಮೀನುಗಾರಿಕೆ ವೃತ್ತಿ ಮಾಡಬೇಕು” ಎಂದು ತಿಳಿಸಿದರು.

ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ

ಮೀನು ಎಂದರೆ ಲಕ್ಷ್ಮಿ. ರೈತರು ಭೂಮಿಯಲ್ಲಿ ಕೃಷಿ ಮಾಡಿದರೆ, ಮೀನುಗಾರರು ನೀರಿನಲ್ಲಿ ಕೃಷಿ ಮಾಡುತ್ತೀರಿ. ನಿಮ್ಮ ಪ್ರಾಣವನ್ನು ಪಣಕ್ಕಿಟ್ಟು ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತೀರಿ. ನಿಮಗೆ ಸೂರ್ಯ, ಚಂದ್ರ ಎರಡೇ ಕಾಣುವುದು. ಉಳಿದಂತೆ ನಿಮ್ಮ ಆತ್ಮಬಲದಿಂದ ಇದನ್ನು ಮಾಡಿಕೊಂಡು ಬರುತ್ತಿದ್ದೀರಿ. ಮೀನು ಹಿಡಿಯುವುದು ಬೇರೆ, ಮಾರಾಟ ಮಾಡುವುದು ಬೇರೆ. ನಾನು ಮುಖ್ಯಮಂತ್ರಿಗಳಿಗೆ ಮಶೀರ್ ಫಿಶ್ ತೋರಿಸಿದೆ.

ನಾನು ಸಣ್ಣವನಿದ್ದಾಗ ಸಂಗಮಕ್ಕೆ ಹೋಗಿ ಮೀನು ಹಿಡಿಯುತ್ತಿದ್ದೆ. ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ. ಅದಕ್ಕೆ ಬಹಳ ತಾಳ್ಮೆ ಬೇಕು. ಈ ಮೀನು ವ್ಯವಹಾರ ಜಾತಿ ಮೇಲೆ ಇಲ್ಲ, ನೀತಿ, ಛಲ ಹಾಗೂ ಆಸಕ್ತಿ ಮೇಲಿದೆ. ಮೀನುಗಾರನಿಗೆ ನಿತ್ಯ ಮೀನು ಸಿಗುವುದಿಲ್ಲ. ಕೆಲವೊಮ್ಮೆ ವಾರವಾದರೂ ಒಂದು ಮೀನು ಸಿಗುವುದಿಲ್ಲ. ಅಂತಹ ತಾಳ್ಮೆ ವೃತ್ತಿ ನಡೆಸುತ್ತಿರುವ ನೀವು ಶ್ರಮಜೀವಿಗಳು ಎಂದು ಬಣ್ಣಿಸಿದರು.

ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ

“ನಿಮಗೆ ವಿಶ್ವ ಮೀನುಗಾರಿಕೆ ದಿನದ ಶುಭಾಶಯಗಳು. ನಿಮಗೆ ಒಳ್ಳೆಯದಾಗಲಿ. ಮುಂದಿನ ದಿನಗಳಲ್ಲಿ ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲಾಗುವುದು. ಮೀನುಗಾರಿಕೆಗೆ ಉತ್ತೇಜ ನೀಡಲು ಕಾರ್ಯಕ್ರಮ ರೂಪಿಸಲಾಗುವುದು. ನಾವು ನಿಮ್ಮ ಜೊತೆಗೆ ಇದ್ದೇವೆ” ಎಂದು ತಿಳಿಸಿದರು.

“ನೀವು ಗಂಗಾ ಪುತ್ರರು. ಇಂತಹ ಯೋಗ ಎಲ್ಲರಿಗೂ ಬರುವುದಿಲ್ಲ. ಗಂಗಾ ಪುತ್ರ ಭೀಷ್ಮನ ಪ್ರತಿಜ್ಞೆ ಎಂದರೆ ಅದಕ್ಕೆ ಆದ ಘನತೆ ಇದೆ. ನೀವು ನೀರಿನಲ್ಲಿ ಕೆಲಸ ಮಾಡಿ ಸಮಾಜಕ್ಕೆ ಸೇವೆ ಮಾಡುತ್ತಿದ್ದೀರಿ. ನಿಮ್ಮೆಲ್ಲರಿಗೂ ಒಳ್ಳೆಯದಾಗಲಿ” ಎಂದು ತಿಳಿಸಿದರು.

ರಾಜಕೀಯ

ರೈತನಿಗೆ ಜಾತಿ ನಿಂದನೆ ಆರೋಪ; ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಎಫ್‌ಐಆರ್

ರೈತನಿಗೆ ಜಾತಿ ನಿಂದನೆ ಆರೋಪ; ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಎಫ್‌ಐಆರ್

ಕೆರೆಯ ಮಣ್ಣು ಸಾಗಾಟ ಸಂಬಂಧ ರೈತರೊಬ್ಬರಿಗೆ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ (BJP MLA ) ಬಿ.ಪಿ.ಹರೀಶ್ (B.P. Harish) ವಿರುದ್ಧ ದಾವಣಗೆರೆಯ ಡಿಸಿಆರ್‌ಇ ಪೊಲೀಸ್ ಠಾಣೆಯಲ್ಲಿ

[ccc_my_favorite_select_button post_id="118506"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!