H.D. Deve Gowda elected as JDS national president, H.D. Kumaraswamy elected as state president unopposed

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್.ಡಿ. ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಹೆಚ್.ಡಿ. ಕುಮಾರಸ್ವಾಮಿ ಅವಿರೋಧ ಆಯ್ಕೆ

ಬೆಂಗಳೂರು: ಜೆಡಿಎಸ್ (JDS) ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡ (H.D. Deve Gowda) ಹಾಗೂ ರಾಜ್ಯಾಧ್ಯಕ್ಷರಾಗಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಅವಿರೋಧವಾಗಿ ಪುನರಾಯ್ಕೆ ಆಗಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಈ ಇಬ್ಬರು ನಾಯಕರ ಪುನರಾಯ್ಕೆ ಬಗ್ಗೆ ರಾಷ್ಟ್ರೀಯ ಪ್ರತಿನಿಧಿಗಳು ಒಮ್ಮತ ನಿರ್ಧಾರ ಕೈಗೊಂಡರು.

ರಾಷ್ಟ್ರ ಮಟ್ಟದಲ್ಲಿ ಪಕ್ಷ ಸಂಘಟನೆಗೆ ವಿಫುಲ ಅವಕಾಶಗಳಿವೆ. ಅದೇ ರೀತಿಯಲ್ಲಿ ಕರ್ನಾಟಕದಲ್ಲಿ ಪಕ್ಷ ಸಂಘಟನೆಯನ್ನು ಬಲಿಷ್ಠವಾಗಿ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ನೇತೃತ್ವದಲ್ಲಿಯೇ ಪಕ್ಷವನ್ನು ಸಂಘಟಿಸುವ ನಿರ್ಧಾರಕ್ಕೆ ರಾಷ್ಟ್ರೀಯ ಮಂಡಳಿ ಬಂದಿತು.

ಸಭೆಯ ಬಳಿಕ ಮಾಧ್ಯಮಗಳಿಗೆ ಈ ಬಗ್ಗೆ ವಿವರಗಳನ್ನು ನೀಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಅವರು; ರಾಜ್ಯದ ಏಕೈಕ ಪ್ರಾದೇಶಿಕ ಪಕ್ಷ ಜೆಡಿಎಸ್ ಆಗಿದ್ದು, ಪಕ್ಷಕ್ಕೆ ಈಗ 25 ವರ್ಷ ತುಂಬಿದೆ. ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಅವಿರತ ಶ್ರಮದಿಂದ ಪಕ್ಷ ಇವತ್ತಿಗೂ ಗಟ್ಟಿಯಾಗಿ ಉಳಿದಿದೆ. ಅಸಂಖ್ಯಾತ ಕಾರ್ಯಕರ್ತ ಪಡೆಯನ್ನು ಹೊಂದಿದೆ.

ದೇವೇಗೌಡರು ಪಕ್ಷವನ್ನು ಕಟ್ಟಿ ಬೆಳೆಸಿ, ತಮ್ಮ ಬದುಕನ್ನೇ ಪಕ್ಷಕ್ಕೆ ಮೀಸಲು ಇರಿಸಿದ್ದಾರೆ. ಬೆಳ್ಳಿಹಬ್ಬದ ಸಂದರ್ಭದಲ್ಲಿ ಈ ಇಬ್ಬರು ಬಲಿಷ್ಠ ನಾಯಕರೇ ಪಕ್ಷವನ್ನು ಮುನ್ನಡೆಸಬೇಕು ಎಂದು ರಾಷ್ಟ್ರೀಯ ಮಂಡಳಿ ತೀರ್ಮಾನಿಸಿತು ಎಂದು ಅವರು ಹೇಳಿದರು.

ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯದ ಉದ್ದಗಲಕ್ಕೂ ಕೈಗೊಂಡಿರುವ ಸಂಘಟನಾ ಪ್ರವಾಸ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ ಯಶಸ್ವಿಯಾಗಿ ಮುಂದುವರಿದ್ದು, ಇದಕ್ಕೆ ಸಭೆಯಲ್ಲಿ ಮೆಚ್ಚಿಗೆ ದೊರೆತಿದೆ. ಎಲ್ಲಾ ನಾಯಕರು ಅವರ ಸಂಘಟನಾ ಶಕ್ತಿಯ ಬಗ್ಗೆ ಶ್ಲಾಘನೆ ಮಾಡಿದರು ಎಂದು ಸುರೇಶ್ ಬಾಬು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಎರಡು ಪ್ರಮುಖ ನಿರ್ಣಯ ಅಂಗೀಕಾರ

ಜೆಡಿಎಸ್ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ರೈತರ ಪರವಾಗಿ ಹಾಗೂ ಪಕ್ಷ ಸಂಘಟನೆ ಮಾಡುವ ಬಗ್ಗೆ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಈ ನಿರ್ಣಯಗಳಿಗೆ ಶನಿವಾರ ನಡೆಯಲಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಅಂಗೀಕಾರ ಪಡೆಯಲಾಗುವುದು ಎಂದು ಸುರೇಶ್ ಬಾಬು ಅವರು ಹೇಳಿದರು.

ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪುರ್, ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ್, ಹೆಚ್.ಎಂ. ರಮೇಶ್ ಗೌಡ, ಜೆಡಿಎಸ್ ಐಟಿ ವಿಭಾಗದ ಅಧ್ಯಕ್ಷ ಚಂದನ್ ಸೇರಿದಂತೆ ಅನೇಕ ಮುಖಂಡರು ಉಪಸ್ತಿತರಿದ್ದರು.

ರಾಜಕೀಯ

ರೈತನಿಗೆ ಜಾತಿ ನಿಂದನೆ ಆರೋಪ; ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಎಫ್‌ಐಆರ್

ರೈತನಿಗೆ ಜಾತಿ ನಿಂದನೆ ಆರೋಪ; ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಎಫ್‌ಐಆರ್

ಕೆರೆಯ ಮಣ್ಣು ಸಾಗಾಟ ಸಂಬಂಧ ರೈತರೊಬ್ಬರಿಗೆ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ (BJP MLA ) ಬಿ.ಪಿ.ಹರೀಶ್ (B.P. Harish) ವಿರುದ್ಧ ದಾವಣಗೆರೆಯ ಡಿಸಿಆರ್‌ಇ ಪೊಲೀಸ್ ಠಾಣೆಯಲ್ಲಿ

[ccc_my_favorite_select_button post_id="118506"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!