Kannada Rajyotsava celebrations in Kuntanahalli

ಕುಂಟನಹಳ್ಳಿಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಸಂಭ್ರಮ: 22 ದೇವತಾ ಮೂರ್ತಿಗಳ ಅದ್ಧೂರಿ ಪೂಜಾ ಉತ್ಸವ

ದೊಡ್ಡಬಳ್ಳಾಪುರ: ತಾಲೂಕಿನ ಕುಂಟನಹಳ್ಳಿಯಲ್ಲಿ (Kuntanahalli) 70ನೇ ಕನ್ನಡ ರಾಜ್ಯೋತ್ಸವ ಹಾಗೂ 22 ದೇವತಾ ಮೂರ್ತಿಗಳ ಪೂಜಾ ಉತ್ಸವ ಸಂಭ್ರಮದಿಂದ ನಡೆಯಿತು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಗ್ರಾಮದಲ್ಲಿ ಕನ್ನಡ ಧ್ವಜಗಳು, ತೋರಣಗಳಿಂದ ಸಿಂಗರಿಸಲಾಗಿತ್ತು.

ಧ್ವಜಾರೋಹಣ ನೆರವೇರಿಸಿದ ಗ್ರಾಮಸ್ಥರು, ಗ್ರಾಮದ ಆಂಜನೇಯಸ್ವಾಮಿ ದೇವಾಲಯದಲ್ಲಿ ತಳಿರು ತೋರಣ, ದೀಪಾಲಂಕಾರ ಮಾಡಿದ್ದರು.

ದೇವಾಲಯದ ಆವರಣದಲ್ಲಿ ಇದೇ ಪ್ರಥಮ ಬಾರಿಗೆ 22 ದೇವತಾ ಮೂರ್ತಿಗಳನ್ನು ವಿವಿದೆಡೆಗಳಿಂದ ಕರೆತಂದು ಕೂರಿಸಿ, ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿದರು.

22 ದೇವತಾ ಮೂರ್ತಿಗಳು

ಭೈರವೇಶ್ವರ (ಕೂಗೋನಹಳ್ಳಿ), ಆಂಜನೇಯ (ಕುಂಟನಹಳ್ಳಿ), ಆಂಜನೇಯ (ಬೋಮ್ಮನಹಳ್ಳಿ). ಮುನೇಶ್ವರ (ನಾಗೇನಹಳ್ಳಿ). ತಿಮ್ಮರಾಯಸ್ವಾಮಿ (ಅದ್ದೆ). ಮಾದೇಶ್ವರ (ಮೆಣಸಿ), ಚೆನ್ನಕೇಶವಸ್ವಾಮಿ (ಕಾಡನೂರು), ಭೈರವೇಶ್ವರ (ಬಿದನೂರು), ಶ್ರೀ ರಾಮ (ತಳಗ ವಾರ), ವೆಂಕಟರಮಣ (ಅಣಗಲಪುರ), ಶನಿಮಹಾತ್ಮ (ಹೊನ್ನಾಘಟ್ಟ), ಅಕ್ಕಮ್ಮ (ಹೊನ್ನಾಘಟ್ಟ), ಕೆಂಪಮ್ಮ. (ಬ್ಯಾಡಹಳ್ಳಿ), ದೊಡ್ಡಮ್ಮ (ದೊಡ್ಡಬಳ್ಳಾಪುರ ), ಮುತ್ಯಾಲಮ್ಮ (ದೊಡ್ಡಬಳ್ಳಾಪುರ) , ಲಕ್ಷ್ಮಿ (ಗೊರವನಹಳ್ಳಿ ), ಮಹೇಶ್ವರಮ್ಮ (ನೇರಳಘಟ್ಟ), ಲಕ್ಷ್ಮಿಕರಗದಮ್ಮ (ಸೊಮಶೆಟ್ಟಿಹಳ್ಳಿ), ಲಕ್ಷ್ಮಿ ನರಸಿಂಹ (ಲಿಂಗಾಪುರ), ಚನ್ನಕೇಶವ (ಆವತಿ), ಮೈಲಾರಲಿಂಗ (ದೊಡ್ಡಬಳ್ಳಾಪುರ) , ಪಟೇಲಮ್ಮ (ಅದ್ದಿಗಾನಹಳ್ಳಿ)ದೇವಾತಾ ಮೂರ್ತಿಗಳನ್ನು ಕೂರಿಸಲಾಗಿತ್ತು.

ಕಳಸಗಳನ್ನು ಹಿಡಿದ ನೂರಾರು ಮಹಿಳೆಯರು ಗ್ರಾಮದಲ್ಲಿ ಮೆರವಣಿಗೆ ಮೂಲಕ ಆಗಮಿಸಿ, ದೇವತಾ ಮೂರ್ತಿಗಳಿಗೆ ಪೂಜೆ ಸಲ್ಲಿಸಿದರು.

ನಾಡು ನುಡಿಗಳ ಬಗ್ಗೆ ಅಭಿಮಾನ ಮೂಡಿಸುವ ದಿಸೆಯಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಗ್ರಾಮದ ಒಳಿತಿಗೆ ದೇವತಾ ಮೂರ್ತಿಗಳಿಗೆ ಪೂಜಾ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗಿದೆ.

ಈ ಹಿಂದೆ ಗ್ರಾಮದಲ್ಲಿ 11 ದೇವತಾ ಮೂರ್ತಿಗಳನ್ನು ಕೂರಿಸಲಾಗಿತ್ತು. ಈಗ 22 ದೇವತಾ ಮೂರ್ತಿಗಳಿಗೆ ಪೂಜೆ ಸಲ್ಲಿಸಲಾಗುತ್ತಿದೆ. ಲೋಕ ಕಲ್ಯಾಣ, ಸಹಬಾಳ್ವೆ, ಸಾಮರಸ್ಯದ ಜೀವನಕ್ಕೆ ಇಂತಹ ಉತ್ಸಾಹಗಳು ಪೂರಕವಾಗಿವೆ ಎಂದು ಗ್ರಾಮದ ಹಿರಿಯರಾದ ರಘು, ಕುಂಟನಹಳ್ಳಿ ಮಂಜುನಾಥ್, ಮುರುಳಿ ತಿಳಿಸಿದರು.

ರಾಜಕೀಯ

ರೈತನಿಗೆ ಜಾತಿ ನಿಂದನೆ ಆರೋಪ; ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಎಫ್‌ಐಆರ್

ರೈತನಿಗೆ ಜಾತಿ ನಿಂದನೆ ಆರೋಪ; ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಎಫ್‌ಐಆರ್

ಕೆರೆಯ ಮಣ್ಣು ಸಾಗಾಟ ಸಂಬಂಧ ರೈತರೊಬ್ಬರಿಗೆ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ (BJP MLA ) ಬಿ.ಪಿ.ಹರೀಶ್ (B.P. Harish) ವಿರುದ್ಧ ದಾವಣಗೆರೆಯ ಡಿಸಿಆರ್‌ಇ ಪೊಲೀಸ್ ಠಾಣೆಯಲ್ಲಿ

[ccc_my_favorite_select_button post_id="118506"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!