ಒಬ್ಬರಿಗೊಬ್ಬರಿಗೆ ತಂದಾಕಿ ಮನೆಹಾಳು ಕೆಲಸ ಮಾಡ್ತಾ ಇದ್ದೀರಿ; ಗೋದಿ ಮೀಡಿಯಾಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

A defamation suit is inevitable if the news is distorted; D.K. Sivakumar Warning

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಡವಲು ಬಿಜೆಪಿ ಬೆಂಬಲಿತ ಕೆಲ ನ್ಯೂಸ್ ಚಾನಲ್‌ಗಳು (News channels) ಸಿಎಂ ಸಿದ್ದರಾಮಯ್ಯ (Cmsiddaramaiah) ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ನಡುವೆ ವೈಷಮ್ಯ ಉಂಟುಮಾಡಲು ಪದೇ ಪದೇ ಷಡ್ಯಂತ್ರ ನಡೆಸುತ್ತಿವೆ ಎಂಬುದು ಕಾಂಗ್ರೆಸ್ ವಲಯದ ಆಕ್ರೋಶವಾಗಿದೆ.

ಇದರ ಬೆನ್ನಲ್ಲೇ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಸಂಜೆ ವಿಧಾನಸೌಧದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ನ್ಯೂಸ್ ಚಾನಲ್ ವರದಿಗಾರ, “ನೀವು ಅಮಿತ್ ಶಾ ಅವರ ಜತೆ ಸಂಪರ್ಕದಲ್ಲಿ ಇದ್ದೀರಿ ಎಂದು ಹೆಚ್.ಡಿ. ಕುಮಾರಸ್ವಾಮಿ ಅವರು ಆಪಾದನೆ ಮಾಡಿದ್ದಾರೆ” ಎಂದು ಹೇಳಿದರು.

ಇದಕ್ಕೆ ಡಿಸಿಎಂ ಅವರು ಪ್ರತಿಕ್ರಿಯೆ ನೀಡಿದರು.

ನಂತರ ಡಿ.ಕೆ. ಶಿವಕುಮಾರ್ ಅವರ ತಂಡ ಪರಿಶೀಲಿಸಿದಾಗ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆ ರೀತಿ ಹೇಳಿಯೇ ಇಲ್ಲ ಎಂಬುದು ತಿಳಿದುಬಂದಿದೆ.

ಸಂಜೆ ಮಾಧ್ಯಮದವರು ಪ್ರಶ್ನೆ ಕೇಳುವಾಗ ಈ ರೀತಿಯ ತಪ್ಪು ಮಾಹಿತಿಯನ್ನು ನೀಡಿ, ಪ್ರತಿಕ್ರಿಯೆ ಪಡೆದಿರುವ ಬಗ್ಗೆ ಡಿ.ಕೆ. ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುಳ್ಳು ಸುಳ್ಳೇ ಮಾಹಿತಿ ಸೃಷ್ಟಿ ಮಾಡಿ, ಸುಳ್ಳು ಪ್ರಶ್ನೆ ಕೇಳಿ ತಂದಿಕ್ಕುವ ಕೆಲಸ ಮಾಡಬಾರದು. ಇದರಿಂದ ಮಾಧ್ಯಮಗಳ ಗೌರವ, ಘನತೆ, ನಂಬಿಕೆಗೆ ಧಕ್ಕೆ ಆಗುತ್ತದೆ.

ಕುಮಾರಸ್ವಾಮಿ ಹೇಳದೇ ಇರೋದನ್ನ ಅವರು ಹೇಳಿದ್ದಾರೆ ಎಂದು ಸುಳ್ಳು ಹೇಳಿ ಪ್ರತಿಕ್ರಿಯೆ ಏಕೆ ಪಡೆಯುತ್ತೀರಿ. ಒಬ್ಬರಿಗೊಬ್ಬರಿಗೆ ತಂದಾಕಿ ಮನೆಹಾಳು ಕೆಲಸ ಮಾಡ್ತಾ ಇದ್ದೀರಿ ನೀವು.

ಮಹತ್ವದ ಕ್ರಾಂತಿ ಅಂತ ಹೇಳಿರಬಹುದು, ಅದ್ ರಾಜಕೀಯವಾಗಿ ಮಾತಾಡಿರಬಹುದು. ಆದರೆ ನೀವು ಹೇಳಿದ್ದೇನು ನನಗೆ..? ಕುಮಾರಸ್ವಾಮಿ ಅವರು, ನೀವು ಅಮಿತ್ ಶಾ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ ಎಂದ್ರಿ, ಯಾವ ದಾಖಲೆ ಮೇಲೆ ಹೇಳುದ್ರಿ..? ಅವರು ಹೇಳಿದ್ದಾರೆ ಎಂದಿದಕ್ಕೆ ಮಾನನಷ್ಟ ಮೊಕದ್ದಮೆ ಹಾಕುವೆ ಎಂದು ಹೇಳಿದೆ.

ಅವರು ಹೇಳ್ದೆ ಇದ್ದರೂ ನನಗೆ ಲಿಂಕ್ ಮಾಡ್ತಾ ಇದ್ದೀರಾ, ನೀವೇ ಸೃಷ್ಟಿ ಮಾಡ್ತಾ ಇದ್ದೀರಾ.. ಆಮೇಲೆ ನೋಡುದ್ರೆ ವಿಜಯೇಂದ್ರನ ಹೆಸರು ಹೇಳ್ತಾ ಇದ್ದೀರಾ. ಈ ಕೆಲಸಕ್ಕೆ ಹೋಗಿ ನಿಮ್ಮ ರೆಪಿಟೇಷನ್ ಹಾಳು ಮಾಡಿಕೊಂಡು ನೀವು ಹಾಳಾಗೋದಲ್ಲದೆ, ನಮ್ಮನ್ನೂ ಹಾಳುಮಾಡಬೇಡಿ.

ನಾವು 45 ವರ್ಷ ರಾಜಕಾರಣ ಮಾಡಿಕೊಂಡು ಇಲ್ಲಿವರೆಗೆ ಬದುಕಿದ್ದೇವೆ. ಯಾರಾದ್ರೂ ಹೆಚ್ಚು ಕಡಿಮೆ ಮಾಡಿದರೆ ಯಾವ ಟಿವಿಯನ್ನು ಸುಮ್ಮನೇ ಬಿಡಲ್ಲ, ಬೆನ್ನತ್ತಿ ಬಿಡುತ್ತೇನೆ ಹಿಂದೆ TV 9ಗೆ ಬೆನ್ನತ್ತಿದ್ದಂತೆ ಎಂದು ವಾರ್ನಿಂಗ್ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!