ಸಿಎಂ ಕುರ್ಚಿಗಾಗಿ ಕಾದಾಟ, ರೈತರ ಸಮಸ್ಯೆ ಕೇಳುವವರಿಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

Fight for CM's chair, no one listens to farmers' problems: R. Ashoka

ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿ ಕಾದಾಟ ನಡೆಯುತ್ತಿರುವುದರಿಂದ ರೈತರ ಸಮಸ್ಯೆಗಳ ಬಗ್ಗೆ ಸರ್ಕಾರ ಗಮನಹರಿಸುತ್ತಿಲ್ಲ. ಸರ್ಕಾರದ ರೈತರ ವಿರೋಧಿ ನಿಲುವಿನ ವಿರುದ್ಧ ಬಿಜೆಪಿ ರೈತ ಮೋರ್ಚಾ ವತಿಯಿಂದ ಹೋರಾಟ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಜಲಾಶಯ ದುರಸ್ತಿ ಮಾಡದೆ ಎಲ್ಲ ನೀರು ಕರ್ನಾಟಕದಿಂದ ಹೊರಗೆ ಹೋಗಿದೆ. ಮೆಕ್ಕೆಜೋಳ ಕೇಂದ್ರ ಖರೀದಿ ಇನ್ನೂ ಆರಂಭಿಸಿಲ್ಲ. ಹಾಲಿನ ಪ್ರೋತ್ಸಾಹಧನ ಬಾಕಿ ಉಳಿದಿದೆ. ಹೀಗೆ ರೈತರ ಎಲ್ಲ ಸಮಸ್ಯೆಗಳನ್ನು ಗಮನದಲ್ಲಿರಿಸಿಕೊಂಡು ಬಿಜೆಪಿ ರೈತ ಮೋರ್ಚಾ ವತಿಯಿಂದ ಎಲ್ಲ ಜಿಲ್ಲೆಗಳಲ್ಲಿ ಹೋರಾಟ ಮಾಡಲಾಗುತ್ತಿದೆ.

ಕಳೆದ ಆರು ತಿಂಗಳಿಂದ ಮುಖ್ಯಮಂತ್ರಿ ಕುರ್ಚಿಗಾಗಿ ಕಾದಾಟ ನಡೆಯುತ್ತಿದೆ. ಯಾರು ಸಿಎಂ ಎಂದು ಯಾರಿಗೂ ತಿಳಿದಿಲ್ಲ. ಶಾಸಕರ ಖರೀದಿ ಆರಂಭವಾಗಿದೆ. ಇವೆಲ್ಲವುಗಳ ನಡುವೆ ಒಬ್ಬರೇ ಒಬ್ಬ ಸಚಿವರು ರೈತರ ಸಮಸ್ಯೆಯನ್ನು ಆಲಿಸುತ್ತಿಲ್ಲ ಎಂದರು.

ಕೇಂದ್ರ ಸರ್ಕಾರದಿಂದ ಬೆಳೆ ಹಾನಿ ಪರಿಹಾರ ನೀಡಲಾಗಿದೆ. ಬಿಜೆಪಿ ಅವಧಿಯಲ್ಲಿ ಮೂರು ಪಟ್ಟು ಅಧಿಕ ಪರಿಹಾರ ನೀಡಲಾಗಿತ್ತು. ಆದರೆ ಕಾಂಗ್ರೆಸ್‌ ಸರ್ಕಾರ ಇನ್ನೂ ಪರಿಹಾರ ನೀಡಿಲ್ಲ. ರೈತರ ವಿರೋಧಿ ಸರ್ಕಾರದ ವಿರುದ್ಧ ನವೆಂಬರ್‌ 27, 28 ರಂದು ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಹಾಗೂ ಡಿಸೆಂಬರ್‌ 1, 2 ರಂದು ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ ಮಾಡಲಾಗುತ್ತಿದೆ ಎಂದರು.

ಡಿ.ಕೆ.ಶಿವಕುಮಾರ್‌ ಜೊತೆ ಹತ್ತು ಹನ್ನೆರಡು ಶಾಸಕರಿದ್ದರು ಎಂದು ಮಾಧ್ಯಮಗಳಲ್ಲಿ ವರದಿ ಬಂದಿತ್ತು. ದಿಢೀರನೆ ಆ ಸಂಖ್ಯೆ ಎಪ್ಪತ್ತಾಗಿದೆ. ಅಂದರೆ ಶಾಸಕರ ಖರೀದಿ ನಡೆದಿರಬಹುದು. ಜೈಲಿನಲ್ಲಿರುವ ಶಾಸಕರ ಸಹಿ ಪಡೆಯಲು ಕೂಡ ಹೋಗಿದ್ದಾರೆ. ಇದೆನ್ನೆಲ್ಲ ನೋಡಿ ಸಿದ್ದರಾಮಯ್ಯ ಬೇಸರಗೊಂಡಿದ್ದಾರೆ. ಐದು ವರ್ಷ ನಾನೇ ಸಿಎಂ ಎನ್ನುತ್ತಿದ್ದವರು ಈಗ ಹೈಕಮಾಂಡ್‌ ಹೇಳಿದಂತೆ ಕೇಳಬೇಕು ಎಂದು ಮಾತು ಬದಲಿಸಿದ್ದಾರೆ ಎಂದರು.

ಮಲ್ಲಿಕಾರ್ಜುನ ಖರ್ಗೆ ಪಕ್ಷದ ಅಧ್ಯಕ್ಷರಾದರೂ ಅವರಿಗೆ ಯಾವುದೇ ಅಧಿಕಾರವಿಲ್ಲ. ಅವರು ಹೆಸರಿಗೆ ಮಾತ್ರ ಅಧ್ಯಕ್ಷರು. ಆದ್ದರಿಂದಲೇ ಏನೂ ಗೊತ್ತಿಲ್ಲ ಎಂದು ಹೇಳುತ್ತಿದ್ದಾರೆ. ಬಿಹಾರ ಚುನಾವಣೆ ಬಳಿಕ ಸರ್ಕಾರ ಸಂಪೂರ್ಣ ದುರ್ಬಲವಾಗಿದೆ. ಬಿಜೆಪಿ ಮರು ಚುನಾವಣೆಯನ್ನು ನಿರೀಕ್ಷೆ ಮಾಡುತ್ತಿದೆ. ಒಂದು ವೇಳೆ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ ದೊರೆಯಲಿದೆ ಎಂದರು.

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!